ಆಲೂರು-ಮಿತಿಮೀರಿದ ಬೀದಿನಾಯಿಗಳ ಹಾವಳಿ-ಪುರಸಭೆಗೆ ಹಿಡಿಶಾಪ ಹಾಕುತ್ತಿರುವ ಸಾರ್ವಜನಿಕರು-ಕ್ರಮಕ್ಕೆ ಆಗ್ರಹ

ಆಲೂರು-ನಗರದಲ್ಲಿ ಬೀದಿ ನಾಯಿಗಳ ಹಾವಳಿ ತೀವ್ರ ಹೆಚ್ಚಳವಾಗಿದ್ದು ಸಾರ್ವಜನಿಕರು, ವಿದ್ಯಾರ್ಥಿಗಳು ತಿರುಗಾಡಲು ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಪಟ್ಟಣದ ಎಲ್ಲ ಬೀದಿಗಳಲ್ಲೂ ಗುಂಪು-ಗುಂಪಾಗಿ ಬೀಡು ಬಿಟ್ಟಿರುವ ಬೀದಿ ನಾಯಿಗಳು ವಾಹನ ಸವಾರರು ಹಾಗು ಸಾರ್ವಜನಿಕರ ಮೇಲೆ ದಾಳಿ ಮಾಡುತ್ತಿವೆ.ಹತ್ತಾರು ವಿದ್ಯಾರ್ಥಿಗಳು ನಾಯಿಗಳ ಕಡಿತಕ್ಕೆ ಈಡಾಗಿದ್ದು ಪೋಷಕರು ಮಕ್ಕಳನ್ನು ಶಾಲೆಗಳಿಗೆ ಕಳುಹಿಸಲು ಭಯಪಡುವ ವಾತಾವರಣ ನಿರ್ಮಾಣವಾಗಿದೆ.

ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕಾದ ಪುರಸಭೆಯ ಚುನಾಯಿತ ಪ್ರತಿನಿಧಿಗಳು ಹಾಗು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು ಆದಷ್ಟು ಶೀಘ್ರ ಕ್ರಮಕ್ಕೆ ಮುಂದಾಗುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

————ದರ್ಶನ ಕೆರೇಹಳ್ಳಿ

Leave a Reply

Your email address will not be published. Required fields are marked *

× How can I help you?