ಚನ್ನರಾಯಪಟ್ಟಣ-ತೆಂಗಿನ ರಸ ಸೋರುವ ರೋಗಬಾದೆ-ಹತೋಟಿಯ ಕ್ರಮಗಳ ಬಗ್ಗೆ ಕೃಷಿ ಇಲಾಖೆಯಿಂದ ರೈತರಿಗೆ ಪ್ರಾತ್ಯಕ್ಷಿಕ ಕಾರ್ಯಕ್ರಮ

ಚನ್ನರಾಯಪಟ್ಟಣ-ತಾಲೂಕು ಕೃಷಿ ಇಲಾಖೆಯ ವತಿಯಿಂದ ಆತ್ಮ ಯೋಜನೆಯಡಿ ಶ್ರವಣಬೆಳಗೊಳ ಹೋಬಳಿಯ ಸಾಣೇನಹಳ್ಳಿ ಗ್ರಾಮದಲ್ಲಿ ತೆಂಗಿನಲ್ಲಿನ ಸಸ್ಯ ಪೋಷಕಾಂಶಗಳ ನಿರ್ವಹಣೆಯ ಪ್ರಾತ್ಯಕ್ಷಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ತೆಂಗಿನಲ್ಲಿ ಪ್ರಮುಖವಾಗಿ ಕಾಣಿಸಿಕೊಳ್ಳುವ ರಸ ಸೋರುವ ರೋಗದ ನಿರ್ವಹಣೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ರೈತರಿಗೆ ಮಾಹಿತಿ ಒದಗಿಸಲಾಯಿತು.

ಈ ಸಂದರ್ಭದಲ್ಲಿ ಕೃಷಿ ಸಹಾಯಕ ತಾಂತ್ರಿಕ ವ್ಯವಸ್ಥಾಪಕಿ ಅರ್ಪಿತಾ ಜೆ ಕೆ,ಸಹಾಯಕ ತೋಟಗಾರಿಕಾ ಅಧಿಕಾರಿ ರಂಗಸ್ವಾಮಿ,ಪ್ರಗತಿಪರ ರೈತರಾದ ಮಧುಕುಮಾರ್ ,ನಿತಿನ್,ರಂಗೇಗೌಡ ಮುಂತಾದವರು ಹಾಜರಿದ್ದರು.

Leave a Reply

Your email address will not be published. Required fields are marked *

× How can I help you?