ಕೆ.ಆರ್.ಪೇಟೆ- ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾಗಿ ನೇಮಕಗೊಂಡ ಎ.ಬಿ.ಕುಮಾರ್ ಅವರನ್ನು ಅಭಿನಂದಿಸಿದ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್
ಕೆ.ಆರ್.ಪೇಟೆ-ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕೆ.ಆರ್.ಪೇಟೆ ತಾಲ್ಲೂಕು ಅಧ್ಯಕ್ಷರಾಗಿ ಅಗ್ರಹಾರಬಾಚಹಳ್ಳಿ ಎ.ಬಿ.ಕುಮಾರ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ.
ಉಳಿದಂತೆ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾಗಿ ವಳಗೆರೆ ಮೆಣಸ ಕುಮಾರ್, ಚಟ್ಟೇನಹಳ್ಳಿ ಉದೇಶ್, ಸಿಂಗನಹಳ್ಳಿ ಗೋಪಾಲ್, ಬಂಡಿಹೊಳೆ ಯೋಗೇಶ್, ಗೋವಿಂದನಹಳ್ಳಿಕೊಪ್ಪಲು ಶ್ಯಾಮಣ್ಣ, ಬೂಕನಕೆರೆ ಬಿ.ಸಿ.ಮಾಧು, ದೊಡ್ಡತಾರಹಳ್ಳಿ ಸೋಮಶೇಖರ್, ಅಗ್ರಹಾರ ಕೆ.ಎಸ್.ಆರ್.ಟಿ.ಸಿ ಶಿವಣ್ಣ, ಗೊರವಿ ಕುಮಾರ್, ಟೌನ್ ಕನಕದಾಸನಗರ ಶಿವಮ್ಮ, ಸಿಂಧುಘಟ್ಟ ಅಫೀಜ್ ಉಲ್ಲಾ, ಬೊಮ್ಮೇನಹಳ್ಳಿ ಲತಾ, ಬೂಕನಕೆರೆ ರೂಪಾ, ಯಗಚಗುಪ್ಪೆ ಶಿವಲಿಂಗಪ್ಪ, ಹಾಗೂ ಸದಸ್ಯ ಕಾರ್ಯದರ್ಶಿಯಾಗಿ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಸುಷ್ಮಾ ಅವರನ್ನು ನೇಮಕ ಮಾಡಿ ಮಂಡ್ಯ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹೊರಡಿಸಿರುವ ತಮ್ಮ ಲಿಖಿತ ಆದೇಶದಲ್ಲಿ ತಿಳಿಸಿದ್ದಾರೆ.
ನೂತನ ಅಧ್ಯಕ್ಷರಾದ ಎ.ಬಿ.ಕುಮಾರ್ ಅವರನ್ನು ಅಭಿನಂದಿಸಿ ಮಾತನಾಡಿದ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಅವರು, ಐದು ಗ್ಯಾರಂಟಿಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವ ಸಂಬoಧ ರಾಜ್ಯ ಸರ್ಕಾರವು ಗ್ಯಾರಂಟಿ ಅನುಷ್ಠಾನ ಸಮಿತಿಯನ್ನು ರಾಜ್ಯ ಮಟ್ಟದಲ್ಲಿ, ಜಿಲ್ಲಾ ಮಟ್ಟದಲ್ಲಿ, ತಾಲ್ಲೂಕು ಮಟ್ಟದಲ್ಲಿ ರಚನೆ ಮಾಡಿರುವುದು ಶ್ಲಾಘನೀಯವಾದುದು.
ನಮ್ಮ ಸರ್ಕಾರವು ಮಾಡುತ್ತಿರುವ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ಮನವರಿಕೆ ಮಾಡಿಕೊಡುವ ಕೆಲಸವನ್ನು ಈ ಸಮಿತಿಯು ಮಾಡಬೇಕು. ಈ ಮೂಲಕ ಮುಂಬರುವ ಎಲ್ಲಾ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಸಮಿತಿಯು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.
ಗೃಹಲಕ್ಷ್ಮೀ ಯೋಜನೆ, ಗೃಹ ಜ್ಯೋತಿ ಯೋಜನೆ, ಶಕ್ತಿ ಯೋಜನೆ, ಯುವ ನಿಧಿ ಯೋಜನೆಗಳು ಜನರ ಸ್ವಾವಲಂಬನೆಗೆ ಹಾಗೂ ಆರ್ಥಿಕ ಸದೃಢತೆಗೆ ಸಹಕಾರಿಯಾಗಿವೆ ಇದನ್ನು ಕಾಂಗ್ರೆಸ್ ಸರ್ಕಾರವು ನೀಡಿದೆ ಎಂಬುದನ್ನು ಜನಸಾಮಾನ್ಯರಿಗೆ ಮನವರಿಕೆ ಮಾಡಿಕೊಡುವ ಅಗತ್ಯವಾಗಿದೆ ಎಂದು ಕೆ.ಬಿ.ಚಂದ್ರಶೇಖರ್ ಅಭಿಪ್ರಾಯಪಟ್ಟರು.
ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿಯ ನೂತನ ಅಧ್ಯಕ್ಷರಾದ ಎ.ಬಿ.ಕುಮಾರ್ ಹಾಗೂ ಎಲ್ಲಾ ಸದಸ್ಯರನ್ನು ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ, ಮಾಜಿ ಶಾಸಕರಾದ ಕೆ.ಬಿ.ಚಂದ್ರಶೇಖರ್,ಬಿ.ಪ್ರಕಾಶ್, ತಾಲ್ಲೂಕು ಟಿಎಪಿಸಿಎಂಎಸ್ ಸಂಸ್ಥೆಯ ಅಧ್ಯಕ್ಷ ಬಿ.ಎಲ್.ದೇವರಾಜು, ಕೆಯುಐಡಿಎಫ್ ಸಿ ನಿಗಮದ ಮಾಜಿ ರಾಜ್ಯಾಧ್ಯಕ್ಷ ಎಂ.ಡಿ.ಕೃಷ್ಣಮೂರ್ತಿ, ಕಾಂಗ್ರೆಸ್ ಮುಖಂಡರಾದ ವಿಜಯ್ ರಾಮೇಗೌಡ, ಕೆಪಿಸಿಸಿ ಸದಸ್ಯ ಕಿಕ್ಕೇರಿ ಸುರೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿ.ನಾಗೇಂದ್ರಕುಮಾರ್, ಹರಳಹಳ್ಳಿ ವಿಶ್ವನಾಥ್, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ವಿಜಯಲಕ್ಷ್ಮಿ ರಾಜಶೇಖರ್, ಕುವೆಂಪು ಸೇವಾ ಟ್ರಸ್ಟಿನ ಅಧ್ಯಕ್ಷ ಕೆಬಿಸಿ ಮಂಜುನಾಥ್, ಪುರಸಭಾ ಸದಸ್ಯರಾದ ಸದಸ್ಯ ಕೆ.ಆರ್.ರವೀಂದ್ರಬಾಬು, ಹಾಫೀಜುಲ್ಲಾ ಷರೀಫ್, ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಬಿ.ಪುಟ್ಟಸ್ವಾಮೀಗೌಡ, ಸೊಸೈಟಿ ನಿರ್ದೇಶಕ ಸೀಮೆ ಎ.ಬಿ.ಮಹೇಂದ್ರ, ಗ್ರಾ.ಪಂ.ಮಾಜಿ ಉಪಾಧ್ಯಕ್ಷ ರಾದ ಎ.ಬಿ.ದೇವರಾಜು, ಮಾಜಿ ಸದಸ್ಯ ಎ.ಸಿ.ಮುರುಳಿ, ಎ.ಎಸ್.ರಾಮಚಂದ್ರೇಗೌಡ, ಅರೆಕಲ್ಲಟ್ಟಿ ಉದ್ದಾನಿ ಮಹದೇವೇಗೌಡ, ಗವಿಯಣ್ಣನ ಪುಟ್ಟೇಗೌಡ, ಯಜಮಾನ್ ಲಾಳಿ ಬೋರೇಗೌಡ, ಎ.ಕೆ.ಸುನಿಲ್, ಎ.ಡಿ.ರವಿ, ಡಾ.ರತೀಶ್‌ಕುಮಾರ್, ಕಾಲೋನಿ ದೇವರಾಜು, ಗಾರೆ ದೇವರಾಜು, ಮನು, ಜಲೇಂದ್ರ, ನಿಶಾಂತ್ ಪಟೇಲ್, ಮಾಟಣ್ಣ ನಾಗರಾಜು, ಮಾಸ್ತಿ ದೇವರಾಜು, ಬಳ್ಳೇಕೆರೆ ವಿಜಯ್‌ಕುಮಾರ್ ಸೇರಿದಂತೆ ವಿವಿಧ ಕಾಂಗ್ರೆಸ್ ಮುಖಂಡರು ಅಭಿನಂದಿಸಿದ್ದಾರೆ.
——————–ಶ್ರೀನಿವಾಸ್ ಕೆ ಆರ್ ಪೇಟೆ