
ಕೆ.ಆರ್.ಪೇಟೆ-ತಾಲ್ಲೂಕು ಸರ್ಕಾರಿ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಶಿಕ್ಷಕ ಎಸ್.ಆರ್.ಆನಂದ್‌ಕುಮಾರ್, ಖಜಾಂಚಿಯಾಗಿ ತೋಟಗಾರಿಕೆ ಅಧಿಕಾರಿ ಡಾ.ಆರ್.ಜಯರಾಮ್,ರಾಜ್ಯ ಪರಿಷತ್ ಸದಸ್ಯರಾಗಿ ಧರ್ಮೇಂದ್ರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ
ಅಧ್ಯಕ್ಷ ಸ್ಥಾನಕ್ಕೆ ಶಿಕ್ಷಕ ಎಸ್.ಆರ್.ಆನಂದ್ ಕುಮಾರ್, ಖಜಾಂಚಿ ಸ್ಥಾನಕ್ಕೆ ತೋಟಗಾರಿಕೆ ಇಲಾಖೆ ಅಧಿಕಾರಿ ಡಾ.ಆರ್.ಜಯರಾಮ್ ಹಾಗೂ ರಾಜ್ಯ ಪರಿಷತ್ ಸದಸ್ಯ ಸ್ಥಾನಕ್ಕೆ ಅಕ್ಕಿಹೆಬ್ಬಾಳು ಪ್ರಾಥಮಿಕ ಆರೋಗ್ಯ ನಿರೀಕ್ಷಕ ಧರ್ಮೇಂದ್ರ ಅವರನ್ನು ಹೊರತುಪಡಿಸಿ ಬೇರೆ ಯಾರೂ ಸಹ ನಾಮಪತ್ರ ಸಲ್ಲಿಸದೇ ಇರುವ ಕಾರಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ ಗ್ರೇಡ್-2 ತಹಶೀಲ್ದಾರ್ ಲೋಕೇಶ್ ಅಧಿಕೃತವಾಗಿ ಘೋಷಿಸಿ ನೇಮಕಾತಿ ಆದೇಶ ಪ್ರಮಾಣ ಪತ್ರವನ್ನು ವಿತರಣೆ ಮಾಡಿದರು.

ಗಣ್ಯರಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅಧ್ಯಕ್ಷ ಶಿಕ್ಷಕ ಆನಂದ್ ಕುಮಾರ್,ನಮ್ಮದೇ ಗುರಿ ಹಾಗೂ ಸರ್ವ ನಿರ್ದೇಶಕರ, ಹಿರಿಯರ ಆಲೋಚನೆಯೊಂದಿಗೆ ಸಂಘವನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡುವ ಜೊತೆಗೆ ಸರ್ಕಾರಿ ನೌಕರರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಅವರ ಹಿತ ಕಾಯುವ ಕಾರ್ಯವನ್ನು ಕಾಯ ವಾಚ ಮನಸ್ಸಿನಿಂದ ಪ್ರಾಮಾಣಿಕವಾಗಿ ಮಾಡುವುದಾಗಿ ಭರವಸೆ ನೀಡಿದರು.
ಖಜಾಂಚಿ ಡಾ.ಆರ್.ಜಯರಾಮ್, ಸರ್ಕಾರಿ ನೌಕರರ ಕುಂದುಕೊರತೆಗಳ ನಿವಾರಣೆಗೆ ಬದ್ಧವಾಗಿ ಪ್ರಾಮಾಣಿಕವಾಗಿ ಅಧ್ಯಕ್ಷರ ಜೊತೆಗೂಡಿ ಸಂಘದ ಸರ್ವಾಂಗಿಣ ಅಭಿವೃದ್ಧಿಗೆ ದುಡಿಯುತ್ತೇನೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸರ್ಕಾರಿ ನೌಕರ ಸಂಘದ ಪ್ರಧಾನ ಕಾರ್ಯದರ್ಶಿ ಎಲ್.ಎಸ್.ಧರ್ಮಪ್ಪ, ಸಂಘದ ನಿಕಟಪೂರ್ವ ಅಧ್ಯಕ್ಷ ಸಿ.ಕೆ.ಶಿವರಾಮೇಗೌಡ, ನಿರ್ದೇಶಕರಾದ ಪದ್ಮೇಶ್, ಹರೀಶ್, ಸತೀಶ್, ಕೃಷ್ಣಮೂರ್ತಿ, ಶ್ರೀನಿವಾಸ್, ಲೋಕೇಶ್, ರವಿಕುಮಾರ್, ಶಿಕ್ಷಕರಾದ ಧರ್ಮಪ್ಪ, ಪಿ.ಜೆ.ಕುಮಾರ್,ಉಪಸ್ಥಿತರಿದ್ದರು.
——-—ವರದಿ-ಶ್ರೀನಿವಾಸ್ ಕೆ ಆರ್ ಪೇಟೆ