ಕೆ.ಆರ್.ಪೇಟೆ-ಸಾವಿರಾರು ವರ್ಷಗಳ ಭವ್ಯ ಇತಿಹಾಸ ಹೊಂದಿರುವ ಕನ್ನಡ ಭಾಷೆಯು ಅತೀ ಹೆಚ್ಚಿನ ಜ್ಞಾನ ಪೀಠ ಪ್ರಶಸ್ತಿ ಪಡೆದು ವಿಜೃಂಭಿಸುತ್ತಿದೆ ಎಂದು ತಾಲ್ಲೂಕು ಟಿ.ಎ.ಪಿ.ಸಿಎಂಎಸ್ ಸಂಸ್ಥೆಯ ಅಧ್ಯಕ್ಷ ಬಿ.ಎಲ್.ದೇವರಾಜು ಹೇಳಿದರು.
ಅವರು ಕೆ.ಆರ್.ಪೇಟೆ ಪಟ್ಟಣದ ಎಂ.ಕೆ.ಬೊಮ್ಮೆಗೌಡ ವೃತ್ತದಲ್ಲಿ ಪುರಸಭೆಯ ಮಾಜಿ ಸದಸ್ಯರಾದ ಕೆ.ಎನ್. ಕಿರಣ್(ಗುಂಡ) ನೇತೃತ್ವದಲ್ಲಿ ಕನ್ನಡ ಗೆಳೆಯರ ಬಳಗದ ವತಿಯಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಕನ್ನಡ ಭಾವುಟ ಹಾರಿಸಿ ತಾಯಿ ಭುವನೇಶ್ವರಿ ಭಾವ ಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದರು.
ವಿಶ್ವದಲ್ಲಿಯೇ ಅತ್ಯಂತ ಶ್ರೀಮಂತ ಭಾಷೆಯಾದ ಕನ್ನಡ ಭಾಷೆಯು ಅತ್ಯಂತ ಸುಂದರವಾಗಿದ್ದು, ಕಲಿಯಲು ಸುಲಭ, ಮಾತನಾಡಲು ಸಂತೋಷವಾಗುವ ಜೊತೆಗೆ ಕೇಳುಗರಿಗೆ ಹಿತವಾಗಿದ್ದು, ಕನ್ನಡ ಭಾಷೆ ಗೊತ್ತಿಲ್ಲದವರಿಗೂ ಅರ್ಥವಾಗುವಂತಿದೆ.ಆದ್ದರಿಂದ ಕನ್ನಡದ ನೆಲದಲ್ಲಿ ವಾಸಮಾಡುವ ಅನ್ಯ ಭಾಷಿ ಕರಿಗೂ ಕನ್ನಡ ಕಲಿಸಿಕೊಡುವ ಕೆಲಸವನ್ನು ಅಭಿಮಾನದಿಂದ ಮಾಡಬೇಕು ಎಂದು ದೇವರಾಜು ಮನವಿ ಮಾಡಿದರು.
ರಾಜ್ಯ ಆರ್.ಟಿ.ಓ ಅಧಿಕಾರಿಗಳ ಸಂಘದ ಅಧ್ಯಕ್ಷರು ಹಾಗೂ ಸಮಾಜ ಸೇವಕರಾದ ಆರ್.ಟಿ.ಓ.ಮಲ್ಲಿಕಾರ್ಜುನ್ ಮಾತನಾಡಿ, ನಾವು ನವೆಂಬರ್ ಕನ್ನಡಿಗರಾಗದೆ ನಮ್ಮ ರಕ್ತದ ಕಣ ಕಣದಲ್ಲಿಯೂ ಕನ್ನಡತನವನ್ನು ಬೆಳೆಸಿಕೊಂಡು ಕನ್ನಡ ನೆಲ, ಜಲ ಹಾಗೂ ಭಾಷೆಗೆ ವಿಪತ್ತು ಎದುರಾದ ಸಂದರ್ಭದಲ್ಲಿ ಬೀದಿಗಿಳಿದು ಹೋರಾಟ ಮಾಡಲು ಸಿದ್ಧರಿರಬೇಕು.ಮಂಡ್ಯ ಜಿಲ್ಲೆಯು ರಾಜ್ಯದಲ್ಲಿ ಅತೀ ಹೆಚ್ಚು ಕನ್ನಡ ಮಾತನಾಡುವ ಜಿಲ್ಲೆಯಾಗಿದೆ.ಸಕ್ಕರೆ ನಾಡು ಎಂದೇ ಪ್ರಖ್ಯಾತಿ ಪಡೆದಿರುವ ಮಂಡ್ಯದಲ್ಲಿ ಇದೇ ಡಿ.20,21,22ರಂದು ಮೂರು ದಿನಗಳ ಕಾಲ 30 ವರ್ಷಗಳ ನಂತರ ನಡೆಯುತ್ತಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಜಿಲ್ಲೆಯ ಜನರು ಲಕ್ಷ ಲಕ್ಷ ಸಂಖ್ಯೆಯಲ್ಲಿ ಭಾಗವಹಿಸಿ ಸಮ್ಮೇಳನವನ್ನು ಯಶಸ್ವಿಗೊಳಿಸಿ ಕೊಡಬೇಕು ಎಂದು ಮಲ್ಲಿಕಾರ್ಜುನ್ ಮನವಿ ಮಾಡಿದರು.
