ಹಾಸನ:ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಮುನ್ನಡೆದರೆ ಯಾವುದೇ ಕೆಲಸ ಕಾರ್ಯಗಳಲ್ಲೂ ಸಾಧನೆ ಮಾಡಲು ಸಾಧ್ಯ-ಜಿ.ಎಸ್. ಪ್ರದೀಪ್

ಹಾಸನ:ಯುವಕರು ಆತ್ಮವಿಶ್ವಾಸದಿಂದ ಮುನ್ನಡೆದರೆ ಯಾವುದೇ ಕೆಲಸ ಕಾರ್ಯಗಳಲ್ಲೂ ಸಾಧನೆ ಮಾಡಲು ಸಾಧ್ಯ ಎಂದು ರೋಟರಿ ಸಂಸ್ಥೆಯ ಮಾಜಿ ಸಹಾಯಕ ಗವರ್ನರ್ ಜಿ.ಎಸ್. ಪ್ರದೀಪ್ ಹೇಳಿದರು.

ನಗರದ ಆರ್.ಸಿ. ರಸ್ತೆಯ ಗಂಧದ ಕೋಠಿ ಆವರಣದಲ್ಲಿರುವ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉದ್ಯೋಗ ಮಾಹಿತಿ ಘಟಕ, ಅಕ್ಷರ ಅಕಾಡೆಮಿ ಹಾಗೂ ರೋಟರಿ ಕ್ಲಬ್ ಹಾಸನ ವತಿಯಿಂದ ಬುಧವಾರ ನಡೆದ ಉದ್ಯೋಗ ಮಾರ್ಗದರ್ಶನ ಹಾಗೂ ಅಭಿವಿನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಯುವ ಸಮೂಹ ವಿದ್ಯಾಭ್ಯಾಸದ ಅವಧಿಯಲ್ಲಿ ಆತ್ಮವಿಶ್ವಾಸವನ್ನು ಮೈಗೂಡಿಸಿಕೊಂಡರೆ ಒಳ್ಳೆಯ ಉದ್ಯೋಗ ಪಡೆಯಲು ಸಾಧ್ಯ.

ಜೀವನದಲ್ಲಿ ಬಂದ ಅವಕಾಶಗಳನ್ನು ಬಳಕೆ ಮಾಡಿಕೊಳ್ಳದೆ ಹಿಂಜರಿಕೆಯ ಮನೋಭಾ ವನೆಯನ್ನು ಬೆಳೆಸಿಕೊಂಡರೆ ಏನನ್ನು ಸಾಧಿಸಲು ಸಾಧ್ಯವಿಲ್ಲ. ಪ್ರತಿಯೊಬ್ಬರು ತಾವುಗಳು ಮಾಡುವ ಉದ್ಯೋಗವನ್ನು ನಿಷ್ಠೆ, ಪ್ರಮಾಣಿಕತೆಯಿಂದ ಮಾಡಿದರೆ ಆಯಾಯ ಕ್ಷೇತ್ರದಲ್ಲಿ ಸಾಧನೆ ಮಾಡಲು ಸಾಧ್ಯ. ಉದ್ಯೋಗಕ್ಕೆ ಬೇಕಾದ ಸಂವಹನ ಕೌಶಲ್ಯ ಹಾಗೂ ಇನ್ನಿತರ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು. ಯುವ ಸಮೂಹ ಜೀವನದಲ್ಲಿ ಯಶಸ್ವಿಯಾಗಬೇಕಾದರೆ ಉತ್ತಮ ಗುರುಗಳ ಮಾರ್ಗದರ್ಶನವನ್ನು ಪಡೆಯುವ ಮೂಲಕ ತಮ್ಮ ಬದುಕನ್ನು ಕಟ್ಟಿಕೊಳ್ಳಬೇಕು ಎಂದು ಕರೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಿ.ಕೆ. ಮಂಜಯ್ಯ ಮಾತನಾಡಿ, ಯುವಕ-ಯುವತಿಯರು ತಾವುಗಳು ವಿದ್ಯಾಭ್ಯಾಸ ಮಾಡಬೇಕಾದರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ಮಾಡಿಕೊಳ್ಳಬೇಕು. ಪಿ.ಯು. ಹಂತದಿoದಲೇ ಎದುರಿಸಬಹುದಾದ ವಿವಿಧ ಪರೀಕ್ಷೆಗಳನ್ನು ಆಯ್ಕೆ ಮಾಡಿಕೊಂಡು ಪರೀಕ್ಷೆಯನ್ನು ಎದುರಿಸಬೇಕು.

ಪ್ರತಿಯೊಬ್ಬರು ಉದ್ಯೋಗವೆಂಬವುದು ಅತ್ಯವಶ್ಯಕವಾಗಿರುವುದರಿoದ ಶಿಕ್ಷಣದ ನಂತರ ಒಳ್ಳೆಯ ಹುದ್ದೆಗೆ ಆಯ್ಕೆಯಾ ಗುವಂತಾಗಬೇಕು.ಯಾವುದೇ ವಿಷಯವನ್ನು ಅಧ್ಯಯನ ಮಾಡಬೇಕಾದರೆ ಅದರ ಮೂಲವನ್ನು ತಿಳಿದು ಓದಬೇಕು.ಗೆಲುವು ಯಾರ ಸ್ವತಲ್ಲ,ಪ್ರತಿಯೊಬ್ಬರು ಶ್ರಮವಹಿಸಿ ಅಧ್ಯಯನ ಮಾಡಿದರೆ ಜೀವನದಲ್ಲಿ ಗೆಲುವು ಸಾಧಿಸಲು ಸಾಧ್ಯವಾಗುತ್ತದೆ. ಕಾಲೇಜು ಹಂತದಲ್ಲಿ ತಮಗೆ ದೊರೆಯುವ ಶೈಕ್ಷಣಿಕ ಸೌಲಭ್ಯಗಳನ್ನು ಬಳಸಿಕೊಂಡು ಉತ್ತಮ ಶಿಕ್ಷಣ ಪಡೆಯಬೇಕು ಎಂದು ಹೇಳಿದರು.

Leave a Reply

Your email address will not be published. Required fields are marked *

× How can I help you?