ತುಮಕೂರು-ಅಮಲು ಬರುವ ಔಷದಿ-ಮಾತ್ರೆಗಳನ್ನು ಮಾರಾಟ ಮಾಡುವಲ್ಲಿ ಸಾಕಷ್ಟು ಬಿಗಿ ಕ್ರಮಗಳನ್ನು ಕೈಗೊಳ್ಳಲು ತುಮಕೂರು ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಂಘದ ನೂತನ ಜಿಲ್ಲಾಧ್ಯಕ್ಷರಾದ ಎನ್ ಎಸ್ ಪಂಡಿತ್ ಜವಾಹರ್ ಮಾಹಿತಿ ನೀಡಿದ್ದಾರೆ.
ನಗರದಲ್ಲಿ ಇತ್ತೀಚಿಗೆ ಹಮ್ಮಿಕೊಳಲಾಗಿದ್ದ ತುಮಕೂರು ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದ ನೂತನ ಪಧಾದಿಕಾರಿಗಳ ಆಯ್ಕೆಯ ಸರ್ವಸದಸ್ಯರ ಸಭೆಯನ್ನು ಶಾಸಕ ಜ್ಯೋತಿ ಗಣೇಶ್ ಉದ್ಘಾಟಿಸಿದರು.
ವಿಜಯಕುಮಾರ್ ಕಾರ್ಯದರ್ಶಿಯಾಗಿ, ಮಹೇಂದ್ರ ಕುಮಾರ್ ಖಜಾಂಚಿಯಾಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
ಈ ಸಭೆಯಲ್ಲಿ ಡಿಸ್ಕೌಂಟ್,ವ್ಯಾಪಾರವನ್ನು ಕೊನೆಗೊಳಿಸಬೇಕೆಂದು ಔಷದ ನಿಯಂತ್ರಣ ಇಲಾಖೆಗೆ ಮನವಿ ಸಲ್ಲಿಸುವುದೆಂದು ತೀರ್ಮಾನಿಸಲಾಯಿತು.