ತುಮಕೂರು-ಕ್ರೀಡೆ ನಮ್ಮಲ್ಲಿರುವ ಸ್ಪರ್ಧಾತ್ಮಕ ಗುಣವನ್ನು ಹೆಚ್ಚಿಸುತ್ತದೆ. ಕ್ರೀಡೆಯಿಂದ ಉತ್ತಮ ದೈಹಿಕ ಮತ್ತು ಮಾನಸಿಕ ಸದೃಢತೆ ಸಾಧ್ಯವಾಗುತ್ತದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.
ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ,ಜಿಲ್ಲಾ ಪಂಚಾಯತಿ, ಮಹಾನಗರಪಾಲಿಕೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಸಹಯೋಗದಲ್ಲಿ ಏರ್ಪಡಿಸಿದ್ದ ರಾಜ್ಯ ಮಟ್ಟದ ಪತ್ರಕರ್ತರ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕ್ರೀಡೆಯಲ್ಲಿ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು.ಕ್ರೀಡೆ ಮನುಷ್ಯನ ಆರೋಗ್ಯಕ್ಕೆ ಉತ್ತಮ ಸಾಧನ. ಹಾಗಾಗಿ ಸದಾ ಒತ್ತಡದ ಕಾರ್ಯನಿರ್ವಹಿಸುವ ಪತ್ರಕರ್ತರು ದೈಹಿಕ ಮತ್ತು ಮಾನಸಿಕ ನೆಮ್ಮದಿಗಾಗಿ ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಅವಶ್ಯಕ ಎಂದರು.
ಲೇಖನಿ ಮೂಲಕ ಸಮಾಜದ ಅಂಕು-ಡೊoಕುಗಳನ್ನು ತಿದ್ದುವ ಕೆಲಸ ಮಾಡುತ್ತಿರುವ ಪತ್ರಕರ್ತರು ಉತ್ತಮ ಬರವಣಿಗೆ ಮುಖೇನ ಸಮಾಜದ ಮೇಲೆ ಪರಿಣಾಮ ಬೀರುವ ಅವಲೋಕನದಲ್ಲಿರಬೇಕು ಎಂದು ಸಲಹೆ ಮಾಡಿದರು.
ನಮ್ಮ ಜಿಲ್ಲೆಗೆ ರಾಜ್ಯಮಟ್ಟದ ಕ್ರೀಡಾಕೂಟ ಆಯೋಜನೆಯ ಜವಾಬ್ದಾರಿಯನ್ನು ಕೊಟ್ಟಿದ್ದು,ಈ ಜವಾಬ್ದಾರಿಯನ್ನು ಉತ್ತಮವಾಗಿ ನಿಭಾಯಿಸಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಪತ್ರಕರ್ತರು ಆಗಮಿಸಿ ಕ್ರೀಡಾಕೂಟದಲ್ಲಿ ಭಾಗವಹಿಸಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದರು.
ಪತ್ರಕರ್ತರಿಗೆ ಬರವಣಿಗೆ ಮೂಲಕ ಸಮಾಜವನ್ನು ಹಾಗೂ ಅನೇಕ ವಿಚಾರಗಳನ್ನು ಬದಲಾಯಿಸುವ ಶಕ್ತಿ ಇದೆ. ಜತೆಗೆ
ಪತ್ರಿಕೆಗಳಲ್ಲಿ ಪ್ರಕಟವಾಗುವ ಲೇಖನಗಳಿಂದ ಸರ್ಕಾರಕ್ಕೆ ಕಿವಿ ಹಿಂಡುವ, ಸಲಹೆ, ಸೂಚನೆ ನೀಡುವ ಕೆಲಸವೂ ಆಗುತ್ತದೆ. ಈ ನಿಟ್ಟಿನಲ್ಲಿ ಪತ್ರಕರ್ತರು ಉತ್ತಮ ಲೇಖನಗಳು ಬರೆಯಲು ಮುಂದಾಗಬೇಕು ಎಂದು ಸಲಹೆ ಕೊಟ್ಟರು.
ಕೆ.ಯು.ಡಬ್ಲ್ಯೂ.ಜೆ ಅಧ್ಯಕ್ಷರಾದ ಶಿವಾನಂದ ತಗಡೂರು ಮಾತನಾಡಿ,ರಾಷ್ಟ್ರೀಯ ಮಟ್ಟದ ಸಾಹಿತ್ಯ ಸಮ್ಮೇಳನದಂತೆ ಮುoದಿನ ದಿನಗಳಲ್ಲಿ ಪತ್ರಕರ್ತರ ರಾಜ್ಯ ಸಮ್ಮೇಳನವನ್ನು ರಾಷ್ಟ್ರೀಯ ಪತ್ರಕರ್ತರ ಸಮ್ಮೇಳನವಾಗಿ ಆಚರಿಸಲಾಗು ವುದು ಎಂದರು.
