ಚಿಕ್ಕಮಗಳೂರು-ನಿಮ್ಮಲ್ಲಿ’ಅಂತ್ಯೋದಯ-ಬಿಪಿಎಲ್’ಕಾರ್ಡ್ ಇದೆಯಾ?ಹಾಗಾದರೆ ಮಿಸ್ ಮಾಡದೇ ಈ ಸುದ್ದಿಯನ್ನು ಓದಿ

ಚಿಕ್ಕಮಗಳೂರು-ಟ್ರಾಕ್ಟರ್,ಮ್ಯಾಕ್ಸಿಕ್ಯಾಬ್,ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿದ ಕುಟುಂಬವನ್ನು ಹೊರತುಪಡಿಸಿ,ನಾಲ್ಕು ಚಕ್ರದ ವಾಹನ ಹೊಂದಿರುವ,ವಾರ್ಷಿಕ ರೂ.1.20 ಲಕ್ಷಗಳಿಗಿಂತಲೂ ಹೆಚ್ಚು ಆದಾಯವು ಇರುವ ಕುಟುಂಬಗಳು,ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬ ಅಥವಾ,ನಗರ ಪ್ರದೇಶಗಳಲ್ಲಿ 1000 ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು,ಸರ್ಕಾರದ ಅಥವಾ ಸರ್ಕಾರದಿಂದ ಅನುದಾನವನ್ನು ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು,ಮಂಡಳಿ,ನಿಗಮ, ಸ್ವಾಯತ್ತ ಸಂಸ್ಥೆಗಳ ನೌಕರರು ಆದಾಯ ತೆರಿಗೆ, ಸೇವಾ ತೆರಿಗೆ, ವ್ಯಾಟ್, ವೃತ್ತಿ ತೆರಿಗೆ ಪಾವತಿಸುವ ಎಲ್ಲಾ ಕುಟುಂಬಗಳು ತಕ್ಷಣ ತಮ್ಮಲ್ಲಿರುವ ಅಂತ್ಯೋದಯ ಅನ್ನ ಯೋಜನೆ (ಎಎವೈ) ಮತ್ತು ಬಿಪಿಎಲ್ ಪಡಿತರ ಚೀಟಿಯನ್ನು ಚಿಕ್ಕಮಗಳೂರು ತಾಲ್ಲೂಕು ಕಛೇರಿಯ ಆಹಾರ ಶಾಖೆಗೆ ಹಿಂದಿರುಗಿಸುವಂತೆ ತಾಲೂಕು ದಂಡಾಧಿಕಾರಿಗಳು ಪ್ರಕಟಣೆಯನ್ನು ಹೊರಡಿಸಿದ್ದಾರೆ.

ಒಂದು ವೇಳೆ ತಪ್ಪಿದಲ್ಲಿ ಅಕ್ರಮ ಪಡಿತರ ಚೀಟಿ ಹೊಂದಿರುವವರ ವಿರುದ್ಧ ಅಗತ್ಯ ಕ್ರಮ ಜರುಗಿಸಲಾಗುವುದು ಜೊತೆಗೆ ಹಂಚಿಕೆ ಪಡೆದ ಆಹಾರ ಧಾನ್ಯಗಳ ಬಾಬ್ತು ಮುಕ್ತ ಮಾರುಕಟ್ಟೆ ದರದಂತೆ ಮೊಬಲಗನ್ನು ದಂಡದ ರೂಪದಲ್ಲಿ ವಸೂಲು ಮಾಡಲಾಗುವುದೆಂದು ಅವರು ಎಚ್ಚರಿಕೆ ನೀಡಿದ್ದಾರೆ.

——————–-ಸುರೇಶ್

Leave a Reply

Your email address will not be published. Required fields are marked *

× How can I help you?