ಹಾಸನ-ನಗರದ ಸರ್ಕಾರಿ ಕಾನೂನು ಕಾಲೇಜಿನಲ್ಲಿ ಪ್ರಥಮ ವರ್ಷದ ಕಾನೂನು ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರವಿಕುಮಾರ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಉದ್ಭವಿಸುವ ಹಲವಾರು ಸಮಸ್ಯೆಗಳನ್ನು ನಿಭಾಯಿಸಿಕೊಂಡು ಓದಿನಲ್ಲಿ ಹೆಚ್ಚಿನ ಆಸಕ್ತಿ ತೋರಿದರೆ ಗುರಿಯ ಸಾಧನೆಯುತ್ತ ದಾಪುಗಾಲು ಇಡಬಹುದು ಎಂದು ಕಿವಿಮಾತು ಹೇಳಿದರು.
ಹಿರಿಯ ವಕೀಲರಾದ ಮಂಜೇಗೌಡ ಮಾತನಾಡಿ, ವಕೀಲಿ ವೃತ್ತಿ ಜೀವನದ ಹಲವು ಅಂಶಗಳನ್ನು ಪ್ರಸ್ತಾಪಿಸುತ್ತಾ ವೃತ್ತಿಯಲ್ಲಿ ಹೆಚ್ಚಿನ ತಾಳ್ಮೆ ಹಾಗೂ ನಿರಂತರ ಕಾನೂನು ಅಭ್ಯಾಸದಿಂದ ಒಳ್ಳೆಯ ವಕೀಲರಾಗಲು ಅವಕಾಶವಿದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಡಾ. ಶೀನಾ ಥಾಮಸ್ ವಹಿಸಿದ್ದರು. ಐಕ್ಯೂಎಸಿ ಸಂಚಾಲಕರಾದ ಗಣೇಶ್ ಹೆಗಡೆ ಕಾರ್ಯಕ್ರಮದ ಕುರಿತು ಪ್ರಸ್ತಾವಿಕವಾಗಿ ಮಾತನಾಡಿದರು.
ಸಾಂಸ್ಕೃತಿಕ ಮತ್ತು ಎನ್ ಎಸ್ ಎಸ್ ಸಂಚಾಲಕರಾದ ಲೇಪಾಕ್ಷಯ್ಯ ಎಸ್.ವಿ ಕಾರ್ಯಕ್ರಮದಲ್ಲಿ ವಂದನಾರ್ಪಣೆ ಮಾಡಿದರು,ವಿದ್ಯಾರ್ಥಿನಿ ಭಾವನ ಕಾರ್ಯಕ್ರಮದ ನಿರೂಪಣೆ ಮಾಡಿದರು.
ಕಾರ್ಯಕ್ರಮದಲ್ಲಿ ಡಾ. ಶಿವಣ್ಣ ನಾಯ್ಕ್, ಡಾ. ಅನಿತಾ ಕೆ.ಎನ್, ಮಹದೇವಪ್ಪ, ಪಾಪಣ್ಣ, ಬೋಧಕ ಮತ್ತು ಬೋಧಕೇತರ ವರ್ಗದವರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.