ಚಿಕ್ಕಮಗಳೂರು-ವಿದ್ಯಾರ್ಥಿಗಳಲ್ಲಿ ಗೌಪ್ಯವಾಗಿ ಹುದುಗಿರುವ ವಿಭಿನ್ನ ಶೈಲಿಯ ಪ್ರತಿಭೆಗಳನ್ನು ಅನಾವರಣಗೊಳಿಸಲು ಶಿಕ್ಷಕರು ಹಾಗೂ ಪಾಲಕರು ಮುಂದಾಗಬೇಕು-ಬೋಜೇಗೌಡ

ಚಿಕ್ಕಮಗಳೂರು-ವಿದ್ಯಾರ್ಥಿಗಳಲ್ಲಿ ಗೌಪ್ಯವಾಗಿ ಹುದುಗಿರುವ ವಿಭಿನ್ನ ಶೈಲಿಯ ಪ್ರತಿಭೆಗಳನ್ನು ಅನಾವರಣಗೊಳಿಸಲು ಶಿಕ್ಷಕರು ಹಾಗೂ ಪಾಲಕರು ಮುಂದಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಬೋಜೇಗೌಡ ಹೇಳಿದರು.

ವಿಜಯನಗರದಲ್ಲಿ ತಾಲ್ಲೂಕು-ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿ ಕಾರಿಗಳ ಸಹಯೋಗದಲ್ಲಿ ಫ್ರೆಂಡ್ ಯುರೋ ಶಾಲೆಯಲ್ಲಿ ಬುಧವಾರ ಚಿಕ್ಕಮಗಳೂರು ಬಿ ವಲಯಮಟ್ಟದ ಪ್ರೌಢಶಾಲೆಗಳ ಪ್ರತಿಭಾ ಕಾರಂಜಿ 2024-25 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ಅನೇಕ ಅವಕಾಶಗಳಿಂದ ವಂಚಿತರಾಗುವುದು ಕಾಣುತ್ತಿದ್ದೇವೆ. ಆ ನಿಟ್ಟಿನಲ್ಲಿ ನಗರ ಸೇರಿದಂತೆ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಪ್ರತಿಭೆಯನ್ನು ಮುಕ್ತವಾಗಿ ಹೊರಚಿಮ್ಮಲು ಪ್ರತಿಭಾ ವೇದಿಕೆಗಳನ್ನು ಸೃಷ್ಟಿಸುವ ಮೂಲಕ ಪ್ರೋತ್ಸಾಹಿಸುತ್ತಿದೆ ಎಂದರು.

ಕಲೆ, ಸಂಗೀತ, ನಾಟಕ, ಸಾಹಿತ್ಯ, ನೃತ್ಯ ಸೇರಿದಂತೆ ವಿವಿಧ ಬಗೆಯ ಶೈಲಿಯಲ್ಲಿ ವಿದ್ಯಾರ್ಥಿಗಳು ಆಸಕ್ತಿ ಹೊಂದಿರುತ್ತಾರೆ. ಇವುಗಳನ್ನು ಸಮಾಜದ ಮುಂದಿಡುವ ಜವಾಬ್ದಾರಿ ಶಿಕ್ಷಕರ ಮೇಲಿದೆ. ಹೀಗಾಗಿ ಆಸಕ್ತಿ ಹೊಂದಿರುವ ಮಕ್ಕಳನ್ನು ಆಯ್ಕೆಗೊಳಿಸಿ ಪ್ರೇರೇಪಿಸಬೇಕು ಎಂದು ಹೇಳಿದರು.

ವಿದ್ಯಾರ್ಥಿಗಳು ಯಾವುದೇ ಅಂಜಿಕೆಯಿಲ್ಲದೇ ಪ್ರತಿಭೆ ಅನಾವರಣಕ್ಕೆ ಮುಂದಾದರೆ ತಾಲ್ಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಆಯ್ಕೆಗೊಂಡು ಉತ್ತಮ ಹೆಸರು ಗಳಿಸಬಹುದು ಎಂದ ಅವರು ಆ ನಿಟ್ಟಿನಲ್ಲಿ ಶಿಕ್ಷಕರು ಅರ್ಥಪೂರ್ಣವಾಗಿ ಮಕ್ಕಳಿಗೆ ಅಭ್ಯಾಸಿಸಬೇಕಾದ್ದು ಅತಿಮುಖ್ಯ ಎಂದು ಕಿವಿಮಾತು ಹೇಳಿದರು.

