ಕೆ.ಆರ್.ಪೇಟೆ-ಪುರಸಭೆ ಮುಖ್ಯಾಧಿಕಾರಿ ರಾಜುವಠಾರ್ (58) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮೂಲತಃ ಬಿಜಾಪುರದವರಾದ ರಾಜುವಠಾರ್ ಕಳೆದ ನಾಲ್ಕು ತಿಂಗಳ ಹಿಂದಷ್ಟೇ ವರ್ಗಾವಣೆಗೊಂಡು ಬಂದು ಪುರಸಭೆಯ ಮುಖ್ಯಾಧಿಕಾರಿಯಾಗಿ ಜವಾಬ್ದಾರಿ ನಿಭಾಯಿಸುತ್ತಿದ್ದರು.
ಇತ್ತೀಚೆಗಷ್ಟೇ ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಕೆ.ಆರ್ ಪೇಟೆಗೆ ಹಿಂದಿರುಗಿದ್ದರು ಎಂಬ ಮಾಹಿತಿಗಳಿದ್ದು,ಇಂದು ಮದ್ಯಾನ್ನ 2.30 ರ ಸಮಯದಲ್ಲಿ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ನಗರದ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರ ಒಳಗೆ ಅವರ ಪ್ರಾಣಪಕ್ಷಿ ಹಾರಿಹೋಗಿತ್ತು.
ಮೃತರು ಪತ್ನಿ,ಒರ್ವ ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ.
ಪುರಸಭಾ ಸದಸ್ಯ ಲೋಕೇಶ್ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.
————--ಶ್ರೀನಿವಾಸ್ ಕೆ.ಆರ್ ಪೇಟೆ