ಕೆ.ಆರ್.ಪೇಟೆ-ಬೆಡದಹಳ್ಳಿ ಪಂಚಭೂತೇಶ್ವರ ಕ್ಷೇತ್ರದಲ್ಲಿ ಎರಡು ದಿನ ಧಾರ್ಮಿಕ ಕಾರ್ಯಕ್ರಮ-ಪೌರಕಾರ್ಮಿಕರಿಗೆ ಪಾದಪೂಜೆ-ಸಾಧಕರಿಗೆ ಸನ್ಮಾನ-ಸಭೆಯಲ್ಲಿ ನಿರ್ಧಾರ.

ಕೆ.ಆರ್.ಪೇಟೆ-ತಾಲ್ಲೂಕಿನ ಬೆಡದಹಳ್ಳಿಯ ಶ್ರೀ ಪಂಚಭೂತೇಶ್ವರ ಕ್ಷೇತ್ರದಲ್ಲಿ ಶ್ರೀಮಠ ಹಾಗೂ ದೇವಾಲಯವು ನಿರ್ಮಾಣವಾಗಿ 10 ವರ್ಷಗಳು ಸಂಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಬರುವ ನವೆಂಬರ್ ತಿಂಗಳಿನಲ್ಲಿ ಎರಡು ದಿನಗಳ ಕಾಲ ಧಾರ್ಮಿಕ ಕಾರ್ಯಕ್ರಮ ನಡೆಸಲು ಭಕ್ತಾದಿಗಳು ಶ್ರೀ ರುದ್ರಮುನಿ ಸ್ವಾಮೀಜಿಗಳ ನೇತೃತ್ವದಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ನಿರ್ಧರಿಸಿದ್ದಾರೆ.

ಸನಾತನ ಧರ್ಮ ರತ್ನಾಕರ ಡಾ. ಮಾದೇಶ್ ಗುರೂಜಿಯವರ ನೇತೃತ್ವದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾಕ್ಟರ್ ನಿರ್ಮಲಾನಂದನಾಥ ಮಹಾಸ್ವಾಮೀಜಿಗಳು, ಮೈಸೂರಿನ ಸುತ್ತೂರು ಮಠದ ಶ್ರೀಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಗಳು ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನoದಪುರಿ ಸ್ವಾಮೀಜಿಗಳು, ಚಿತ್ರದುರ್ಗದ ಮಾದಾರ ಚೆನ್ನಯ್ಯ ಗುರು ಪೀಠದ ಶ್ರೀ.ಮಾದರ ಚೆನ್ನಯ್ಯ ಸ್ವಾಮೀಜಿಗಳು, ಶ್ರವಣಬೆಳಗೊಳದ ದಿಗಂಬರ ಜೈನ ಮಠದ ಶ್ರೀ ಭಟ್ಟಾರಕ ಚಾಲುಕೀರ್ತಿ ಸ್ವಾಮೀಜಿ, ಹಾಗೂ ಚಂದ್ರವನ ಆಶ್ರಮದ ಡಾ.ಶ್ರೀ ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ಧಾರ್ಮಿಕ ಮಹಾಸಭೆಯನ್ನು ನಡೆಸಿ,ಹೋಮವನಗಳ ಮೂಲಕ ಲೋಕಕಲ್ಯಾಣಕ್ಕಾಗಿ ವಿಶೇಷ ಪ್ರಾರ್ಥನೆ ಸಲ್ಲಿಸುವುದು, ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಗಣ್ಯರಿಗೆ ಪಂಚಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸುವುದು ಹಾಗೂ ಕೆ.ಆರ್.ಪೇಟೆ ಪುರಸಭೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 51 ಜನ ಪೌರಕಾರ್ಮಿಕರಿಗೆ ಪಾದ ಪೂಜೆ ಮಾಡಿ ವಿಶೇಷವಾಗಿ ಸನ್ಮಾನಿಸಿ ಗೌರವಿಸುವುದು ಸೇರಿದಂತೆ ಕೇಂದ್ರ ಸಚಿವರಾದ ಮಂಡ್ಯ ಲೋಕಸಭಾ ಸದಸ್ಯ ಹೆಚ್.ಡಿ.ಕುಮಾರಸ್ವಾಮಿ, ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ, ಶಾಸಕ ಹೆಚ್.ಟಿ.ಮಂಜು, ರಾಜ್ಯದ ಮಾಜಿ ಸಚಿವ ಡಾ.ನಾರಾಯಣಗೌಡ, ಮಾಜಿ ಶಾಸಕರಾದ ಕೆ.ಬಿ.ಚಂದ್ರಶೇಖರ್, ಬಿ.ಪ್ರಕಾಶ್, ಸಮಾಜ ಸೇವಕರಾದ ಆಲಂಬಾಡಿಕಾವಲು ಮಲ್ಲಿಕಾರ್ಜುನ್, ವಿಜಯ್‌ರಾಮೇಗೌಡ, ಟಿಎಪಿಸಿಎಂಎಸ್ ಅಧ್ಯಕ್ಷ ಬಿ.ಎಲ್.ದೇವರಾಜು, ಪ್ರದೇಶ ಕಾಂಗ್ರೆಸ್ ಸಮಿತಿ ಸದಸ್ಯರಾದ ಕಿಕ್ಕೇರಿ ಸುರೇಶ್, ಮಂಡ್ಯ ಹಾಲು ಒಕ್ಕೂಟದ ನಿರ್ದೇಶಕ ಡಾಲುರವಿ ಹಾಗೂ ಸ್ಥಳೀಯ ಮುಖಂಡರ ನೇತೃತ್ವದಲ್ಲಿ ಸಾರ್ವಜನಿಕ ಸಭೆ ನಡೆಸಿ ಸಾಮೂಹಿಕವಾಗಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಎರಡು ದಿನಗಳ ಕಾಲ ನಡೆಸಿ ಸಮಾರಂಭವನ್ನು ಯಶಸ್ವಿಗೊಳಿಸಲು ಭಕ್ತಾದಿಗಳು ತೀರ್ಮಾನ ಮಾಡಿದರು.

