
ಕೆ.ಆರ್.ಪೇಟೆ:ತಾಲೂಕಿನ ಸಂತೆಬಾಚಹಳ್ಳಿ ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಅಮಚಹಳ್ಳಿಯ ಕೆ.ಎಂ.ಅನುರಾಧಗಣೇಶ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಹಿಂದಿನ ಅಧ್ಯಕ್ಷರಾಗಿದ್ದ ಮಂಗಳ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಅನುರಾಧ ಅವರನ್ನು ಹೊರತುಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸದೇ ಇರುವ ಕಾರಣ ಅವಿರೋಧ ಆಯ್ಕೆ ನಡೆಯಿತು.ಚುನಾವಣಾಧಿಕಾರಿಯಾಗಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸುಷ್ಮಾ ಕಾರ್ಯನಿರ್ವಹಿಸಿದರು. ನೂತನ ಅಧ್ಯಕ್ಷೆ ಅನುರಾಧ ಅವರನ್ನು ಮುಖಂಡರು ಹಾಗೂ ಗ್ರಾಮಸ್ಥರು ಅಭಿನಂದಿಸಿ ಗೌರವಿಸಿದರು.
——-—-ಶ್ರೀನಿವಾಸ್ ಕೆ ಆರ್ ಪೇಟೆ