ಹಾಸನ-ನಿವೃತ್ತ ಶಿಕ್ಷಕ ಎಂ.ಕೆ ನರಸಿಂಹೇಗೌಡ ಅವರನ್ನು ಸನ್ಮಾನಿಸಿದ ಕನ್ನಡ ಪರ ಹೋರಾಟಗಾರ ಪರಶಿವಮೂರ್ತಿ

ಹಾಸನ-69ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ನಿವೃತ್ತ ಶಿಕ್ಷಕ ಎಂ.ಕೆ ನರಸಿಂಹೇಗೌಡ ಅವರನ್ನು ಕನ್ನಡಪರ ಹೋರಾಟಗಾರ ಹಾಗೂ ಸಾಮಾಜ ಸೇವಕ ಪರಶಿವಮೂರ್ತಿಯವರು ತಾಲೂಕಿನ ಕಾರೇಕೆರೆಯಲ್ಲಿರುವ ಅವರ ನಿವಾಸಕ್ಕೆ ತೆರಳಿ ಸನ್ಮಾನಿಸಿ ಗೌರವಿಸಿದರು.

ನಂತರ ಮಾತನಾಡಿದ ಅವರು, ಎಂ. ಕೆ ನರಸಿಂಹೇಗೌಡ ಅವರು ಒಂದು ಬಡ ಕುಟುಂಬದಲ್ಲಿ ಜನಿಸಿ ಸರ್ಕಾರಿ ಶಾಲೆಯಲ್ಲಿ ಕಲಿತು,ನಂತರ ಹತ್ತು ವರ್ಷಗಳ ಕಾಲ ಕರ್ನಾಟಕ ಸಾರಿಗೆ ಸಂಸ್ಥೆಯಲ್ಲಿ ನಿರ್ವಾಹಕರಾಗಿ ಕೆಲಸ ಮಾಡಿ ನಂತರ 26 ವರ್ಷಗಳ ಕಾಲ ಸರ್ಕಾರಿ ಶಾಲಾ ಶಿಕ್ಷಕರಾಗಿ ಕಾರ್ಯನಿರ್ವಹಿಸಿದ್ದಾರೆ.ತಮ್ಮ ವೃತ್ತಿ ಜೀವನದಲ್ಲಿ ಇವರು ಮಕ್ಕಳಿಗೆ ಅಚ್ಚುಮೆಚ್ಚಿನ ಶಿಕ್ಷಕರಾಗಿ ಮತ್ತು ಸಹೋದ್ಯೋಗಿಗಳಿಗೆ ಅಚ್ಚುಮೆಚ್ಚಿನ ಗೆಳೆಯರಾಗಿ ಎಲ್ಲರ ಪ್ರೀತಿ ಪಾತ್ರರಾಗಿದ್ದರು.ನಿವೃತ್ತಿ ನಂತರವು ಸಹ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿಯೂ ಸಹ ಸೇವೆ ಸಲ್ಲಿಸಿರುವ ಇವರು, ಪ್ರಸ್ತುತ ಸರ್ಕಾರಿ ಗೃಹ ನಿರ್ಮಾಣ ಸಹಕಾರ ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದರು.

ಶಿಕ್ಷಕರು ದೇಶ ಕಟ್ಟುವ, ಸೃಜನಶೀಲ ಸಮಾಜವನ್ನು ನಿರ್ಮಿಸುವ, ಮಾನವೀಯ ಮೌಲ್ಯಗಳಿಗೆ ಮನ್ನಣೆ ನೀಡುವ ಶಿಷ್ಯರನ್ನು ರಾಷ್ಟ್ರಕ್ಕೆ ಅರ್ಪಿಸುವ ಕೆಲಸ ಮಾಡುತ್ತಾ,ಕತ್ತಲಿನಿಂದ ಬೆಳಕಿನೆಡೆಗೆ, ಅಜ್ಞಾನದಿಂದ ಜ್ಞಾನದೆಡೆಗೆ ದಾರಿ ತೋರಿಸುವ ನೈಜ ಗುರುವಾಗಿ ಸಮಾಜಕ್ಕೆ ಅತ್ಯುತ್ತಮ ಸೇವೆ ಸಲ್ಲಿಸಿರುವ ಎಂ ಕೆ ನರಸಿಂಹೇಗೌಡ ಅವರನ್ನು 69ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಸನ್ಮಾನಿಸುತ್ತಿರುವುದು ನಿಜಕ್ಕೂ ಸಂತಸದ ವಿಷಯ ಎಂದು ಹೇಳಿದರು.

Leave a Reply

Your email address will not be published. Required fields are marked *

× How can I help you?