ತುಮಕೂರು:-ಸರ್ಕಾರವು ಬಜೆಟ್‌ನಲ್ಲಿ ಪರಿಶಿಷ್ಟ ಪಂಗಡ ಸಮುದಾ ಯಗಳ ಕಲ್ಯಾಣಕ್ಕಾಗಿ ರೂ. 11,447 ಕೋಟಿ ಮೀಸಲಿಟ್ಟಿದೆ-ಡಾ. ಜಿ.ಪರಮೇಶ್ವರ್

ತುಮಕೂರು:-ತುಮಕೂರು ಜಿಲ್ಲಾಡಳಿತ,ಮಹಾನಗರ ಪಾಲಿಕೆ ಹಾಗೂ ಪರಿಶಿಷ್ಟ ವರ್ಗಗಳ ಇಲಾಖೆಯು ನಗರದ ಬಾಲ ಭವನದಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ.ಪರಮೇಶ್ವರ್ ಅವರು ಉದ್ಘಾಟಿಸಿದರು.ಇದಕ್ಕೂ ಮುನ್ನ ವಾಲ್ಮೀಕಿ ಮಹರ್ಷಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ನಮನ ಸಲ್ಲಿಸಿದರು.

ಸರ್ಕಾರವು ಬಜೆಟ್‌ನಲ್ಲಿ ಪರಿಶಿಷ್ಟ ಪಂಗಡ ಸಮುದಾಯಗಳ ಕಲ್ಯಾಣಕ್ಕಾಗಿ ರೂ. 11,447 ಕೋಟಿ ಮೀಸಲಿಟ್ಟಿದೆ. ವಿವಿಧ ಯೋಜನೆಗಳನ್ನು ರೂಪಿಸಿದ್ದು, ಜಾತಿ ಗಣತಿ ಆಧಾರದ ಮೇಲೆ ಶೇ. 3ರಷ್ಟಿದ್ದ ಮೀಸಲಾತಿಯನ್ನು ಶೇ. 7.5ಕ್ಕೆ ಹೆಚ್ಚಿಸಲಾಗಿದೆ. ವಿದೇಶಿ ವ್ಯಾಸಂಗಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರಬುದ್ಧ ಯೋಜನೆಯನ್ನು ಜಾರಿಗೊಳಿಸಲಾಗಿದೆ. ತುಮಕೂರು ವಿಶ್ವವಿದ್ಯಾನಿಲಯದಲ್ಲಿ ವಾಲ್ಮೀಕಿ ಅಧ್ಯಯನ ಪೀಠ ಸ್ಥಾಪಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಎಸ್.ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ, ಪ್ರೋತ್ಸಾಹಿಸಲಾಯಿತು.

ಈ ಸಂದರ್ಭದಲ್ಲಿ ತುಮಕೂರು ನಗರ ಶಾಸಕ ಟಿ. ಬಿ. ಜ್ಯೋತಿ ಗಣೇಶ್, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಶಾಂತಲಾ ರಾಜಣ್ಣ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಮಹಾನಗರ ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜಾ, ಅಪರ ಜಿಲ್ಲಾಧಿಕಾರಿ ಡಾ. ಎನ್.ತಿಪ್ಪೇಸ್ವಾಮಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಅಶೋಕ್ ವೆಂಕಟ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ್‌ಗೌಡ ಮಾಜಿ ನಗರ ಪಾಲಿಕೆ ಅದ್ಯಕ್ಷ ಬಿ.ಜಿ. ಕೃಷ್ಣಪ್ಪ. ಹಲವಾರು ಮುಖಂಡರು ಉಪಸ್ಥಿತರಿದ್ದರು.

——————–ನರಸಿಂಹಯ್ಯ ಕೋಳಾಲ

Leave a Reply

Your email address will not be published. Required fields are marked *

× How can I help you?