ಬಣಕಲ್:ಗಣೇಶೋತ್ಸವದ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ಮಾಹಿತಿ ನೀಡಲು ಬಣಕಲ್ ಠಾಣೆ ಆವರಣದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.
ಬಣಕಲ್ ಪಿ.ಎಸ್.ಐ ರೇಣುಕಾ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗಣೇಶೋತ್ಸವ ಆಚರಣೆ ವೇಳೆ ಎದುರಾಗಬಹುದಾದ ಸಮಸ್ಯೆಗಳು,ಅದಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ವಿಸ್ತೃತವಾಗಿ ಚರ್ಚಿಸಲಾಯಿತು.
ಗಣೇಶ ಪ್ರತಿಷ್ಠಾಪನೆ ಬಗ್ಗೆ ಸಮಿತಿ ಮುಖಂಡರು ಠಾಣೆಗೆ ಅರ್ಜಿ ನೀಡಿ ಅನುಮತಿ ಪಡೆಯಬೇಕು ಎಂದು ಸೂಚಿಸಿದ ಅವರು,ವಿದ್ಯುತ್ ಸಂಪರ್ಕಕ್ಕೆ ಬೆಸ್ಕಾಂ ಕಚೇರಿಗಳಿಂದ ಸೂಕ್ತ ಅನುಮತಿ ಪಡೆಯುವುದು ಕಡ್ಡಾಯ.ಯಾವುದೇ ರೀತಿಯ ಕೋಮು,ಪಕ್ಷ,ಜಾತಿ ಹೆಸರಿನ ಗಲಭೆಗಳಿಗೆ ಅಸ್ಪದ ನೀಡಬಾರದು.ಆಯೋಜಕರು ಗಣೇಶ ವಿಸರ್ಜನೆ ವೇಳೆ ಅಹಿತಕರ ಘಟನೆ ನಡೆಯದಂತೆ ಸೂಕ್ತ ವ್ಯವಸ್ಥೆ ಕಲ್ಪಿಸಿರಬೇಕು ಎಂದರು.
ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮಗಳ ಮುಖಂಡರು ಗಣೇಶೋತ್ಸವ ಆಚರಣಾ ಸಮಿತಿ ಸದಸ್ಯರು ಸ್ಥಳೀಯರು ಈ ಸಂದರ್ಭದಲ್ಲಿ ಪಾಲ್ಗೊಂಡಿದ್ದರು.
————————ವರದಿ :ಸೂರಿ ಬಣಕಲ್