ಚಿಕ್ಕಮಗಳೂರು-ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಗಳು ಜನಸಾಮಾನ್ಯರಿಗೆ ಅಕ್ಷಯ ಪಾತ್ರೆಗಳಿದ್ದಂತೆ.-ಸದಾನಂದ

ಚಿಕ್ಕಮಗಳೂರು-ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಗಳು ಜನಸಾಮಾನ್ಯರಿಗೆ ಅಕ್ಷಯ ಪಾತ್ರೆಗಳಿದ್ದಂತೆ. ಫಲಾನುಭವಿಗಳು ಕೇಳುವ ಸೌಲಭ್ಯಗಳನ್ನು ಒದಗಿಸುವ ಮೂಲಕ ನಿರಂತರ ಸ್ಪಂದಿಸುವ ಕಾರ್ಯದಲ್ಲಿ ತೊಡಗಿದೆ ಎಂದು ಧ.ಗ್ರಾ.ಯೋ. ಜಿಲ್ಲಾ ನಿರ್ದೇಶಕ ಸದಾನಂದ ಬಂಗೇರ ಹೇಳಿದರು.

ನಗರದ ಬ್ರಹ್ಮ ಕುಮಾರೀಸ್ ಈಶ್ವರಿಯ ವಿದ್ಯಾಮಂದಿರದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃಧ್ದಿ ಯೋ ಜನೆ ಬಿಸಿ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ಧ ತಾಲ್ಲೂಕು ಮಟ್ಟದ ವಿಚಾರಗೋಷ್ಠಿ ಕಾರ್ಯಕ್ರಮವನ್ನು ಇತ್ತೀಚೆಗೆ ಉದ್ಘಾಟಿಸಿ ಅವರು ಮಾತನಾಡಿದರು.

ಧರ್ಮಸ್ಥಳ ಸಂಘಗಳಲ್ಲಿ ವಾರದ ಸಭೆ ನಿರಂತರವಿರಬೇಕು. ಇದರಿಂದ ಯೋಜನೆಗಳ ಕಾರ್ಯಕ್ರಮ, ಆಗುಹೋಗುಗಳ ಬಗ್ಗೆ ಸಮಗ್ರವಾಗಿ ತಿಳಿದುಕೊಳ್ಳಲು ಸಹಕಾರಿ ಎಂದ ಅವರು ಸುಜ್ಞಾನ, ನಿಧಿ, ಮಾಶಾ ಸನ, ವಾತ್ಸಲ್ಯ ಕಾರ್ಯಕ್ರಮ, ಆರೋಗ್ಯ-ಸಂಪೂರ್ಣ ಸುರಕ್ಷಾ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಆಯುಷ್ ಅಧಿಕಾರಿ ಗೀತಾ ಮಾತನಾಡಿ, ಧರ್ಮಸ್ಥಳ ಸಂಸ್ಥೆ ಹಲವು ಸಮಾಜಮುಖಿ ಕಾರ್ಯಕ್ರಮ ಮಾಡುತ್ತಿದೆ. ಗ್ರಾಮೀಣ ಪ್ರದೇಶದ ಮಹಿಳೆಯರು ಆರ್ಥಿಕವಾಗಿ ಮುಂದೆ ಸಾಗಲು ಅನುಕೂಲವಾಗಿದೆ ಎಂದರು. ಅಲ್ಲದೇ ಕುಟುಂಬದ ಆರೋಗ್ಯ ಕಾಪಾಡುವಲ್ಲಿ ಮಹಿಳೆಯರ ಪಾತ್ರದ ಬಗ್ಗೆ ವಿವರಿಸಿದರು.

ಗ್ರಾಮಾಂತರ ಪೊಲೀಸ್ ಠಾಣೆ ಸಬ್‌ಇನ್ಸಪೆಕ್ಟರ್ ಶೋಭಾ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಮಹಿಳೆಯರು ಹೆಚ್ಚು ಜಾಗೃತೆ ವಹಿಸುವುದು ಸೂಕ್ತ. ಅದರಲ್ಲೂ ಸೈಬರ್ ಅಪರಾಧಗಳಲ್ಲಿ ಹೆಚ್ಚು ದೂರ ಕಾಪಾಡಿ ಕೊಳ್ಳುವುದು ಅಗತ್ಯ ಎಂದು ಮಾಹಿತಿ ನೀಡಿದರು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಲಲಿತಾ ಮಾತನಾಡಿ, ಧರ್ಮಸ್ಥಳ ಸಂಸ್ಥೆ ಕಾರ್ಯಕ್ರಮದಲ್ಲಿ ಭಾಗವಹಿಸುವುದೇ ಸೌಭಾಗ್ಯ. ಈ ಕ್ಷೇತ್ರದಲ್ಲಿ ಸಿಗುವ ಮಾಹಿತಿ ಬೇರೆಲ್ಲೂ ಲಭ್ಯವಾಗುವುದಿಲ್ಲ. ಇವುಗಳನ್ನು ಸದುಪ ಯೋಗಪಡಿಸಿಕೊಳ್ಳಲು ಮುಂದಾಗಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಾಜಯೋಗಿನಿ ಭಾಗ್ಯಕ್ಕ, ಮಾತನಾಡಿ ಯೋಜನೆಯ ಕಾರ್ಯಕ್ರಮದಿಂದ ನಮ್ಮ ಸಮಾಜದ ಜನರು ತಿಳಿದುಕೊಳ್ಳುವುದು ಬಹಳಷ್ಟಿದೆ. ಸುತ್ತಲಿನ ಜನರನ್ನು ಈ ಕಾರ್ಯಕ್ರಮದ ಮೂಲಕ ಪರಿವರ್ತನೆ ಮಾಡಬಹುದು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಜನಜಾಗೃತಿ ಸದಸ್ಯ ಮಂಜುನಾಥ್, ತಾಲೂಕು ಯೋಜನಾಧಿಕಾರಿ ಶ್ರೀ ರಮೇಶ್‌ನಾಯ್ಕ, ಮೇಲ್ವಿಚಾರಕ ಚಂದನ್, ಜ್ಞಾನವಿಕಾಸ ಕೇಂದ್ರದ ಸದಸ್ಯರು, ಜ್ಞಾನವಿಕಾಸ ಸಮನ್ವಯಾ ಧಿಕಾರಿ ಹಾಗೂ ನೂರಾರು ಮಹಿಳೆಯರು ಉಪಸ್ಥಿತರಿದ್ದರು.

——–ಸುರೇಶ್

Leave a Reply

Your email address will not be published. Required fields are marked *

× How can I help you?