ಕೆ.ಆರ್.ಪೇಟೆ-ಜಯ ಕರ್ನಾಟಕ ಸಂಘಟನೆ-ಹೊನ್ನೇನಹಳ್ಳಿ ಸೋಮಶೇಖರ್ ನೇತೃತ್ವದಲ್ಲಿ ನೂತನ ಪದಾಧಿಕಾರಿಗಳ ನೇಮಕ

ಕೆ.ಆರ್.ಪೇಟೆ-ಜಯ ಕರ್ನಾಟಕ ಸಂಘಟನೆಯ ನಗರ ಘಟಕ ಗೌರವಾಧ್ಯಕ್ಷರಾಗಿ ಮೋಹನ್‌ಕುಮಾರ್, ನಗರ ಸಂಘಟನಾ ಕಾರ್ಯದರ್ಶಿಯಾಗಿ ಸೋಮಶೇಖರ್ ಅವರನ್ನು ತಾಲೂಕು ಅಧ್ಯಕ್ಷ ಹೊನ್ನೇನಹಳ್ಳಿ ಸೋಮಶೇಖರ್ ರವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅವಿರೋಧ ಆಯ್ಕೆ ಮಾಡಲಾಯಿತು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಂಘಟನೆಯ ನಿಯಮಾನುಸಾರ ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನವನ್ನು ಬೋಧಿಸಿದ ನಂತರ ಸಂಘಟನೆಯ ಮಾರ್ಗಸೂಚಿ, ನೀತಿ ನಿಯಮಗಳನ್ನು ಹಾಗೂ ದ್ಯೇಯೋದ್ದೇಶಗಳನ್ನು ತಿಳಿಸಿ ತಾಲೂಕು ಅಧ್ಯಕ್ಷ ಹೊನ್ನೇನಹಳ್ಳಿ ಸೋಮಶೇಖರ್ ಮಾತನಾಡಿದರು.

ರಾಜ್ಯದ ನಾಡು, ನುಡಿ, ಜಲ ರಕ್ಷಣೆ ಮಾಡುವಲ್ಲಿ ಜಯ ಕರ್ನಾಟಕ ಸಂಘಟನೆ ತನ್ನದೇ ಆದ ಹೋರಾಟ ಮಾಡುತ್ತ ಬಂದಿದೆ. ಸಂಘಟನೆಯನ್ನು ಇನ್ನಷ್ಟು ಸದೃಢಗೊಳಿಸಲು ಹಲವು ರೂಪುರೇಷ ಸಿದ್ದಪಡಿಸಿಕೊಂಡಿದೆ. ಅವುಗಳು ಮತ್ತಷ್ಟು ಗಟ್ಟಿಯಾಗಲು ನಾವೆಲ್ಲರೂ ಒಗ್ಗಟ್ಟಿನಿಂದ ಮುಖ್ಯ ವಾಹಿನಿಗೆ ಬರುವ ಮೂಲಕ ಸಂಘಟಿತರಾಗಬೇಕು ಎಂದು ಪದಾಧಿಕಾರಿಗಳಿಗೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಜಯಕರ್ನಾಟಕ ಸಂಘಟನೆಯ ತಾಲೂಕು ಕಾರ್ಯಾಧ್ಯಕ್ಷ ಕೆರೆಕೋಡಿ ಆನಂದ್, ತಾಲ್ಲೂಕು ಜಯಕರ್ನಾಟಕ ಸಂಘಟನೆಯ ತಾಲ್ಲೂಕು ಯುವ ಘಟಕದ ಅಧ್ಯಕ್ಷ ಕೆ.ಎಲ್.ಮಹೇಶ್, ತಾಲ್ಲೂಕು ಉಪಾಧ್ಯಕ್ಷ ಯೋಗೇಶ್. ಸಂಘಟನಾ ಕಾರ್ಯದರ್ಶಿ ರಾಘವೇಂದ್ರ, ಶಂಕರ್, ಹರೀಶ್ ಬುಕನಕೆರೆ ಹೋಬಳಿ ಅಧ್ಯಕ್ಷ ಶಶಿಕುಮಾರ್, ತಾಲ್ಲೂಕು ವಿದ್ಯಾರ್ಥಿ ಘಟಕದ ಅಧ್ಯಕ್ಷ ಶಿವು, ತಾಲ್ಲುಕು ಮಹಿಳಾ ಅಧ್ಯಕ್ಷೆ ಜಯಲಕ್ಷ್ಮಮ್ಮ, ಅಕ್ಕಿಹೆಬ್ಬಾಳು ಹೋಬಳಿ ಘಟಕದ ಅಧ್ಯಕ್ಷೆ ನಾಗರತ್ನ, ಕಿಕ್ಕೇರಿ ಹೋಬಳಿ ಘಟಕದ ಅಧ್ಯಕ್ಷೆ ಕನ್ನಿಕಾ ಸೇರಿದಂತೆ ಅನೇಕ ಪದಾಧಿಕಾರಿಗಳು ಉಪಸ್ಥಿತರಿದ್ದರು.

————ಶ್ರೀನಿವಾಸ್ ಕೆ ಆರ್ ಪೇಟೆ

Leave a Reply

Your email address will not be published. Required fields are marked *

× How can I help you?