ಚಿಕ್ಕಮಗಳೂರು-ಜಿಲ್ಲಾ ಪಿ.ಡಿ.ಓ ಕ್ಷೇಮಾಭಿವೃದ್ದಿ ಸಂಘ ಜಿ.ಪಂ.ಆವರಣದಲ್ಲಿ ನಡೆಸುತ್ತಿರುವ ಮುಷ್ಕರಕ್ಕೆ ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ ಬುಧವಾರ ಭೇಟಿ ನೀಡಿ ಸಂಬoಧಿಸಿದ ಸಚಿವರು ಹಾಗೂ ಸರ್ಕಾರದೊಂದಿಗೆ ಚರ್ಚಿಸಿ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಯೋಗೀಶ್, ಉಪಾಧ್ಯಕ್ಷೆ ಶಾಂತಿ, ತಾಲ್ಲೂಕು ಅಧ್ಯಕ್ಷ ಜಗನ್ನಾಥ್ ಹಾಗೂ ವಿವಿಧ ತಾಲ್ಲೂಕು ಅಧ್ಯಕ್ಷರು ಹಾಗೂ ಸಿಬ್ಬಂದಿಗಳು ಹಾಜರಿದ್ದರು.