ಚಿಕ್ಕಮಗಳೂರು-ದ,ಲಿತ ಯುವಕನ ಮೇಲೆ ಹಲ್ಲೆ ಮಾಡಿರುವ ಅನ್ಯಕೋಮಿನ ಆರೋಫಿಗಳ ವಿರುದ್ಧ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಜಿಲ್ಲಾ ಬಿ.ಜೆ.ಪಿ ಕಾರ್ಯ ಕರ್ತರು ಸೋಮವಾರ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ.ವಿಕ್ರಮ್ ಅಮಟೆ ಮನವಿ ಸಲ್ಲಿಸಿದರು.
ಬಳಿಕ ಮಾತನಾಡಿದ ಜಿಲ್ಲಾ ಬಿ.ಜೆ.ಪಿ ಎ.ಸ್ಸಿ ಘಟಕದ ಅಧ್ಯಕ್ಷ ಕುರುವಂಗಿ ವೆಂಕಟೇಶ್ ತಾಲ್ಲೂಕಿನ ಅತ್ತಿಗುಂಡಿ ಗ್ರಾಮದ ದಲಿತ ಯುವಕ ಸತ್ಯಪ್ರಕಾಶ್ ಎಂಬುವವರ ಮೇಲೆ ಅನ್ಯಕೋಮಿನ ಗುಂಪು ಏಕಾಏಕಿ ಹಲ್ಲೆ ಮಾಡಿರುವ ಪರಿಣಾಮ ತೀವ್ರ ಗಾಯಗೊಂಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದರು.
ಕ್ಷುಲಕ ಕಾರಣದ ಹಿನ್ನೆಲೆಯಲ್ಲಿ ಅನ್ಯಕೋಮಿನ ಗುಂಪೊoದು ಹಲ್ಲೆ,ಜಾತಿ ನಿಂದನೆ ನಡೆಸಿರುವುದಲ್ಲದೇ ಕೊಲೆ ಬೆದರಿಕೆ ಹಾಕಲಾಗಿದೆ.ಇತ್ತೀಚಿನ ದಿನಗಳಲ್ಲಿ ದಲಿತರ ವಿರುದ್ಧ ನಿರಂತರವಾಗಿ ಹಲ್ಲೆ ಪ್ರಕರಣಗಳು ಹೆಚ್ಚುತ್ತಿದ್ದು ಇದಕ್ಕೆ ಸರ್ಕಾರ ಹಾಗೂ ಸಂಬoಧಿಸಿದ ಅಧಿಕಾರಿಗಳು ತೋರುತ್ತಿರುವ ನಿರ್ಲಕ್ಷ್ಯವೇ ನೇರ ಕಾರಣ ಎಂದು ಹೇಳಿದರು.
ಅತ್ತಿಗುಂಡಿ ಭಾಗದಲ್ಲಿ ದಲಿತ ಸಮುದಾಯಕ್ಕೆ ರಕ್ಷಣೆಯೇ ಇಲ್ಲದಂತಾಗಿದೆ. ಸಣ್ಣಪುಟ್ಟ ಕ್ಷುಲಕ ಕಾರಣ ದಿಂದ ಅನ್ಯಕೋಮಿನ ಗುಂಪೊoದು ಮಾರಣಾಂತಿಕ ಶಸ್ತ್ರಗಳಿಂದ ಹಲ್ಲೆಗೊಳಿಸಿರುವುದು ತಲೆತಗ್ಗಿಸುವಂತ ವಿಚಾರ. ಸದ್ಯ ಆರೋಫಿಗಳನ್ನೂ ಬಂಧಿಸಿದ್ದು, ಅವರುಗಳನ್ನು ಅತ್ಯಂತ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು.
ಕೂಡಲೇ ಹಲ್ಲೆ ನಡೆಸಿರುವ ಅನ್ಯಕೋಮಿನ ಗುಂಪಿನ ವಿರುದ್ಧ ದಲಿತ ದೌರ್ಜನ್ಯ ಪ್ರಕರಣದಡಿ ಪ್ರಕರಣ ದಾಖಲಿಸಬೇಕು. ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಪ್ರಕರಣದಲ್ಲಿ ನಿರ್ಲಕ್ಷ್ಯ ಧೋರಣೆ ಅನುಸರಿಸಿದರೆ ಜಿಲ್ಲೆಯಾದ್ಯಂತ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ಗೃಹಸಚಿವ ಜಿ.ಪರಮೇಶ್ವರ್ ಅವರಿಗೆ ಜಿಲ್ಲಾಡಳಿತ ಮುಖಾಂತರ ಕಾರ್ಯಕರ್ತರು ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಎಸ್.ಸಿ ಮೋರ್ಚಾ ಕಾರ್ಯದರ್ಶಿ ಸೀತಾರಾಮ ಭರಣ್ಯ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಜೆ.ಡಿ.ಲೋಕೇಶ್, ಮಾಜಿ ಗ್ರಾಮಾಂತರ ಎಸ್.ಸಿ ಮೋರ್ಚಾ ಅಧ್ಯಕ್ಷ ಹಂಪಯ್ಯ, ಜಿಲ್ಲಾ ಮಾಧ್ಯಮ ಸಹ ಪ್ರಮುಖ ಕೇಶವ ಹಿರೇಮಗಳೂರು, ರಾಜ್ಯ ಶಿಕ್ಷಣ ಪ್ರಕೋಷ್ಠದ ಸದಸ್ಯ ಪ್ರಕಾಶ್, ಗ್ರಾಮಾಂತರ ಮಂಡಲ ಎಸ್.ಸಿ ಮೋರ್ಚಾ ಕಾರ್ಯದರ್ಶಿ ರವಿಕುಮಾರ್, ಹಿರಿಯರಾದ ಗಂಗಾಧರ್, ಶ್ರೀನಿವಾಸ್, ಸತೀಶ್, ಶಿವಕುಮಾರ್ ಇತರರು ಉಪಸ್ಥಿತರಿದ್ದರು.