ಕೆ.ಆರ್.ಪೇಟೆ-ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಆಲಂಬಾಡಿಕಾವಲು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಎ.ಎಂ.ಸoಜೀವಪ್ಪ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬ್ಯಾಂಕಿನ ಈ ಹಿಂದಿನ ಅಧ್ಯಕ್ಷರಾಗಿದ್ದ ಆಶಾದೇವರಾಜು ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಇಂದು ಚುನಾವಣೆ ನಿಗಧಿಯಾಗಿತ್ತು. ಅಧ್ಯಕ್ಷ ಸ್ಥಾನ ಬಯಸಿ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯರಾದ ಎ.ಎಂ.ಸoಜೀವಪ್ಪ ಅವರನ್ನು ಹೊರತುಪಡಿಸಿ ಬೇರೆ ಯಾರೂ ಸಹ ನಾಮಪತ್ರ ಸಲ್ಲಿಸದೇ ಇರುವ ಕಾರಣ ಅವಿರೋಧ ಆಯ್ಕೆ ನಡೆಯಿತು.
ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಎ.ಎಂ.ಸoಜೀವಪ್ಪ ಅವರನ್ನು ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರಾದ ಪಿ.ನಂಜುoಡೇಗೌಡ ಅವರು ಅಭಿನಂದಿಸಿದ ಮಾತನಾಡಿ, ಸಹಕಾರ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಎ.ಎಂ.ಸoಜೀವಪ್ಪ್ಪ ರವರು ಮಾಜಿ ಸ್ಪೀಕರ್ ಕೃಷ್ಣ ಅವರ ಅಪ್ಪಟ ಅನುಯಾಯಿಗಳು.ಅತಿ ಚಿಕ್ಕ ವಯಸ್ಸಿನಲ್ಲಿಯೇ ತಾಲ್ಲೂಕು ಪಂಚಾಯಿತಿ ಸದಸ್ಯರಾಗಿ ಈ ಭಾಗದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಸ್ಪಂಧಿಸಿ ಕೆಲಸ ಮಾಡಿದ್ದಾರೆ.
ಮಂಡ್ಯ ಜಿಲ್ಲಾ ಸಹಕಾರ ಮಾರಾಟ ಒಕ್ಕೂಟ ಅಧ್ಯಕ್ಷರಾಗಿ, ಎಪಿಎಂಸಿ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ ಎಂದರು.
ಈ ಹಿಂದೆ ಆಲಂಬಾಡಿಕಾವಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಐದು ವರ್ಷಗಳ ಹಿಂದೆ ಕೆಲಸ ಮಾಡಿದ್ದಾರೆ. ಈಗ ಮತ್ತೊಮ್ಮೆ ಸಂಘದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಸಹಕಾರ ಕ್ಷೇತ್ರದಲ್ಲಿ ತಮ್ಮ ಚಾಪು ಮೂಡಿಸಿದ್ದಾರೆ. ಅಲ್ಲದೇ ಗ್ರಾಮ ಪಂಚಾಯಿತಿಗೆ ತಮ್ಮ ಬೆಂಬಲಿಗರನ್ನು ಗೆಲ್ಲಿಸುವ ಮೂಲಕ ಅಧ್ಯಕ್ಷರನ್ನಾಗಿ ಮಾಡಿ, ಆಲಂಬಾಡಿಕಾವಲು ಗ್ರಾಮ ಸೇರಿದಂತೆ ಸುತ್ತ ಮುತ್ತಲ ಹತ್ತಾರು ಗ್ರಾಮಗಳ ಅಭಿವೃದ್ದಿಗೆ ಶ್ರಮಿಸುವ ಮೂಲಕ ಉತ್ತಮ ಜನನಾಯಕರಾಗಿ ಹೊರ ಹೊಮ್ಮಿದ್ದಾರೆ ಎಂದು ಹೇಳಿದರು.
ಇಂತಹ ಸ್ನೇಹಜೀವಿ ಸರಳ ಸಜ್ಜನ ರಾಜಕಾರಣಿಯಾಗಿರುವ ಎ.ಎಂ.ಸoಜೀವಪ್ಪ ಅವರು ಮುಂಬರುವ ಜಿಲ್ಲಾ ಪಂಚಾಯಿತಿ ಕ್ಷೇತ್ರದಿಂದ ಆಯ್ಕೆಯಾಗುವ ಮೂಲಕ ಅಕ್ಕಿಹೆಬ್ಬಾಳು ಹೋಬಳಿ, ಸೇರಿದಂತೆ ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ದುಡಿಯುವ ಶಕ್ತಿಯನ್ನು ಆ ದೇವರು ನೀಡಲಿ ಎಂದು ಪಿ.ನಂಜುoಡೇಗೌಡ ಆಶಯ ವ್ಯಕ್ತಪಡಿಸಿದರು.
