ಎಚ್.ಡಿ ಕೋಟೆ:ಕೆ.ಎಂ.ಪಿ.ಕೆ ಟ್ರಸ್ಟ್ ವತಿಯಿಂದ ಹಾಡಿ ಜನಾಂಗ ದವರಿಗೆ ಹೋದಿಕೆ ವಿತರಣೆ-ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ

ಎಚ್.ಡಿ ಕೋಟೆ:ಚಳಿಗಾಲದ ಕಾರಣ ಎಚ್.ಡಿ ಕೋಟೆಯ ಕಾಡಿನಲ್ಲಿ ವಾಸಿಸುತ್ತಿರುವ ಹಾಡಿ ಜನಾಂಗದವರಿಗೆ ಕೆ ಎಂ ಪಿ ಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ಹೋದಿಕೆ ವಿತರಿಸಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲಾಯಿತು.

ಹಿರಿಯ ಪತ್ರಕರ್ತರಾದ ಅನಿಲ್ ಕುಮಾರ್ ಮಾತನಾಡಿ,ಇತ್ತೀಚಿಗೆ ಜಿಲ್ಲೆಯಲ್ಲಿ ವ್ಯಾಪಕವಾದ ಚಳಿ ಪ್ರಾರಂಭವಾಗಿದ್ದು, ವಾತಾವರಣದಲ್ಲಿನ ಉಷ್ಣಾಂಶ ಕಡಿಮೆಯಾಗಿ, ತಂಪಾದ ವಾತಾವರಣ ಕಂಡುಬರುತ್ತಿದೆ. ಈ ಸಂದರ್ಭದಲ್ಲಿ ದೇಹಕ್ಕೆ ವಿವಿಧ ರೀತಿಯ ತೊಂದರೆಗಳಾಗುತ್ತವೆ. ಆದ್ದರಿಂದ ಮುಂಜಾಗ್ರತೆ ತೆಗೆದುಕೊಳ್ಳುವುದು ಅಗತ್ಯವಾಗಿದೆ ಎಂದು ಹೇಳಿದರು.

ಶೀತ, ನೆಗಡಿ, ಜ್ವರ, ಅಜೀರ್ಣ, ಅಲರ್ಜಿಯಂತ ಸಮಸ್ಯೆಗಳು ಕಂಡುಬರುತ್ತದೆ,ಚಳಿಯ ತೀರ್ವತೆಯಿಂದ ರಕ್ತ ಸಂಚಾರದಲ್ಲಿ ತೊಂದರೆಯಾಗುವ ಸಂದರ್ಭವಿರುವುದು,ಪಾರ್ಶ್ವವಾಯು,ಅಧಿಕ ಮಧುಮೇಹ, ಕಡಿಮೆ ರಕ್ತದೊತ್ತಡ, ಹೃದಯಘಾತಗಳಾಗುವ ಸಂಭವ ಹೆಚ್ಚಾಗಿರುತ್ತದೆ. ಸ್ವಚ್ಚತೆ ಕಾಪಾಡುವುದು, ಜಂಕ್‍ಪುಢಗಳ ಸೇವನೆ ಮಾಡಬೇಡಿ. ಯೋಗ, ಧ್ಯಾನ, ವ್ಯಾಯಾಮ, ನಡಿಗೆಯಂತಹ ದೈಹಿಕ ಚಟುವಟಿಕೆಗಳು ಮಾಡಬೇಕು. ವಿಟಮಿನ್-ಡಿ ಹೊಂದಿರುವ ಸೂರ್ಯನ ಬೆಳೆಕು ಪಡೆಯಬೇಕು. ಇದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿರ್ವಹಿಸಬಹುದಾಗಿದೆ. ಮಧುಮೇಹ ಹೊಂದಿರುವವರು ತಪ್ಪದೇ ಔಷಧಿಗಳನ್ನು ತೆಗೆದುಕೊಳ್ಳಬೇಕು. ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಕೊಳ್ಳಿ. ನಿಯಮಿತವಾಗಿ ನೀರು ಕುಡಿಯಿರಿ. ಚಳಿಯಲ್ಲಿ ಸುತ್ತಾಟ ಮಾಡುವುದು ಬೇಡ ಎಂದು ಅನೇಕ ಸಲಹೆಗಳನ್ನು ನೀಡಿದರು.

ಪ್ರಜ್ಞಾವಂತ ನಾಗರಿಕ ವೇದಿಕೆ ಅಧ್ಯಕ್ಷರಾದ ಕಡಕೋಳ ಜಗದೀಶ್ ,ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್ , ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಕ್ರಪಾಣಿ, ಅರಿವು ಸಂಸ್ಥೆಯ ಅಧ್ಯಕ್ಷರಾದ ಶ್ರೀಕಾಂತ್ ಕಶ್ಯಪ್, ಮೋಹನ್ ಕುಮಾರ್ ಗೌಡ, ಹಾಗೂ ಇನ್ನಿತರರು ಹಾಜರಿದ್ದರು.

——ಮಧುಕುಮಾರ್

Leave a Reply

Your email address will not be published. Required fields are marked *

× How can I help you?