ನಾಗಮಂಗಲ:ಪೋಷಕರು ಮಕ್ಕಳಿಗೆ ಶಿಕ್ಷಣ ಕೊಡಿಸುವುದರ ಜೊತೆಗೆ ಮನೆಯಲ್ಲಿ ನೈತಿಕ ಮೌಲ್ಯಗಳನ್ನು ಕಲಿಸಬೇಕು ಎಂದು ಜೆ.ಎಂ.ಎಫ್.ಸಿ.ನ್ಯಾಯಾಲಯದ ಅಪರ ಸಿವಿಲ್ ನ್ಯಾಯಾಧೀಶ ಕೆ.ಪಿ.ಸಿದ್ದಪ್ಪಾಜಿ ಅವರು ಪೋಷಕರಿಗೆ ಕಿವಿ ಮಾತು ಹೇಳಿದರು.
ನಾಗಮಂಗಲ ಪಟ್ಟಣದ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿಯಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ,ಅಭಿಯೋಜನಾ ಇಲಾಖೆ ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ವಿಶ್ವ ಮಾನಸಿಕ ಆರೋಗ್ಯ ದಿನ ಮತ್ತು ಹಿರಿಯ ನಾಗರಿಕರ ದಿನದ ಬಗ್ಗೆ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಹಿರಿಯ ವಕೀಲ ಎಲ್.ಆರ್.ಪುರುಷೋತ್ತಮ ಅವರು ಹಿರಿಯ ನಾಗರೀಕರಿಗೆ ಸರ್ಕಾರದಿಂದ ದೊರೆಯುವಂತಹ ಸೌಲಭ್ಯಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು.
ಮಂಡ್ಯ ಜಿಲ್ಲಾ ಮಾನಸಿಕ ಆರೋಗ್ಯ ಆಪ್ತ ಸಮಾಲೋಚನಾಧಿಕಾರಿ ಡಾ.ಸನ್ನಡೆ ಕುಮಾರ್ ಅವರು ವಿಶ್ವ ಮಾನಸಿಕ ಆರೋಗ್ಯ ದಿನದ ಬಗ್ಗೆ ಮಾಹಿತಿ ನೀಡಿದರು.
ಈ ಸಮಾರಂಭದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾಕ್ಟರ್ ಬಿ.ಹೆಚ್. ರಮೇಶ್ ಅಧ್ಯಕ್ಷತೆ ವಹಿಸಿದ್ದರು.
ವಕೀಲರ ಸಂಘದ ಅಧ್ಯಕ್ಷ ಬ್ರಹ್ಮದೇವರಹಳ್ಳಿ ಮಹದೇವ್,ಸಹಾಯಕ ಸರ್ಕಾರಿ ಅಭಿಯೋಜಕಿ ಟಿ.ಆರ್. ಶ್ರೀದೇವಿ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಹೆಚ್.ಜೆ. ವಿವೇಕಾನಂದ ,ಹಿರಿಯ ಆರೋಗ್ಯ ನಿರೀಕ್ಷಕರಾದ ಎಸ್. ಸಿದ್ದಲಿಂಗಯ್ಯ, ಸೇರಿದಂತೆ ತಾಲ್ಲೂಕು ಕಾನೂನು ಸಮಿತಿ ಸದಸ್ಯರು, ವೈದ್ಯರುಗಳು. ಆಶಾ ಕಾರ್ಯಕರ್ತೆಯರು, ತಾಲ್ಲೂಕು ಆರೋಗ್ಯ ವೈದ್ಯಾಧಿಕಾರಿಗಳ ಕಛೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
————————–-ಬಿ.ಹೆಚ್.ರವಿ ನಾಗಮಂಗಲ