ಸಮಾಲೋಚನಾ ಸಭೆಯಲ್ಲಿ ಭಾರತೀಪುರ ಕ್ರಾಸ್ ಗ್ರಾಮ ಪಂಚಾಯತಿ ಅಧ್ಯಕ್ಷ ಕುಬೇರ, ಮಾಜಿ ಉಪಾಧ್ಯಕ್ಷ ಸುನೀಲ್, ಪಂಚಭೂತೇಶ್ವರ ದೇವಾಲಯ ಸಮಿತಿ ಕಾರ್ಯದರ್ಶಿ ಕಾಂತರಾಜು, ಖಜಾಂಚಿ ಮಹೇಶ್, ವಿಚಾರವಾದಿಗಳು ಹಾಗೂ ಚಿಂತಕರಾದ ಜಗದೀಶ್, ಮುಖಂಡರಾದ ಭಾರತೀಪುರ ಡಾ.ಪುಟ್ಟಣ್ಣ, ಕಾಂತರಾಜು, ಉಧ್ಯಮಿ ಬಿ. ರಾಜಶೇಖರ್, ಮೊಟ್ಟೆಮಂಜು, ಶ್ರೀ ಮಠದ ಸಂಚಾಲಕರಾದ ಕೆ.ಎಸ್.ಚಂದ್ರು, ಕೆ.ಆರ್.ನೀಲಕಂಠ ಸೇರಿದಂತೆ ಶ್ರೀಮಠದ ಅಭಿಮಾನಿಗಳು ಹಾಗೂ ಸದ್ಭಕ್ತರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಶರನ್ನವರಾತ್ರಿ ಅಂಗವಾಗಿ ವಿಶೇಷ ಪೂಜೆ, ಚಂಡಿಕಾ ಹೋಮ,ಬೆಡದಹಳ್ಳಿಯ ಶ್ರೀಮಠದಲ್ಲಿ ಶರನ್ನವರಾತ್ರಿಯ ಅಂಗವಾಗಿ ತಾಯಿ ಪಾರ್ವತಿ ದೇವಿಯ ಶಿಲಾಮೂರ್ತಿಗೆ ಹಾಗೂ ಪಂಚಭೂತೇಶ್ವರ ಸ್ವಾಮಿಗೆ ಹಾಗೂ ಕ್ಷೇತ್ರ ಪಾಲಕನಾದ ಆಂಜನೇಯ ಸ್ವಾಮಿಯ ಶಿಲಾಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ ಲೋಕ ಕಲ್ಯಾಣಾರ್ಥವಾಗಿ ಪ್ರಾರ್ಥನೆ ನಡೆಸಲಾಯಿತು.

—————————--ಶ್ರೀನಿವಾಸ್ ಕೆ ಆರ್ ಪೇಟೆ

Leave a Reply

Your email address will not be published. Required fields are marked *

× How can I help you?