ಮಧುಗಿರಿ-ದೇವರಾಜು ಅರಸು ರವರನ್ನು ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರ ಎಂದು ಕರೆಯಲಾಗುತ್ತಿತ್ತು.ಅವರ ಅದಿಕಾರಾವಧಿಯಲ್ಲಿ ಹಿಂದುಳಿದ ವರ್ಗದ ಆಯೋಗವನ್ನು ಎಲ್ ಜಿ ಹಾವನೂರು ಅವರ ನೇತೃತ್ವದಲ್ಲಿ ಸ್ಥಾಪಿಸಿದರು.ಭೂ ಸುಧಾರಣೆ ಮತ್ತು ಉಳುವವನೇ ಹೊಲದೊಡೆಯ ಕಾನೂನುಗಳನ್ನು ಜಾರಿಗೆ ತಂದು ಬೂಮಿಇಲ್ಲದೆ ಸಂಕಷ್ಟ ಪಡುತ್ತಿದ್ದವರಿಗೆ ಅನ್ನದಾತರಾದರು ಎಂದು ಉಪನ್ಯಾಸಕರಾದ ಬಂದ್ರೆ ಹಳ್ಳಿ ಎನ್ ಮಹಾಲಿಂಗೇಶ್ ರವರು ತಿಳಿಸಿದರು.
ತಾಲ್ಲೂಕು ಕಚೇರಿಯಲ್ಲಿ ನಡೆದ ದೇವರಾಜು ಅರಸುರವರ ೧೦೯ ನೇ ಜನ್ಮದಿನಾಚರಣೆ ಸಭೆಯಲ್ಲಿ ವಿಶೇಷ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು,ದೇವರಾಜು ಅರಸುರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ನಮನ ಸಲ್ಲಿಸಲಾಯಿತು.