ಕೆ.ಆರ್.ಪೇಟೆ-ಸಾಮಾಜಿಕವಾಗಿ,ಧಾರ್ಮಿಕವಾಗಿ ಮತ್ತು ಆರ್ಥಿಕವಾಗಿ ಜನರಿಗೆ ಧೈರ್ಯ ತುಂಬುವ ಕೆಲಸವನ್ನು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆ ಮಾಡುತ್ತಿರುವುದು ನಿಜಕ್ಕೂ ಶ್ಲಾಘನೀಯ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಜನಜಾಗೃತಿ ವೇದಿಕೆ ಜಿಲ್ಲಾ ಉಪಾಧ್ಯಕ್ಷರು ಹಾಗೂ ಸಮಾಜ ಸೇವಕರಾದ ಆರ್.ಟಿ.ಓ ಮಲ್ಲಿಕಾರ್ಜುನ್ ಅಭಿಪ್ರಾಯಪಟ್ಟರು.
ಪಟ್ಟಣದಲ್ಲಿರುವ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲೂಕು ಕಚೇರಿಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ನಡೆದ ಶ್ರೀ ಲಕ್ಷ್ಮಿ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ನಾಡಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಸಂಸ್ಥೆ ಧಾರ್ಮಿಕವಾಗಿ ಭಕ್ತಿ, ಭಾವನೆ ಜತೆ ಸುಸಂಸ್ಕೃತ ಸಮಾಜ ನಿರ್ಮಾಣಕ್ಕೆ ಸ್ವ ಸಹಾಯ ಸಂಘಗಳ ಮೂಲಕ ಸಾಮಾಜಿಕವಾಗಿ ಜಾಗೃತಿ ಮೂಡಿ ಸುತ್ತಿದೆ.ಮಹಿಳೆಯರಿಗೆ ಆರ್ಥಿಕ ಬಲ ತುಂಬಿ,ಸಾಲ,ಸೌಲಭ್ಯಗಳ ಜತೆ ಸ್ವಂತ ಶಕ್ತಿಯ ಮೂಲಕ ಸ್ವಾವಲಂಬಿ ಜೀವನ ನಡೆಸಲು ಹತ್ತು ಹಲವು ಯೋಜನೆಗಳಿಂದ ಸುಂದರ ಸಂಸಾರಕ್ಕೆ ಮುನ್ನುಡಿ ಬರೆದಿದೆ.ರಾಜ್ಯದ ಉದ್ದಗಲಕ್ಕೂ ಬಡವ, ಬಲ್ಲಿದರಿಗೆ ಆರ್ಥಿಕವಾಗಿ ಸಾಲ, ಸೌಲಭ್ಯಗಳನ್ನು ನೀಡಿ ಸ್ವಾವಲಂಬಿ ಜೀವನ ನಡೆಸಲು ಸಹಕಾರ ಮಾಡುತ್ತಿರುವ ಏಕೈಕ ಸಂಘ ಸಂಸ್ಥೆ ಇದಾಗಿದೆ.
ತಾಲೂಕಿನಲ್ಲಿ ಎಲ್ಲ ವರ್ಗಗಳ ಜನರಿಗೆ ಸ್ವ ಉದ್ಯೋಗ ಕಲ್ಪಿಸಲು ಆರ್ಥಿಕವಾಗಿ ಸಹಾಯ ಮಾಡಿ,ಹಣ ಉಳಿಕೆಯ ಮಾರ್ಗೋಪಾಯವನ್ನು ತಿಳಿಸಿ,ಕುಡಿತ ಸೇರಿದಂತೆ ಇತರ ದುಶ್ಚಟಗಳಿಗೆ ಬಲಿಯಾಗುವುದನ್ನು ತಪ್ಪಿಸಲು ಮದ್ಯವ್ಯರ್ಜನ ಶಿಬಿರಗಳ ಮೂಲಕ ಕುಡಿತ ಬಿಡಿಸಿ ಸುಖಿ ಸಂಸಾರಕ್ಕೆ ನಾಂದಿ ಹಾಡಿದೆ ಎಂದರು.
ಪೂಜಾ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಕೆ.ಸಿ.ನಾರಾಯಣಗೌಡ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಕೇಶವ್ ದೇವಾಂಗ, ತಾಲೂಕು ಯೋಜನಾ ಅಧಿಕಾರಿ ತಿಲಕ್‌ರಾಜ್, ಜಿಲ್ಲಾ ಜನ ಜಾಗೃತಿ ವೇದಿಕೆಯ ಸದಸ್ಯರಾದ ಕೆ.ಎಸ್.ರಾಜೇಶ್, ಪದ್ಮಾವತಿ, ಜ್ಯೋತಿ, ಪುರಸಭಾ ಮಾಜಿ ಸದಸ್ಯ ಕೆ.ಆರ್.ನೀಲಕಂಠ, ಕಸಾಪ ಮಾಜಿ ಅಧ್ಯಕ್ಷ ಹರಿಚರಣತಿಲಕ್, ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಅರುಣ್‌ಕುಮಾರ್, ಹಿರಿಯ ಪತ್ರಕರ್ತರಾದ ಬಲ್ಲೇನಹಳ್ಳಿ ಮಂಜುನಾಥ್, ಗ್ರಾ.ಪಂ.ಸದಸ್ಯ ಆರ್.ಶ್ರೀನಿವಾಸ್, ಹೆಚ್.ಬಿ.ಮಂಜುನಾಥ್, ತಾಲ್ಲೂಕು ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ವರದಿಗಾರರ ಸಂಘದ ಅಧ್ಯಕ್ಷ ಹೆಚ್.ಬಿ.ರಾಜೇಶ್, ಶ್ರೀ ಧರ್ಮಸ್ಥಳ ಸಂಘದ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು ಸೇರಿದಂತೆ ಉಪಸ್ಥಿತರಿದ್ದರು.
————-ಶ್ರೀನಿವಾಸ್ ಕೆ ರ್ ಪೇಟೆ