ಚಿಕ್ಕಮಗಳೂರು-ಬಹುನಿರೀಕ್ಷಿತ ಶಿಗ್ಗಾಂವಿ, ಚನ್ನಪಟ್ಟಣ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಅತ್ಯಧಿಕ ಮತಗಳನ್ನು ಗಳಿಸುವ ಮುಖಾಂತರ ವಿಜಯ ಸಾಧಿಸಲಿದ್ದಾರೆ ಎಂದು ಕೆಪಿಸಿಸಿ ಸಂಯೋಜಕ ಹಿರೇಮಗಳೂರು ರಾಮಚಂದ್ರ ಹೇಳಿದ್ದಾರೆ.
ಈ ಕುರಿತು ಶುಕ್ರವಾರ ಹೇಳಿಕೆಯಲ್ಲಿ ತಿಳಿಸಿರುವ ಅವರು ರಾಜ್ಯಸರ್ಕಾರದ ಪಂಚಗ್ಯಾರoಟಿ ಯೋಜನೆಗಳಿಂದ ರಾಜ್ಯದ ಅಸಹಾಯಕರು ಹಾಗೂ ಬಡವರ್ಗದವರಿಗೆ ಬಹಳಷ್ಟು ಅನುಕೂಲವಾಗಿರುವ ಕಾರಣ ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಬೇರಿ ಬಾರಿಸುವುದು ಶತಸಿದ್ಧ ಎಂದಿದ್ದಾರೆ.
ಮುಖ್ಯಮoತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸದೃಢ ಹಾಗೂ ಬಡವರ ಸರಕಾರದ ಬಗ್ಗೆ ಮೂರು ಕ್ಷೇತ್ರದ ಜನತೆ ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ.ಈ ಯೋಜನೆಗಳೇ ಪಕ್ಷದ ಅಭ್ಯರ್ಥಿಗಳಿಗೆ ವರದಾನವಾಗಿ ಹೆಚ್ಚಿನ ಮತದಿಂದ ಜಯ ಸಾಧಿ ಲಿದ್ದಾರೆ ಎಂದು ಹೇಳಿದ್ದಾರೆ.
ಈಗಾಗಲೇ ಮೂರು ವಿಧಾನಸಭಾ ಕ್ಷೇತ್ರದ ಜನಮಾನಸದಲ್ಲಿ ಗ್ಯಾರಂಟಿ ಯೋಜನೆಗಳಿಂದ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವ ವಾತಾವರಣ ಸೃಷ್ಟಿಯಾಗಿದೆ. ಇದರಿಂದ ವಿರೋಧ ಪಕ್ಷ ಗಳಿಗೆ ಯಾವುದೇ ಅವಕಾಶ ಸಿಗದೇ ಸಂಪೂರ್ಣ ಸಹಕಾರ ಕಾಂಗ್ರೆಸ್ಗೆ ಲಭ್ಯವಾಗಲಿದೆ ಎಂದಿದ್ದಾರೆ.