ಕೆ.ಆರ್.ಪೇಟೆ:ತಾಲೂಕನ್ನು ಶೈಕ್ಷಣಿಕವಾಗಿ ಮುಂದೆ ತರಲು ಸಾಕಷ್ಟು ಯೋಜನೆಗಳನ್ನು ರೂಪಿಸಲಾಗುತ್ತಿದೆ-ಹೆಚ್ ಟಿ ಮಂಜು

ಕೆ.ಆರ್.ಪೇಟೆ:ತಾಲೂಕಿನ ಪದವಿ ವಿದ್ಯಾರ್ಥಿಗಳು ಹಾಗು ತಾಂತ್ರಿಕ ವಿದ್ಯಾರ್ಥಿಗಳಿಗಾಗಿ ಡಿ.ದೇವರಾಜ ಅರಸು ವಿದ್ಯಾರ್ಥಿ ನಿಲಯದ ಅಗತ್ಯತೆಯನ್ನು ಕಂಡು ಮಂಜೂರು ಮಾಡುವಂತೆ ಸರಕಾರಕ್ಕೆ ಮನವಿ ಮಾಡಿದ್ದೆ.ಅದರಂತೆ ಇಂದು ಬಾಡಿಗೆ ಕಟ್ಟಡದಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯವನ್ನು ಪ್ರಾರಂಭಿಸುತ್ತಿದ್ದು ಆದಷ್ಟು ಶೀಘ್ರ ಸ್ವಂತ ಕಟ್ಟಡಕ್ಕೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳುವುದಾಗಿ ಶಾಸಕ ಹೆಚ್ ಟಿ ಮಂಜು ತಿಳಿಸಿದರು.

ಪಟ್ಟಣದಲ್ಲಿ ಪಾಲಿಟೆಕ್ನಿಕ್ ಹಿಂಭಾಗದಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯವನ್ನು ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳ ಕಾಲೇಜು ಶಿಕ್ಷಣಕ್ಕೆ ಮಾತ್ರವಲ್ಲದೆ ವಿವಿಧ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಓದಲು ವಿದ್ಯಾರ್ಥಿ ನಿಲಯಗಳು ಸಾಕಷ್ಟು ಅನುಕೂಲವಾಗುತ್ತವೆ.ಡಿ.ದೇವರಾಜ ಅರಸು ಅವರು ಸರ್ವ ಸಮುದಾಯಗಳಿಗೆ ಶಕ್ತಿ ತುಂಬಲು ಹಲವಾರು ಯೋಜನೆ ರೂಪಿಸಿದ್ದರು.ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಸಾಧನೆ ಮಾಡಬೇಕಾದರೆ ಅವರಿಗೆ ಮೊದಲು ಮೂಲಭೂತ ಸೌಲಭ್ಯಗಳಿ ರಬೇಕು.ತಾಲೂಕನ್ನು ಶೈಕ್ಷಣಿಕವಾಗಿ ಮುಂದೆ ತರಲು ಸಾಕಷ್ಟು ಯೋಜನೆಗಳನ್ನು ರೂಪಿಸುತ್ತಿದ್ದು ಅದರ ಭಾಗವೇ ಡಿ. ದೇವರಾಜ ಅರಸು ಬಾಲಕಿಯರ ವಿದ್ಯಾರ್ಥಿನಿಲಯ ಆರಂಭ ಎಂದರು.

ಸ್ವಂತ ಕಟ್ಟಡದ ನಿರ್ಮಾಣಕ್ಕೂ ಶೀಘ್ರವೇ ಅನುದಾನ ತರಲು ಸರ್ಕಾರಕ್ಕೆ ಮನವಿ ಸಲ್ಲಿಸುತ್ತೇನೆ .ವಿದ್ಯಾರ್ಥಿಗಳು ಸರ್ಕಾರದಿಂದ ಒದಗಿಸುವ ಎಲ್ಲ ಸೌಲಭ್ಯಗಳನ್ನು ಸರಿಯಾಗಿ ಉಪಯೋಗ ಮಾಡಿಕೊಂಡು ತಮ್ಮ ತಂದೆ, ತಾಯಿಯರ ಆಸೆಯನ್ನು ಈಡೇರಿಸಬೇಕು.ವಿದ್ಯಾಭ್ಯಾಸದ ಜೊತೆಗೆ ಉತ್ತಮ ಸಂಸ್ಕಾರ ಕಲಿಯಬೇಕು. ತಂದೆ, ತಾಯಿ, ಗುರು ಹಿರಿಯರಿಗೆ ಗೌರವ ಕೊಡಬೇಕು ಎಂದು ಶಾಸಕರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಬಿ.ಸಿ‌ಎಂ ಅಧಿಕಾರಿ ವೆಂಕಟೇಶ್,ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಾದ ಡಾ.ನಾಗರಾಜು,ತಾಲ್ಲೂಕು ಯೋಜನಾಧಿಕಾರಿ ಶ್ರೀನಿವಾಸ್,ನಿಲಯ ಪಾಲಕರಾದ ಡಿ.ಕೆ. ಪ್ರದೀಪ್, ಹೆಚ್.ವಿ. ಜಗದೀಶ್, ಚಿರಂಜೀವಿ, ಚೈತ್ರ,ಚಂದ್ರಶೇಖರ್, ಗೀತಾ,ಪುಷ್ಪ,ಶೃತಿ,ಉಪನ್ಯಾಸಕರಾದ ಮಹಾಲಿಂಗೇಗೌಡ, ವಿದ್ಯಾರ್ಥಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

——-—ಶ್ರೀನಿವಾಸ್ ಕೆ ಆರ್ ಪೇಟೆ

Leave a Reply

Your email address will not be published. Required fields are marked *

× How can I help you?