ನಿವೃತ್ತ ಉಪನ್ಯಾಸಕರಾದ ಎಂ.ಕೆ.ಹರಿಚರಣ ತಿಲಕ್ ಅವರು ಕನ್ನಡ ನಾಡು-ನುಡಿ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ನಾಗೇಗೌಡ, ಉಪಾಧ್ಯಕ್ಷ ಪುರುಷೋತ್ತಮ್, ಕಾರ್ಯದರ್ಶಿ ಎಸ್.ಜೆ.ಮಂಜುನಾಥ್, ಹಿರಿಯ ವಕೀಲ ಜಿ.ಆರ್.ಅನಂತರಾಮಯ್ಯ, ವಕೀಲರ ಸಂಘದ ಖಜಾಂಚಿ ಪ್ರಸನ್ನಕುಮಾರ್, ಕೆರೆಮೇಗಳಕೊಪ್ಪಲು ಶಂಕರೇಗೌಡ, ದರಖಾಸ್ತು ಕಮಿಟಿ ಸದಸ್ಯ ಬಸ್ತಿ ರಂಗಪ್ಪ, ಕನ್ನಡ ಗೆಳೆಯರ ಬಳಗದ ಅಧ್ಯಕ್ಷ ಕೆ.ಎನ್.ಕಿರಣ್(ಗುಂಡ), ಕರ್ನಾಟಕ ರಕ್ಷಣಾ ವೇದಿಕೆಯ ಮಂಡ್ಯ ಜಿಲ್ಲಾಧ್ಯಕ್ಷ ಹೊನ್ನೇನಹಳ್ಳಿ ವೇಣು, ತಾಲ್ಲೂಕು ಘಟಕದ ಅಧ್ಯಕ್ಷ ಎ.ಎಸ್.ಶ್ರೀನಿವಾಸ್, ಪದವೀಧರ ಘಟಕದ ಅಧ್ಯಕ್ಷ ಸಿ.ಬಿ.ಚೇತನ್ಕುಮಾರ್, ತಾಲ್ಲೂಕು ಅಪ್ಪು ಯುವ ಸಾಮ್ರಾಜ್ಯ ಸೇವಾ ಟ್ರಸ್ಟಿನ ಅಧ್ಯಕ್ಷ ಕೆ.ಎಲ್.ಮಹೇಶ್, ತಾಲ್ಲೂಕು ಎಳೆನೀರು ವ್ಯಾಪಾರಿಗಳ ಸಂಘದ ಅಧ್ಯಕ್ಷ ಭಾರತೀಪುರ ಪುಟ್ಟಣ್ಣ, ತಾಲ್ಲೂಕು ಒಕ್ಕಲಿಗರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಾಟನಹಳ್ಳಿ ಗಂಗಾಧರ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ರಾಮದಾಸ್, ಕಸಾಪ ಮಾಜಿ ಅಧ್ಯಕ್ಷ ಹರಿಚರಣತಿಲಕ್, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಜಯರಂಗ, ಸಾರಂಗಿ ಮಂಜುನಾಥ್, ಭಾರತೀಪುರ ಶ್ರೀನಿವಾಸ್, ಕಿಕ್ಕೇರಿ ಗ್ರಾ.ಪಂ.ಅಧ್ಯಕ್ಷ ಪುಟ್ಟರಾಜು, ಹೆಮ್ಮನಹಳ್ಳಿ ಗಂಗೇಗೌಡ, ಅತೀಕ್ಅಹಮದ್, ಸೇರಿದಂತೆ ನೂರಾರು ಜನರು ಗಣ್ಯರು ಭಾಗವಹಿಸಿದ್ದರು.
ಗ್ರಾ.ಪಂ.ಸದಸ್ಯ ಅಗ್ರಹಾರಬಾಚಹಳ್ಳಿ ಶ್ರೀನಿವಾಸ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಇದೇ ಸಂದರ್ಭದಲ್ಲಿ ಸುಮಾರು ಸಾವಿರಕ್ಕೂ ಹೆಚ್ಚು ಮಂದಿಗೆ ಅನ್ನಧಾನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
—————–ಶ್ರೀನಿವಾಸ್ ಕೆ.ಆರ್ ಪೇಟೆ