ಚಿಕ್ಕಮಗಳೂರು-ವಿದ್ಯಾರ್ಥಿಗಳಲ್ಲಿ ಅಡಗಿರುವ ಕಲೆ,ಸಂಗೀತ,ಗಾಯನ ಹಾಗೂ ನೃತ್ಯದ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದೇ ಚುಂಚೋತ್ಸವದ ಮೂಲಧ್ಯೇಯ ಎಂದು ಆದಿ ಚುಂಚನಗಿರಿ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ|| ಸಿ.ಟಿ.ಜಯದೇವ್ ಹೇಳಿದರು.
ನಗರದ ಆದಿಚುಂಚನಗಿರಿ ತಾಂತ್ರಿಕ ಮಹಾವಿದ್ಯಾಲಯದ ಹಮ್ಮಿಕೊಂಡಿದ್ಧ ಚುಂಚನ-2024ರ ಕಾರ್ಯಕ್ರಮಕ್ಕೆ ಬುಧವಾರ ಚಾಲನೆ ನೀಡಿ ಅವರು ಮಾತನಾಡಿದರು.
ಸಂಸ್ಥೆಯು ವಿದ್ಯಾರ್ಥಿಗಳ ಉತ್ತಮ ಭವಿಷ್ಯ ರೂಪಿಸಲು ಗುಣಮಟ್ಟದ ಶಿಕ್ಷಣದೊಂದಿಗೆ ಸದಾ ಕ್ರೀಡೆ, ಕಲೆ ಹಾಗೂ ಇನ್ನಿತರ ನಿರ್ದಿಷ್ಟ ಚಟುವಟಿಕೆಗಳಿಗೂ ಆಧ್ಯತೆ ನೀಡಿ ಪ್ರೋತ್ಸಾಹಿಸುತ್ತಿದೆ.
ಸಂಸ್ಥೆಯ ಉಪನ್ಯಾಸಕರು ಹಾಗೂ ಆಡಳಿತ ಮಂಡಳಿಯು ಬಹಳ ಆಸಕ್ತಿಯಿಂದ ಕಾರ್ಯಕ್ರಮದ ಯಶಸ್ವಿಗೆ ಶ್ರಮಿಸಿದ್ದಾರೆ ಪ್ರತಿಯೊಬ್ಬ ವಿದ್ಯಾರ್ಥಿಗಳು ವಿವಿಧ ಚಟುವಟಿಕೆಗಳಲ್ಲಿ ಆಸಕ್ತಿ ಹಾಗೂ ಮುಕ್ತ ಮನಸ್ಸಿನಿಂದ ಭಾಗವಹಿಸಿ ಕಾರ್ಯಕ್ರಮದ ಯಶಸ್ವಿಗೆ ಕಾರಣರಾಗಬೇಕು ಎಂದು ತಿಳಿಸಿದರು.
ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿ ವೃಂದದವರು ಬಹಳಷ್ಟು ಉತ್ಸಾಹ ಮತ್ತು ಸಂಭ್ರಮದಿoದ ಚುಂಚನ ಹಬ್ಬವನ್ನು ಆಚರಿಸುತ್ತಿದ್ದಾರೆ. ಒಂದಿಷ್ಟು ಕ್ರಿಯಾತ್ಮಕತೆಯ ಮತ್ತು ರಚನಾತ್ಮಕವಾಗಿ ಯೋಚಿಸುವಂತಹ ಮನೋಭಾವ ಮನೋರಂಜನೆಯಿoದ ಮಾತ್ರ ದೊರಕಲು ಸಾಧ್ಯ. ಪ್ರತಿಯೊಬ್ಬ ವಿದ್ಯಾರ್ಥಿಗೂ ಪ್ರತಿಭೆ ಎನ್ನುವುದಿರಲಿದೆ ಎಂದರು.
ಕಾಲೇಜಿನ ಮೆಕ್ಯಾನಿಕಲ್ ಇಂಜಿನಿಯರ್ ವಿಭಾಗದ ಮುಖ್ಯಸ್ಥ ಡಾ|| ಜಿ.ಎಂ.ಸತ್ಯನಾರಾಯಣ ಮಾತನಾಡಿ ಆಧುನಿಕತೆಯ ಭರಾಟೆಯಲ್ಲಿ ಸಾಂಸ್ಕೃತಿಕ ಚಟುವಟಿಕೆಗಳು ಮರುಸೃಷ್ಟಿಸುವ ನಿಟ್ಟಿನಲ್ಲಿ ಕಲೆ, ಸಂಗೀತ ಕ್ಷೇತ್ರವನ್ನು ಪ್ರೋತ್ಸಾಹಿಸುವ ದಿಸೆಯಲ್ಲಿ ನಡೆಯುತ್ತಿರುವ ಇಂಥಹ ಕಾರ್ಯಕ್ರಮಗಳು ಅರ್ಥಪೂರ್ಣ ಹಾಗೂ ಮನಸ್ಸಿಗೆ ಮುದ ನೀಡುವ ಸಾಧನ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಮಾಹಿತಿ ತಂತ್ರಜ್ಞಾನದ ಮುಖ್ಯಸ್ಥ ಡಾ|| ಸಂಪತ್, ಅರ್ಟಿಫಿಶಿಯಲ್ ಇಂಟಲಿಜೆನ್ಸ್ ಮುಖ್ಯಸ್ಥೆ ಡಾ|| ಸುನೀತಾ, ಸಿವಿಲ್ ಮುಖ್ಯಸ್ಥ ಡಾ|| ಕಿರಣ್, ವಿದ್ಯಾರ್ಥಿ ಕ್ಷೇಮಾಭಿವೃದ್ದಿ ಅಧಿ ಕಾರಿ ಸಂಗರೆಡ್ಡಿ, ವಿವಿಧ ಕಾಲೇಜಿನ ಮುಖ್ಯಸ್ಥರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
——-ಸುರೇಶ್