ಎ.ಎಂ.ಸoಜೀವಪ್ಪ ಮಾತನಾಡಿ, ಸಂಘದ ಅಧ್ಯಕ್ಷ ಸ್ಥಾನಕ್ಕೆ ನನ್ನನ್ನು ಅವಿರೋಧವಾಗಿ ಆಯ್ಕೆಯಾಗಲು ಅವಕಾಶ ಮಾಡಿಕೊಟ್ಟ ಸಂಘದ ಎಲ್ಲಾ ನಿರ್ದೇಶಕರಿಗೆ ಹಾಗೂ ಸಂಘದ ವ್ಯಾಪ್ತಿಯ ಎಲ್ಲಾ ಮುಖಂಡರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ನನಗೆ ಸಿಕ್ಕಿರುವ ಅಧಿಕಾರದ ಅವಧಿಯಲ್ಲಿ ಸಂಘದ ಎಲ್ಲಾ ನಿರ್ದೇಶಕರು ಹಾಗೂ ಸಂಘದ ನೌಕರ ವರ್ಗದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂಘದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದರು.
ರೈತರಿಗೆ ಸಂಘದ ಮೂಲಕ ದೊರೆಯಬಹುದಾದ ಎಲ್ಲಾ ಸೌಲಭ್ಯಗಳನ್ನು ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಸಂಘದಿoದ ಸಾಲ ಪಡೆದ ಶೇರುದಾರರು ಸಕಾಲಕ್ಕೆ ಮರುಪಾವತಿ ಮಾಡುವ ಮೂಲಕ ಸಂಘದ ಅಭಿವೃದ್ಧಿಗೆ ಕೈಜೋಡಿಸಬೇಕು. ಸಹಕಾರ ಸಂಘದಲ್ಲಿ ಯಾವುದೇ ರಾಜಕೀಯ ಬೆರೆಸದೇ ಸಂಘದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು.
ಸಂಘದ ಬ್ಯಾಂಕಿoಗ್ ಶಾಖೆಯಲ್ಲಿ ಮಹಿಳಾ ಸಂಘಗಳು, ಎಲ್ಲಾ ಶೇರುದಾರರು ಹಾಗೂ ಜನಸಾಮಾನ್ಯರು ಸಹ ಉಳಿತಾಯ ಖಾತೆ ತೆರೆದು ವ್ಯವಹರಿಸುವ ಮೂಲಕ ಬ್ಯಾಂಕಿoಗ್ ಶಾಖೆಯ ಅಭಿವೃದ್ದಿಗೆ ಸಹಕಾರ ನೀಡಬೇಕು.ಮಹಿಳಾ ಸಂಘಗಳಿಗೆ ಕಡಿಮೆ ಬಡ್ಡಿ ದರದಲ್ಲಿ 10ಲಕ್ಷ ರೂಗಳವರೆಗೆ ಸಾಲ ನೀಡಲಾಗುವುದು ಇದನ್ನು ಮಹಿಳಾ ಸಂಘಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.
ಸಂಘದ ಉಪಾಧ್ಯಕ್ಷ ನಾಗೇಗೌಡ, ನಿರ್ದೇಶಕರಾದ ಎ.ಟಿ.ಕರಿಶೆಟ್ಟಿ, ಜಿ.ಎಸ್.ಕುಮಾರ್, ಡಿ.ಸುರೇಶ್, ಎ.ಎಂ.ಪುಟ್ಟಶೆಟ್ಟಿ, ರಾಜಾನಾಯಕ್, ಜಿ.ಎಸ್.ಕುಮಾರ್, ಶಾಂತಮ್ಮಕೃಷ್ಣೇಗೌಡ, ಎ.ಎನ್.ಆಶಾದೇವರಾಜು, ರಾಜೇಗೌಡ, ಮಹಾದೇವಪ್ಪ, ಮುಖಂಡರಾದ ಪಿ.ನಂಜುoಡೇಗೌಡ, ಎಂ.ಮೋಹನ್, ಎ.ಎಂ.ಮoಜುನಾಥ್, ಪಠಾಣ್‌ಬಾಬು, ಗ್ರಾ.ಪಂ.ಅಧ್ಯಕ್ಷ ವೆಂಕಟೇಶ್, ಧರ್ಮ, ,ಮಹಮದ್ ಗೌಸ್ ಕೃಷ್ಣಮೂರ್ತಿ, ಪ್ರಶಾಂತ್‌ಕುಮಾರ್, ಕಾಳೇಗೌಡ, ಅಬ್ದುಲ್ ಸಿದ್ದಿಕ್, ಬಸವನಹಳ್ಳಿ ಮುರುಳಿ, ಕೆಂಪರಾಜು, ಆಲಂಬಾಡಿಕಾವಲು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ದಿವಾಕರ್ ಮಾಸ್ತಿಗೌಡ ಸೇರಿದಂತೆ ಸಂಘದ ವ್ಯಾಪ್ತಿಯ ಎಲ್ಲಾ ಗ್ರಾಮಗಳ ಮುಖಂಡರು ಹಾಗೂ ಯುವಕರು ಉಪಸ್ಥಿತರಿದ್ದರು.
ಚುನಾವಣಾಧಿಕಾರಿಯಾಗಿ ಮಂಡ್ಯ ಸಹಕಾರ ಇಲಾಖೆಯ ಅಧಿಕಾರಿ ಜಗದೀಶ್ ,ಸಹ ಚುನಾವಣಾಧಿಕಾರಿಯಾಗಿ ಸಂಘದ ಕಾರ್ಯದರ್ಶಿ ಎ.ಜೆ.ಧರ್ಮ ಕಾರ್ಯನಿರ್ವಹಣೆ ಮಾಡಿದರು.
——————ಶ್ರೀನಿವಾಸ್ ಕೆ ಆರ್ ಪೇಟೆ