ಬೆಂಗಳೂರು-ಮುಖ್ಯಮಂತ್ರಿ ಸಿದ್ದರಾಮಯ್ಯರವರು ಹಾಗೂ ರಾಜನಹಳ್ಳಿ ವಾಲ್ಮೀಕಿ ಗುರು ಪೀಠದ ಜಗದ್ಗುರು ಶ್ರೀ ಪ್ರಸನ್ನಾನಂದಪುರಿ ಶ್ರೀಗಳು ಇಂದು ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಮಹರ್ಷಿ ಶ್ರೀ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಐದು ಮಹನೀಯರಿಗೆ ವಾಲ್ಮೀಕಿ ಪ್ರಶಸ್ತಿ ವಿತರಿಸಿ, ಶುಭ ಹಾರೈಸಿದರು.
ಈ ಕಾರ್ಯಕ್ರಮದಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಕೆ. ಎನ್.ರಾಜಣ್ಣ,ಹೆಚ್.ಕೆ.ಪಾಟೀಲ್, ಮಾಜಿ ಸಂಸದರಾದ ವಿ.ಎಸ್.ಉಗ್ರಪ್ಪ, ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬಸವನಗೌಡ ದದ್ದಲ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಕೆಕೆಆರ್ಡಿಬಿ ಅಧ್ಯಕ್ಷರಾದ ಅಜಯ್ ಸಿಂಗ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ವಿಧಾನಸಭೆ ಮತ್ತು ವಿಧಾನಪರಿಷತ್ ಸದಸ್ಯರುಗಳು ಸೇರಿದಂತೆ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.