ಕೃಷ್ಣರಾಜಪೇಟೆ-ಪಟ್ಟಣದ ಹೊರವಲಯದ ಹೇಮಗಿರಿ ರಸ್ತೆಯಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಾಲಯದಲ್ಲಿ ಶರನ್ನವರಾತ್ರಿಯ ಅಂಗವಾಗಿ ಇಂದು ಅಮ್ಮನವರ ಶಿಲಾ ಮೂರ್ತಿಯನ್ನು ವಿಶೇಷವಾಗಿ ಭಸ್ಮದಿಂದ ಅಲಂಕಾರ ಮಾಡಲಾಗಿತ್ತು.
ನವರಾತ್ರಿಯ 9 ದಿನಗಳೂ ಶ್ರೀ ಚೌಡೇಶ್ವರಿ ಅಮ್ಮನವರ ಶಿಲಾ ಮೂರ್ತಿಯನ್ನು 09 ಬಗೆಯ ವಿವಿಧ ವಿಶೇಷ ಅಲಂಕಾರ ಮಾಡಿ ಪೂಜೆ ಸಲ್ಲಿಸಿ ಲೋಕಕಲ್ಯಾಣಕ್ಕೆ ಪ್ರಾರ್ಥನೆ ನಡೆಸಿ ಪ್ರಸಾದ ವಿನಿಯೋಗ ಮಾಡಲಾಗುವುದು ಎಂದು ದೇವಾಲಯದ ಪ್ರಧಾನ ಅರ್ಚಕರಾದ ವೇದಬ್ರಹ್ಮ ಶ್ರೀ ರವಿಶಾಸ್ತ್ರಿ ತಿಳಿಸಿದರು.
ವಿಜದಶಮಿಯಂದು ವಿಶೇಷ ವಾಗಿ ದೇವಾಲಯದಲ್ಲಿ ಚಂಡಿಕಾ ಹೋಮ, ಅಭಿಷೇಕ ಹಾಗೂ ಪೂಜೆ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತಾಯಿ ಶ್ರೀ ಚೌಡೇಶ್ವರಿ ಅಮ್ಮನವರ ಕೃಪಾಶೀರ್ವಾದಕ್ಕೆ ಪಾತ್ರರಾಗಬೇಕು ಎಂದು ಅವರು ಮನವಿ ಮಾಡಿದರು.
—-ಡಾ.ಕೆ.ಆರ್.ನೀಲಕಂಠ