ನಾಗಮಂಗಲ:ತಾಲ್ಲೂಕಿನ ಜವರನಹಳ್ಳಿ ಗ್ರಾಮದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಭೈರವೈಕ್ಯ ಪರಮಪೂಜ್ಯ ಜಗದ್ಗುರು ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಕೃಪಾರ್ಶೀವಾದಗಳೊಂದಿಗೆ ನೂತನವಾಗಿ ನಿರ್ಮಿಸಿರುವ ಶ್ರೀ ಅರಸಮ್ಮದೇವಿ ದೇವಾಲಯದ ಕಟ್ಟಡವನ್ನು ಪರಮ ಪೂಜ್ಯ ಜಗದ್ಗುರು ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ಅಮೃತ ಹಸ್ತದಿಂದ ಲೋಕಾರ್ಪಣೆ ಮಾಡಲಾಯಿತು.
ಗುರುವಾರ ರಾತ್ರಿಯ ಸಮಯದಲ್ಲಿ ದೇವಾಲಯದಲ್ಲಿ ಶ್ರೀ ಅರಸಮ್ಮದೇವಿ ವಿಗ್ರಹಕ್ಕೆ ವಿಶೇಷ ಪೂಜೆ ಸಲ್ಲಿಸಿ ನಂತರ ಅಮ್ಮನವರ ವಿಗ್ರಹವನ್ನು ದೇವಸ್ಥಾನದ ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆ ಹಾಗೂ ದೇವಾಲಯದ ಗೋಪುರಕ್ಕೆ ಚುಂಚಶ್ರೀಗಳು ಕಳಸ ಪ್ರತಿಷ್ಠಾಪನೆಯನ್ನು ನೆರವೇರಿಸಿದರು.
ಶ್ರೀ ಅರಸಮ್ಮದೇವಿ ನೂತನ ದೇವಾಲಯದ ಪ್ರತಿಷ್ಠಾಪನೆ ಮಹೋತ್ಸವ ಸಮಾರಂಭಕ್ಕೆ ಪರಮ ಪೂಜ್ಯ ಜಗದ್ಗುರು ಶ್ರೀ ಡಾ.ನಿರ್ಮಲಾ ನಂದನಾಥ ಮಹಾಸ್ವಾಮೀಜಿಯವರು ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿ ದಿವ್ಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಈ ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಶ್ರೀ ಪುರುಷೋತ್ತಮನಂದನಾಥ ಸ್ವಾಮೀಜಿ,ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ, ಹಾಸನದ ಆದಿಚುಂಚನಗಿರಿ ಶಾಖಾ ಮಠದ ಕಾರ್ಯದರ್ಶಿ ಶ್ರೀ ಶಂಭುನಾಥ ಸ್ವಾಮೀಜಿ, ದಸರಿಘಟ್ಟ ಶ್ರೀ ಆದಿಚುಂಚನಗಿರಿ ಶಾಖಾ ಮಠದ ಕಾರ್ಯದರ್ಶಿ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ಸೇರಿದಂತೆ ಶ್ರೀ ಅರಸಮ್ಮದೇವಿ ಅಮ್ಮನವರ ಭಕ್ತಾದಿಗಳು ಹಾಗೂ ಜವರನಹಳ್ಳಿ ಗ್ರಾಮಸ್ಥರುಗಳು,ಸುತ್ತ ಮುತ್ತಲಿನ ಎಲ್ಲಾ ಗ್ರಾಮಸ್ಥರುಗಳು ಪಾಲ್ಗೊಂಡಿದ್ದರು.
——-——–ರವಿ ಬಿ.ಹೆಚ್