ಬಿಇಓ ಕಚೇರಿ ಶಿಕ್ಷಣ ಸಂಯೋಜಕ ಟಿ.ಕೆ.ಜಿ.ಅರಸ್ ಮಾತನಾಡಿ 1983ರ ಇಸವಿಯಲ್ಲಿ ಗೋವಿಂದೇಗೌಡರು ಸಚಿವರಾದ ವೇಳೆಯಲ್ಲಿ ಪ್ರಪ್ರಥಮ ಬಾರಿಗೆ ಚಿಕ್ಕಮಗಳೂರಿನಲ್ಲಿ ಪ್ರತಿಭಾ ಕಾರಂಜಿ ಆಯೋಜಿಸಲಾಗಿತ್ತು. ಇದೀಗ ರಾಜ್ಯಾದ್ಯಂತ ಈ ಕಾರ್ಯಕ್ರಮ ಅತ್ಯಂತ ಯಶಸ್ವಿಪೂರ್ಣವಾಗಿ ನಡೆದು ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುತ್ತಿದೆ ಎಂದರು.

ಇoದು ವಲಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡ ವಿಜೇತರು ಬಿಜಿಎಸ್ ಕಾಲೇಜಿನಲ್ಲಿ ಹಮ್ಮಿ ಕೊಂಡಿರುವ ತಾಲ್ಲೂಕು ಮಟ್ಟಕ್ಕೆ ಆಯ್ಕೆಗೊಳ್ಳಲಿದ್ದಾರೆ. ಕಳೆದ ಬಾರಿಯು ಕೂಡಾ ಜಿಲ್ಲೆಯಿಂದ ಅನೇಕ ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ಮನ್ನಣೆ ಗಳಿಸಿದ್ದು ಈ ಬಾರಿಯು ವಿದ್ಯಾರ್ಥಿಗಳು ಭಾಗವಹಿಸಿ ಜಿಲ್ಲೆಗೆ ಉತ್ತಮ ಹೆಸರು ತರಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಫ್ರೆಂಡ್ ಯುರೋ ಶಾಲೆ ಮುಖ್ಯೋಪಾಧ್ಯಾಯ ಮಂಜುನಾಥ್, ವಿದ್ಯಾರ್ಥಿಗಳ ಕನಸನ್ನು ನನಸುಗೊಳಿಸುವ ನಿಟ್ಟಿನಲ್ಲಿ ಪ್ರತಿಭಾ ಕಾರಂಜಿಯನ್ನು ತಮ್ಮ ಶಾಲೆಯಲ್ಲಿ ಆಯೋಜಿಸಿ ಪ್ರೋತ್ಸಾಹಿಸುತ್ತಿರುವುದು ಹೆಮ್ಮೆಯ ವಿಷಯ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಸಿ.ರವೀಶ್, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ್, ಸಮೂಹ ಸಂಪನ್ಮೂಲ ವ್ಯಕ್ತಿ ಸಿ.ಆರ್.ಪಿ.ಪೂರ್ಣೇಶ್, ಪಿಎಂ ಪೋಷಣ್‌ನ ಸಹಾಯಕ ನಿರ್ದೇಶಕ ನೀಲಕಂಠಪ್ಪ, ಸರ್ಕಾರಿ ನೌಕರರ ಸಂಘದ ನಿರ್ದೇಶಕ ಸಿದ್ದಮೂರ್ತಿ, ತಾಲ್ಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಉಮೇಶ್ ಮತ್ತಿತರರಿದ್ದರು.

ಕು.ಹಿಮಗಿರಿ ಪ್ರಾರ್ಥಿಸಿದರು.ಆಶಾರಾಜು ನಿರೂಪಿಸಿದರು. ಶಿಕ್ಷಕಿ ತನುಜಾ ನಟರಾಜ್ ಸ್ವಾಗತಿಸಿದರು.

—————ಸುರೇಶ್

Leave a Reply

Your email address will not be published. Required fields are marked *

× How can I help you?