ಅರಕಲಗೂಡು-ಹೊನ್ನವಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಸಂವಿಧಾನ ದಿನಾಚರಣೆಯನ್ನು ಆಚರಣೆ ಮಾಡುವ ಸಂದರ್ಭದಲ್ಲಿ ಸಂವಿಧಾನ ಪೀಠಿಕೆ ಪ್ರತಿಯನ್ನು ನೆಲದ ಮೇಲೆ ಇಟ್ಟು ಅಗೌರವ ತೋರಿಸಲಾಗಿದೆ ಎಂದು ತಾಲೂಕು ಭೀಮ ಸೇನೆ ಅಧ್ಯಕ್ಷ ಕೆಲ್ಲೂರು ಗಣೇಶ್ ಆರೋಪ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸಂವಿಧಾನ ದಿನಾಚರಣೆ ಆಚರಿಸುವ ಸಂದರ್ಭದಲ್ಲಿ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ಮತ್ತು ಪಂಚಾಯತಿಯ ಸಿಬ್ಬಂದಿ ವರ್ಗದವರು ಸಂವಿಧಾನ ಪೀಠಿಕೆಯ ಪ್ರತಿಯನ್ನು ನೆಲದ ಮೇಲೆ ಇಟ್ಟು ಸಂವಿಧಾನಕ್ಕೆ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದಾರೆ.ಅವರುಗಳ ಮೇಲೆ ಕಠಿಣವಾದ ಕಾನೂನು ಕ್ರಮ ಜರುಗಿಸಬೇಕು ಮತ್ತು ಸಿಬ್ಬಂದಿಗಳನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಸಂಬಂಧಪಟ್ಟವರು ಕಠಿಣವಾದ ಕಾನೂನು ಕ್ರಮ ಜರುಗಿಸದಿದ್ದರೆ ಸಮಾನ ಮನಸ್ಕ ಸಂಘಟನೆಗಳ ಜೊತೆಗೆ ಚರ್ಚಿಸಿ ಹೋರಾಟ ನಡೆಸುವುದಾಗಿ ಕೆಲ್ಲೂರು ಗಣೇಶ್ ಎಚ್ಚರಿಕೆಯನ್ನು ನೀಡಿದ್ದಾರೆ.
—-—–ಶಶಿಕುಮಾರ್ ಕೆಲ್ಲೂರು