ಕೆ.ಆರ್.ಪೇಟೆ:ದುಷ್ಟಶಕ್ತಿಗಳಿಗೆ ಸಿಂಹಸ್ವಪ್ನವಾಗಿ ತನ್ನ ಭಕ್ತರನ್ನು ಪ್ರೀತಿಯಿಂದ ಸಲಹುವ ಚಂದ್ರಘಂಟಾ ದೇವಿ ಸರ್ವರ ಇಷ್ಟಾರ್ಥಗಳನ್ನು ಈಡೇರಿಸಲಿ

ಕೆ.ಆರ್.ಪೇಟೆ: ದುಷ್ಟಶಕ್ತಿಗಳಿಗೆ ಸಿಂಹಸ್ವಪ್ನವಾಗಿ ತನ್ನ ಭಕ್ತರನ್ನು ಪ್ರೀತಿಯಿಂದ ಸಲಹುವ ಚಂದ್ರಘಂಟಾ ದೇವಿ ಸರ್ವರ ಇಷ್ಟಾರ್ಥಗಳನ್ನು ಈಡೇರಿಸಲಿ ಎಂದು ದೇವಿಯಲ್ಲಿ ಪ್ರಾರ್ಥಿಸಿರುವುದಾಗಿ ಹೇಮಗಿರಿ ಬಿ.ಜಿ.ಎಸ್ ಶಾಖಾ ಮಠದ ಪ್ರಧಾನ ಕಾರ್ಯದರ್ಶಿಗಳಾದ ಡಾ:ಜೆ.ಎನ್ ರಾಮಕೃಷ್ಣೇಗೌಡರು ತಿಳಿಸಿದರು.

ಪಟ್ಟಣದಲ್ಲಿರುವ ಬಿ.ಜಿ.ಎಸ್ ಎಜುಕೇಶನ್ ಸೆಂಟರ್ ಶಾಲೆಯಲ್ಲಿ ನವರಾತ್ರಿಯ 3ನೇ ದಿನದ ಅಂಗವಾಗಿ ಶ್ರೀ ಚಂದ್ರಘಂಟಾ ದೇವಿ ಪ್ರತಿಷ್ಠಾಪಿಸಿ ನಡೆದ ವಿಶೇಷ ಪೂಜೆ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದರು.

ಇಂದಿನ ಒತ್ತಡದ ಬದುಕಿನಲ್ಲಿ ಜೀವನ ನಡೆಸುತ್ತಿರುವ ನಾವುಗಳು ಮನಸ್ಸಿಗೆ ಶಾಂತಿ ಮತ್ತು ನೆಮ್ಮದಿಯನ್ನು ಕಾಣಬೇಕೆಂದರೆ ದೇವರುಗಳ ಮೊರೆ ಹೋಗುವುದು ಅನಿವಾರ್ಯವಾಗಿದೆ. ನವರಾತ್ರಿ ಹಿಂದೂ ಧರ್ಮದ ಪ್ರಮುಖ ಹಬ್ಬ.ಇದನ್ನು ಕರ್ನಾಟಕದಲ್ಲಿ ದಸರ ಎಂದು ಕರೆಯುತ್ತಾರೆ.ನವರಾತ್ರಿಯೆಂದರೆ ಒಂಬತ್ತು ರಾತ್ರಿಗಳಲ್ಲಿ ಶ್ರೀ ಚಾಮುಂಡೇಶ್ವರಿಯ ದೇವಿ ಒಂಬತ್ತು ವಿಧದ ರೂಪಗಳನ್ನು ಆರಾಧಿಸಲಾಗುತ್ತದೆ. ಹತ್ತನೇಯ ದಿನ, ವಿಜಯ ದಶಮಿ ದಿನ ಶಮಿವೃಕ್ಷಕ್ಕೆ ಪೂಜೆಯನ್ನು ಸಲ್ಲಿಸಿ ಶಮಿಯನ್ನು ವಿನಿಯೋಗ ಮಾಡುವುದು ಕರ್ನಾಟಕದ ಆಚರಣೆಯ ಪದ್ಧತಿ. ಚಿನ್ನದ ಅಂಬಾರಿಯಲ್ಲಿ ಚಾಮುಂಡೇಶ್ವರಿಯ ಮೂರ್ತಿಯ ಮೆರವಣಿಗೆಯು ಮೈಸೂರಿನಲ್ಲಿ ನಡೆಯುತ್ತದೆ ಎಂದರು.

ನಾಡಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿ ತಾಯಿಯ ಮೂರ್ತಿಗೆ ಹಾಗೂ ಜಗದ್ಗುರು ಶ್ರೀ ಬಾಲಗಂಗಾಧರನಾಥ ಸ್ವಾಮಿ ಅವರ ಪುತ್ತಳಿಗೂ ಅಭಿಷೇಕ ನೆರವೇರಿಸಿದರು.ಲೋಕ ಕಲ್ಯಾಣಕ್ಕಾಗಿ ಹೋಮ – ಹವನಗಳನ್ನು ನಡೆಸುವ ಮೂಲಕ ವಿಶೇಷ ಪೂಜೆ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಜೆಡಿಎಸ್ ಅಧ್ಯಕ್ಷ ಎ. ಎನ್ ಜಾನಕಿರಾಮ್, ಮನ್ಮುಲ್ ನಿರ್ದೇಶಕ ಡಾಲು ರವಿ,ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪತ್ರಾಂಕಿತ ವ್ಯವಸ್ಥಾಪಕ ಬಳ್ಳೆಕೆರೆ ಮಂಜುನಾಥ್, ಕಸಪಾ ಮಾಜಿ ಅಧ್ಯಕ್ಷ ಹರಿಚರಣ್ ತಿಲಕ್, ಪುರಸಭಾ ಸದಸ್ಯ ಕೆ.ಆರ್ ನೀಲಕಂಠ,ಗ್ರಾ.ಪಂ ಸದಸ್ಯ ಅಗ್ರಹಾರಬಾಚಹಳ್ಳಿ ಶ್ರೀನಿವಾಸ್,ಸಮಾಜ ಸೇವಕ ಆರ್ ಟಿ ಓ ಮಲ್ಲಿಕಾರ್ಜುನ್ ಅಭಿಮಾನಿಗಳ ಬಳಗದ ಅಧ್ಯಕ್ಷ ಗಂಜೀಗೆರೆ ಮಹೇಶ್,ಹೇಮಗಿರಿ ಶಾಖಾ ಮಠದ ವ್ಯಾಪ್ತಿಗೆ ಬರುವ ಬಿಜಿಎಸ್ ಶಾಲಾ ಪ್ರಾಂಶುಪಾಲರು ಶಿಕ್ಷಕರು ಸೇರಿದಂತೆ ಇತರರಿದ್ದರು.

———————-ಮನು ಮಾಕವಳ್ಳಿ

Leave a Reply

Your email address will not be published. Required fields are marked *

× How can I help you?