ಬೇಲೂರು-ಈ ಜಗತ್ತಿನಲ್ಲಿ ಶಿಕ್ಷಕರಿಗಿಂತ ದೊಡ್ಡವರು ಜ್ಞಾನಕ್ಕಿಂತ ಮಿಗಿಲಾದದ್ದು ಯಾವುದೂ ಇಲ್ಲ-ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಗೌಡ

ಬೇಲೂರು-ಈ ಜಗತ್ತಿನಲ್ಲಿ ಶಿಕ್ಷಕರಿಗಿಂತ ದೊಡ್ಡವರು ಜ್ಞಾನಕ್ಕಿಂತ ಮಿಗಿಲಾದದ್ದು ಯಾವುದೂ ಇಲ್ಲ ಎಂದು ಬೇಲೂರು ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಗೌಡ ಹೇಳಿದರು.

ವಿದ್ಯಾವಿಕಾಸ ಪಬ್ಲಿಕ್ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ 2024-25 ನೇ ಸಾಲಿನ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಶಿಕ್ಷಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿ ಕೊಳ್ಳಲು ಪ್ರತಿಭಾ ಕಾರಂಜಿಯು ಒಂದು ಉತ್ತಮ ವೇದಿಕೆಯಾಗಿದೆ.ವಿದ್ಯಾರ್ಥಿಗಳು ಉತ್ತಮ ಜ್ಞಾನಾರ್ಜನೆಯನ್ನು ಪಡೆದುಕೊಂಡು ಶಿಕ್ಷಕರಿಗೆ,ಪೋಷಕರಿಗೆ ಹಾಗೂ ಶಾಲೆಗೆ ಗೌರವವನ್ನು ತರಬೇಕು ಎಂದು ಅವರು ಸಲಹೆ ನೀಡಿದರು.

ವಿದ್ಯಾವಿಕಾಸ ಶಾಲೆಯ ಅಧ್ಯಕ್ಷ ರಂಗನಾಥ್ ಮಾತನಾಡಿ,ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗುತ್ತಿವೆ.ಇಲ್ಲಿ ಸೋಲು ಗೆಲುವು ಮುಖ್ಯವಾಗಾದೆ,ಪಾಲ್ಗೊಳ್ಳುವಿಕೆ ಅಷ್ಟೇ ಮುಖ್ಯವಾಗುತ್ತದೆ.

ಈ ವರ್ಷ ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸದ ವಿದ್ಯಾರ್ಥಿಗಳು ಪ್ರಸ್ತುತ ಪಾಲ್ಗೊಳ್ಳುವ ವಿದ್ಯಾರ್ಥಿಗಳಿಂದ ಪ್ರೇರಣೆ ಪಡೆದು ಮುಂದಿನ ಪ್ರತಿಭಾ ಕಾರಂಜಿ ಕಾರ್ಯಕ್ರಮಗಳಲ್ಲಿ ತಮ್ಮ ಪ್ರತಿಭೆ ತೋರಿಸುವಂತೆ ಅವರು ಸಲಹೆ ನೀಡಿದರು.

ವಿದ್ಯಾರ್ಥಿಗಳು ಗುರಿಯನ್ನು ಮುಂದಿಟ್ಟುಕೊಂಡು ಪರಿಶ್ರಮದಿಂದ ಸಾಧನೆ ಮಾಡಿದರೆ ಬಹುದೊಡ್ಡ ವ್ಯಕ್ತಿಗಳಾಗಿ ಬೆಳೆಯುತ್ತಾರೆ.ಪೋಷಕರು ತಮ್ಮ ಮಕ್ಕಳನ್ನು ಕೇವಲ ವಿದ್ಯಾಭ್ಯಾಸಕ್ಕೆ ಸೀಮಿತ ಗೊಳಿಸದೆ ಅವರಲ್ಲಿರುವ ಸುಪ್ತ ಪ್ರತಿಭೆಗಳನ್ನು ಹೊರ ತರಲು ಮುಂದಾಗಬೇಕು ಎಂದರು.

ಈ ಸಂದರ್ಭದಲ್ಲಿ ಶಿವ ಮರಿಯಪ್ಪ,ವಿದ್ಯಾ ವಿಕಾಸ ಶಾಲೆಯ ಆಡಳಿತ ಅಧಿಕಾರಿ ಪದ್ಮ ಜೈ ಕುಮಾರ್,ಪ್ರಾಂಶುಪಾಲರಾದ ಬಾಲಾಜಿ,ಅನ್ನಪೂರ್ಣ ಎಜುಕೇಶನ್ ಟ್ರಸ್ಟ್ ನ ಆಚಾರ್ ರಂಗನಾಥ್ ಯುರೋ ಕಿಡ್ಸ್ ನ ಪ್ರಾಂಶುಪಾಲರಾದ ಪ್ರಿನ್ಸಿಪಾಲ್ ಶಾಲಿನಿ ಕೇಶವ್ ಇತರರು ಇದ್ದರು.

Leave a Reply

Your email address will not be published. Required fields are marked *

× How can I help you?