ಕೆ.ಆರ್.ಪೇಟೆ-ಪಟ್ಟಣದ ಪ್ರಗತಿ ಅನುಧಾನಿತ ಶಾಲೆಯಲ್ಲಿ ಅಜೀಮ್ ಪ್ರೇಮ್ಜಿ ಪ್ರತಿಷ್ಠಾನ ಹಾಗೂ ರಾಜ್ಯ ಸರ್ಕಾರದ ಮಧ್ಯಾಹ್ನದ ಉಪಹಾರ ಯೋಜನೆಯಡಿ ಶಾಲಾ ಮಕ್ಕಳಿಗೆ ದಿನನಿತ್ಯ ಬಿಸಿಯೂಟದೊಂದಿಗೆ ಮೊಟ್ಟೆ ಅಥವಾ ಬಾಳೆಹಣ್ಣು ವಿತರಿಸುವ ಯೋಜನೆಗೆ ನಿವೃತ್ತ ಪ್ರಾಂಶುಪಾಲ ಕೆ.ಕಾಳೇಗೌಡ ಮಕ್ಕಳಿಗೆ ಸಾಂಕೇತಿಕವಾಗಿ ಮೊಟ್ಟೆ ವಿತರಣೆ ಮಾಡುವ ಮೂಲಕ ಚಾಲನೆ ನೀಡಿದರು.
ಬಳಿಕ ಮಾತನಾಡಿ,ಅಜೀಮ್ ಪ್ರೇಮ್ಜಿ ಅವರು ಉತ್ತಮವಾದ ಕೆಲಸ ಮಾಡುತ್ತಿದ್ದಾರೆ.ರಾಜ್ಯದ ಲಕ್ಷಾಂತರ ಮಕ್ಕಳು ಪೌಷ್ಟಿಕಾಂಶದ ಕೊರತೆಯಿಂದ ನರಳುತ್ತಿದ್ದಾರೆ.ಅವರಿಗೆ ಈ ಯೋಜನೆಯಿಂದ ಅನುಕೂಲವಾಗಿದೆ ಎಂದರು.
ಪೌಷ್ಟಿಕ ಮತ್ತು ಆಹಾರ ತಜ್ಞೆ ಎಂ.ಕೆ ಮೋನಿಕಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಕ್ಕಳಿಗೆ ಮೊಟ್ಟೆಯನ್ನು ನೀಡುವುದರಿಂದ ಅವರ ಕಲಿಕೆಯ ಗುಣಮಟ್ಟ ಹೆಚ್ಚುತ್ತದೆ ಎಂದು ಶುಭ ಹಾರೈಸಿದರು.
ಶಾಲಾ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ ಪಲ್ಲವಿ, ಉಪಹಾರ ಯೋಜನೆಯ ವಿತರಣಾ ಸಮಿತಿಯ ಸದಸ್ಯರಾದ ಮಂಜುಳಾ, ಪಲ್ಲವಿ, ಮುಖ್ಯ ಶಿಕ್ಷಕರಾದ ಹೆಚ್.ಆರ್.ಗೋಪಾಲಕೃಷ್ಣ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಮಕ್ಕಳು ಮೊಟ್ಟೆ ಹಾಗೂ ಬಾಳೆಹಣ್ಣು ಸೇವಿಸಿ ಹರ್ಷ ವ್ಯಕ್ತಪಡಿಸಿದರು.
——————--ಶ್ರೀನಿವಾಸ್ ಕೆ ಆರ್ ಪೇಟೆ