ಮೈಸೂರು-ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಮುಖ್ಯಮಂತ್ರಿಯವರಾದ ಸಿದ್ದರಾಮಯ್ಯ ಅವರ ಉಪಸ್ಥಿತಿಯಲ್ಲಿ ನಾಡೋಜ ಡಾ. ಹಂಪ ನಾಗರಾಜಯ್ಯ ಅವರು ಚಾಮುಂಡೇಶ್ವರಿ ದೇವಿಯ ಉತ್ಸವಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿದರು.
ಈ ಮೂಲಕ ದಸರಾ-2024 ರ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ ದೊರಕಿತು.ಇಂದಿನಿಂದ ಒಂಬತ್ತು ದಿನಗಳ ಕಾಲ ಮೈಸೂರಿನಲ್ಲಿ ಹತ್ತು ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ನಮ್ಮ ಸಂಸ್ಕೃತಿ, ಪರಂಪರೆ,ಇತಿಹಾಸ ಬಿಂಬಿತವಾಗಲಿದೆ.
ಈ ಉದ್ಘಾಟನಾ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು, ಸಚಿವರುಗಳಾದ ಡಾ. ಹೆಚ್.ಸಿ.ಮಹದೇವಪ್ಪ ಅವರು,ಪಿರಿಯಾಪಟ್ಟಣ ವೆಂಕಟೇಶ್ , ಕೆ.ಎಚ್.ಮುನಿಯಪ್ಪ , ಎಚ್.ಕೆ.ಪಾಟೀಲ್ ಅವರು, ಶಿವರಾಜ ಎಸ್.ತಂಗಡಗಿ , ಶಾಸಕರಾದ ಜಿ.ಟಿ.ದೇವೇಗೌಡ , ತನ್ವೀರ್ ಸೇಠ್ ಅವರು, ಟಿ.ಎಸ್.ಶ್ರೀವತ್ಸ, ರಮೇಶ್ ಬಂಡಿಸಿದ್ದೇಗೌಡ ,ಡಿ.ರವಿಶಂಕರ್ ಅವರು, ಎ.ಆರ್.ಕೃಷ್ಣಮೂರ್ತಿ ,ಅನಿಲ್ ಚಿಕ್ಕಮಾದು,ಜಿ.ಡಿ.ಹರೀಶ್ ಗೌಡ ,ದರ್ಶನ್ ಧ್ರುವನಾರಾಯಣ್,
ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ,ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ.ಪುಷ್ಪ ಅಮರನಾಥ್,ಮುಡಾ ಅಧ್ಯಕ್ಷ ಕೆ.ಮರಿಗೌಡ,ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್,ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ,ಅಪರ ಜಿಲ್ಲಾಧಿಕಾರಿ ಪಿ.ಶಿವರಾಜು ,ಜಿ.ಪಂ ಸಿಇಒ ಕೆ.ಎಂ.ಗಾಯಿತ್ರಿ, ಮುಡಾ ಆಯುಕ್ತ ರಘುನಂದನ್, ಪಾಲಿಕೆ ಆಯುಕ್ತ ಅಸಾದ್ ಉರ್ ರೆಹಮಾನ್ ಷರೀಫ್, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್,ಎಸ ಪಿ ಎನ್.ವಿಷ್ಣುವರ್ಧನ್ ಅವರು ಸೇರಿದಂತೆ ಹಲವಾರು ಅಧಿಕಾರಿಗಳು ಉಪಸ್ಥಿತರಿದ್ದರು.
———————––ಮಧುಕುಮಾರ್