ಜನವರಿಯಲ್ಲಿ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನ ನಡೆಯಲಿದ್ದು,ಈ ಸಮ್ಮೇಳನಕ್ಕೆ ರಾಜ್ಯದ ಸುಮಾರು 5
ಸಾವಿರಕ್ಕೂ ಹೆಚ್ಚು ಪತ್ರಕರ್ತರು ಆಗಮಿಸಲಿದ್ದಾರೆ. ಹಾಗಾಗಿ ಸಮ್ಮೇಳನ ಯಶಸ್ವಿಗೆ ಜಿಲ್ಲಾಡಳಿತ ಹೆಚ್ಚಿನ ಸಹಕಾರ ನೀಡುವಂತೆ ಅವರು ಮನವಿ ಮಾಡಿದರು.
ಪ್ರಾಸ್ತಾವಿಕ ನುಡಿಗಳನ್ನಾಡಿದ ಕೆ.ಯು.ಡಬ್ಲ್ಯೂ.ಜೆ ಜಿಲ್ಲಾ ಘಟಕದ ಚಿ.ನಿ. ಪುರುಷೋತ್ತಮ್,ಹಲವು ವೈಶಿಷ್ಟ್ಯಗಳನ್ನು ಗಳನ್ನು ಹೊಂದಿರುವ ಕಲ್ಪತರುನಾಡು ತುಮಕೂರಿನಲ್ಲಿ ಇದೇ ಮೊದಲ ಬಾರಿಗೆ ರಾಜ್ಯಮಟ್ಟದ ಪತ್ರಕರ್ತರ ಕ್ರೀಡಾಕೂಟ ನಡೆದಿದ್ದು, ಗೃಹ ಸಚಿವರು ಹಾಗೂ ಜಿಲ್ಲಾಡಳಿತದಿಂದ ಉತ್ತಮ ಸಹಕಾರ ದೊರೆತಿದೆ ಎಂದರು.
ಜನವರಿಯಲ್ಲಿ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನ ನಡೆಯಲಿದ್ದು, ಈ ಸಮ್ಮೇಳನಕ್ಕೆ ಸುಮಾರು 5 ಸಾವಿರಕ್ಕೂ ಅಧಿಕ
ಪತ್ರಕರ್ತರು ಆಗಮಿಸುವ ನಿರೀಕ್ಷೆ ಇದ್ದು, ಸಮ್ಮೇಳನ ಯಶಸ್ವಿಗೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಡಳಿತ ಹೆಚ್ಚಿನ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಶಾಸಕ ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿ.ಪಂ.ಮುಖ್ಯ ಕಾರ್ಯನಿರ್ವಹಣಾ ಧಿಕಾರಿ ಜಿ. ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ., ಪ್ರೊ. ವೆಂಕಟೇಶ್ವರಲು,ಪಾಲಿಕೆ ಆಯುಕ್ತೆ ಬಿ.ವಿ. ಅಶ್ವಿಜ, ಅಪರ ಜಿಲ್ಲಾಧಿಕಾರಿ ಡಾ.ತಿಪ್ಪೇಸ್ವಾಮಿ, ಐಎಫ್‌ಡಬ್ಲ್ಯೂಜೆ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಮಲ್ಲಿಕಾರ್ಜುನಯ್ಯ, ಪ್ರಧಾನ ಕಾರ್ಯದರ್ಶಿ ಲೋಕೇಶ್, ಪ್ರಧಾನ ಕಾರ್ಯದರ್ಶಿ ಟಿ.ಇ. ರಘುರಾಮ್, ಪ್ರಚಾರ ಸಮಿತಿಯ ರಂಗರಾಜು, ಹಿರಿಯ ಪತ್ರಕರ್ತರಾದ ಎಸ್. ನಾಗಣ್ಣ, ಟಿ.ಎನ್.ಮಧುಕರ್, ಶಾಂತರಾಜು, ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎಸ್. ಸಿದ್ದಲಿಂಗಪ್ಪ ಮತ್ತಿತರರು ಭಾಗವಹಿಸಿದ್ದರು.
———–ಚಂದ್ರಚೂಡ