ಆಲೂರು-ವಿದ್ಯಾರ್ಥಿಗಳು ಚಿಕ್ಕಂದಿನಿಂದಲೇ ನಾಯಕತ್ವದ ಗುಣ ಹಾಗೂ ಸಾಮಾಜಿಕ ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು ಎಂದು ಪಾಳ್ಯ ಗ್ರಾಮಪಂಚಾಯಿತಿ ಅಧ್ಯಕ್ಷೆ ಭವ್ಯ ಪುರುಷೋತ್ತಮ್ ತಿಳಿಸಿದರು.
ಅವರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಹಳೆ ಪಾಳ್ಯ ಗ್ರಾಮದಲ್ಲಿ ಆಯೋಜಿಸಿದ್ದ 2023-24ನೇ ಶೈಕ್ಷಣಿಕ ಸಾಲಿನ ಎನ್.ಎಸ್.ಎಸ್ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಭಾರತದಲ್ಲಿ ಎನ್.ಎಸ್.ಎಸ್ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದೆ. ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದರ ಮೂಲಕ ಗ್ರಾಮೀಣ ಪ್ರದೇಶದ ಜನರ ಜೀವನ ಕ್ರಮವನ್ನು ಅರಿಯುವುದರ ಜೊತೆಗೆ ಶಿಸ್ತು, ಭಾತೃತ್ವ, ಸಂಯಮ, ಸಮಯಪ್ರಜ್ಞೆ ಹಾಗೂ ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು ಎಂದರು.
ಪ್ರಾಂಶುಪಾಲ ಟಿ. ಪಿ ಪುಟ್ಟರಾಜು ಮಾತನಾಡಿ,ವಿದ್ಯಾರ್ಥಿಗಳಲ್ಲಿರುವ ವಿಶೇಷ ಪ್ರತಿಭೆಗಳನ್ನು ಹೊರ ಹಾಕಲು ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರವು ಸೂಕ್ತವಾದ ವೇದಿಕೆಯಾಗಿರುತ್ತದೆ. ಶಿಬಿರಾರ್ಥಿಗಳು ಶಿಸ್ತು, ಸಂಯಮ ಮತ್ತು ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳುಲು ಶಿಬಿರವು ಸಹಕಾರಿಯಾಗಲಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪಿ.ಎಲ್. ಲಿಂಗರಾಜು, ಜಿಲ್ಲಾ ಕಾರ್ಯದರ್ಶಿ ರಘು,ಕಾಲೇಜಿನ ಸಿಡಿಸಿ ಸದಸ್ಯ ಬಾಲಕೃಷ್ಣ, ಶಂಕರಲಿಂಗೇಗೌಡ,ಸ್ಥಳೀಯ ಮುಖಂಡ ಚರಣ್, ಪುರುಷೋತ್ತಮ ಜಿ. ಕಾಲೇಜಿನ ಅಧ್ಯಾಪಕರು, ಕಾಲೇಜಿನ ಆಡಳಿತ ವರ್ಗದವರು ಹಾಗೂ ಹಳೇ ಪಾಳ್ಯ ಗ್ರಾಮಸ್ಥರು ಉಪಸ್ಥಿತರಿದ್ದರು.
—————–-ಧರ್ಶನ್ ಕೆರೇಹಳ್ಳಿ