ಚಿಕ್ಕಮಗಳೂರು-ಮದರಸಾಗಳ ವಿರುದ್ಧ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಆದೇಶ-ತಡೆ ನೀಡಿದ ಸುಪ್ರೀಂ-ಸ್ವಾಗತಿಸಿದ ಫೈರೋಜ್ ಅಹ್ಮದ್ ರಜ್ವಿ

ಚಿಕ್ಕಮಗಳೂರು-ಮದರಸಾಗಳ ವಿರುದ್ಧ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಹಿಡಿದಿರುವುದು ಸ್ವಾಗತಾರ್ಹ ಎಂದು ಜಾಮೀಯಾ ಅರೇ ಬಿಯಾ ಕಂಜುಲ್ ಇಮಾನ್ ಸಂಸ್ಥೆ ಪ್ರಧಾನ ಕಾರ್ಯದರ್ಶಿ ಫೈರೋಜ್ ಅಹ್ಮದ್ ರಜ್ವಿ ಹೇಳಿದ್ದಾರೆ.

ಈ ಕುರಿತು ಮಂಗಳವಾರ ಹೇಳಿಕೆಯಲ್ಲಿ ತಿಳಿಸಿರುವ ಅವರು ಮದರಸಾಗಳ ವಿರುದ್ಧ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಹಿಂದೆ ಮದರಸಾಗಳಿಗೆ ರಾಜ್ಯ ಸರ್ಕಾರಗಳು ನೀಡುತ್ತಿರುವ ಹಣಕಾಸು ನೆರವು ತಡೆಹಿಡಿಯುವಂತೆ ಹಾಗೂ ಮದರಸಗಳನ್ನು ಮುಚ್ಚಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಕಳುಹಿಸಿರುವ ಪತ್ರಕ್ಕೆ ಕ್ರಮ ಕೈಗೊಳ್ಳದಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ ಎಂದಿದ್ದಾರೆ.

ಆಯೋಗ ಕಳಿಸಿದ ಪತ್ರ ಪ್ರಕಾರ ಉತ್ತರ ಪ್ರದೇಶ ಮತ್ತು ತ್ರಿಪುರ ಸರ್ಕಾರಗಳು ತೆಗೆದುಕೊಂಡಿರುವ ಕ್ರಮಗಳನ್ನೂ ಸುಪ್ರೀಂ ಕೋರ್ಟ್ ತಡೆ ಹಿಡಿದಿದೆ. ಆಯೋಗವು ಮದರಸಗಳನ್ನು ಮುಚ್ಚಿಸುವಂತೆ ನೀಡಿದ್ದ ಶಿಫಾರಸ್ಸಿನ ವಿರುದ್ಧವಾಗಿ ಸಾಕಷ್ಟು ವಿರೋಧಗಳು ವ್ಯಕ್ತವಾಗಿದ್ದವು ಎಂದು ತಿಳಿಸಿದ್ದಾರೆ.

ಶಿಕ್ಷಣ ಹಕ್ಕು ಕಾಯಿದೆ 2006 ರಲ್ಲಿ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ನೀಡಲಾದ ರಿಯಾಯಿತಿಗಳು ಧಾರ್ಮಿಕ ಶಿಕ್ಷಣ ಸಂಸ್ಥೆಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ನಿರಾಕರಿಸುವ ಶಿಫಾರಸ್ಸು ಸಾಂವಿಧಾನಿಕ ಹಕ್ಕುಗಳ ಉಲ್ಲಘನೆಗೆ ಕಾರಣವಾಗಿದೆ. ರಾಜ್ಯ ಸರ್ಕಾರಗಳು ಮದರಸಾ ವಿದ್ಯಾರ್ಥಿಗಳಿಗೆ ಹೆಚ್ಚಿನ ನೆರವು ನೀಡುವುದರ ಮೂಲಕ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ಸಹಕಾರ ನೀಡಬೇಕಾಗಿ ಮನವಿ ಮಾಡಲಾಗಿದೆ ಎಂದು ಫೈರೋಜ್ ಅಹ್ಮದ್ ರಜ್ವಿ ಹೇಳಿದ್ದಾರೆ.

Leave a Reply

Your email address will not be published. Required fields are marked *

× How can I help you?