ಕೆ.ಆರ್.ಪೇಟೆ-ದಾಸಶ್ರೇಷ್ಠ ಕನಕದಾಸರು ಸಮಾಜದಲ್ಲಿನ ಮೂಢನಂಬಿಕೆ,ಜಾತಿಪದ್ಧತಿ, ಮೇಲು-ಕೀಳು ಭಾವನೆ ಸೇರಿದಂತೆ ಅನಿಷ್ಟ ಪದ್ಧತಿಗಳ ವಿರುದ್ಧ 15ನೇ ಶತಮಾನದಲ್ಲಿಯೇ ಧ್ವನಿ ಎತ್ತಿ, ಸಮಾಜದ ಅಂಕು-ಡೊoಕುಗಳನ್ನು ತಿದ್ದಿದ ಮಹಾನ್ ದಾರ್ಶನಿಕರು ಎಂದು ತಾಲ್ಲೂಕು ಶ್ರೀ ಭಕ್ತ ಕನಕದಾಸ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರು ಹಾಗೂ ಉಪನ್ಯಾಸಕರಾದ ಕೆ.ಎಸ್.ಕುಮಾರ್ ತಿಳಿಸಿದರು.
ಕೆ.ಆರ್.ಪೇಟೆ ಪಟ್ಟಣದ ಅಗ್ರಹಾರ ಬಡಾವಣೆಯಲ್ಲಿ ತಾಲ್ಲೂಕು ಶ್ರೀ ಭಕ್ತ ಕನಕದಾಸ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಆಯೋಜಿಸಿದ್ದ ದಾಸಶ್ರೇಷ್ಠ ಭಕ್ತ ಕನಕದಾಸರ 537ನೇ ಜಯಂತೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕನಕದಾಸರು ಒಂದು ವರ್ಗಕ್ಕೆ ಸೀಮಿತವಾಗಿಲ್ಲ. ಅವರು ಕಾವ್ಯ ಹಾಗೂ ಕೀರ್ತನೆಗಳ ಮೂಲಕ ಸಮಾಜದಲ್ಲಿ ಬೇರೂರಿದ್ದ ಕಂದಾಚಾರಗಳನ್ನು ಹೋಗಲಾಡಿಸಲು ಶ್ರಮಿಸಿ, ಸಾಹಿತ್ಯಕ್ಕೆ ತನ್ನದೆ ಆದ ಕೊಡುಗೆ ನೀಡಿ, ಎಲ್ಲರನ್ನು ಸಮಾನತೆ ದೃಷ್ಠಿ ಕೋನದಿಂದ ನೋಡುವಂತೆ ತಿಳಿಸಿ ವಿಶ್ವಮಾನವರಾದರು ಎಂದರು.
ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಕೋಡಿಮಾರನಹಳ್ಳಿ ಎಲ್.ದೇವರಾಜು ಅವರು ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಉದ್ಘಾಟನೆ ಮಾಡಿದರು.
ಬಳಿಕ ಮಾತನಾಡಿದ ಅವರು ,ಕನಕದಾಸರು ಶ್ರೀಮಂತ ಕುಟುಂಬದಲ್ಲಿ ಜನಿಸಿದರೂ ಸಹ ಸಮಾಜದಲ್ಲಿನ ಅನಿಷ್ಠ ಪದ್ದತಿಗಳ ವಿರುದ್ಧ ಸಿಡಿದೆದ್ದು,ನಾಡನ್ನಾಳುವ ಅವಕಾಶವನ್ನೂ ತೊರೆದು, ಸರ್ವವನ್ನೂ ತ್ಯಾಗ ಮಾಡಿ, ಮಾನವಕುಲದ ಉದ್ಧಾರಕ್ಕಾಗಿ ತಮ್ಮ ಇಡೀ ಜೀವನವನ್ನು ಮುಡುಪಾಗಿಸಿದ ಮಹಾನ್ ಸಂತರಾಗಿದ್ದಾರೆ.ಮೌಢ್ಯಗಳನ್ನು ವಿರೋಧಿಸಿದ ಅವರು ಸಮಾಜ ಸುಧಾರಣೆಗೆ ದೀಪದಂತೆ ಬೆಳಕಾದವರು. ಹಲವಾರು ಪವಾಡಗಳನ್ನು ಸೃಷ್ಠಿ ದೇವಾಂಶ ಸಂಭೂತರಾಗಿದ್ದಾರೆ. ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಬೋದಿಸಿದ ತತ್ವ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಉತ್ತಮ ಸಮಾಜ ನಿರ್ಮಾಣ ಮಾಡಬಹುದಾಗಿದೆ ಎಂದು ಎಲ್.ದೇವರಾಜು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಕೋಡಿಮಾರನಹಳ್ಳಿ ಎಲ್.ದೇವರಾಜು, ಪುರಸಭಾ ಸದಸ್ಯರಾದ ಕೆ.ಆರ್.ರವೀಂದ್ರಬಾಬು, ಸುಗುಣರಮೇಶ್, ಜಿಲ್ಲಾ ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಜೆ.ಶಶಿಧರ್, ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಕೆ.ಪುರುಷೋತ್ತಮ್, ತಾಲ್ಲೂಕು ಕಾಳಿದಾಸ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕಾಳೇಗೌಡ, ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚೆಲುವರಾಯಸ್ವಾಮಿ ಅವರ ಆಪ್ತ ಸಹಾಯಕ ಚೇತನಾಮಹೇಶ್, ತಾಲ್ಲುಕು ದೇವರಾಜ ಅರಸು ಹಿಂದುಳಿದ ವರ್ಗಗಳ ವೇದಿಕೆಯ ಅಧ್ಯಕ್ಷ ಕೆ.ಮುರುಳೀಧರ್, ತಾಲ್ಲೂಕು ಶ್ರೀ ಕನಕದಾಸ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಕೆ.ಕೆ.ಕೃಷ್ಣೇಗೌಡ, ಉಪಾಧ್ಯಕ್ಷ ರಾಜು, ಶ್ರೀನಿವಾಸ್, ಎಪಿಎಂಸಿ ಮಾಜಿ ಅಧ್ಯಕ್ಷ ಯಜಮಾನ್ ಕೃಷ್ಣೇಗೌಡ, ಮುಖಂಡರಾದ ಕೆ.ಎಸ್.ಆರ್.ಟಿ.ಸಿ ಶಿವಣ್ಣ, ವೆಂಕಟಪ್ಪ, ಪ್ರಧಾನ ಕಾರ್ಯದರ್ಶಿ ವಿಶ್ವನಾಥ್, ಮುತ್ತುರಾಜ್, ತಾಲ್ಲೂಕು ಆರ್.ಟಿ.ಓ ಅಧಿಕಾರಿ ಮಲ್ಲಿಕಾರ್ಜುನ್ ಆಪ್ತ ಸಹಾಯಕ ಗಂಜಿಗೆರೆ ಮಹೇಶ್ ಸೇರಿದಂತೆ ಉಪಸ್ಥಿತರಿದ್ದರು.
——–-ಶ್ರೀನಿವಾಸ್ ಕೆ ಆರ್ ಪೇಟೆ