ಕೆ.ಆರ್.ಪೇಟೆ-ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಐದು ಗ್ಯಾರಂಟಿಗಳ ಪೈಕಿ ಗ್ರಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಇನ್ನೂ ಕೂಡ ಕಾಲಾವಕಾಶವನ್ನು ನೀಡಲಾಗಿದೆ.ಹಾಗಾಗಿ ಅರ್ಹ ಬಿ.ಪಿ.ಎಲ್.ಕಾರ್ಡ್ ಹೊಂದಿರುವ ಫಲಾನುಭವಿಗಳು ಕೂಡಲೇ ತಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರಗಳಿಗೆ ತೆರಳಿ ಅರ್ಜಿ ಸಲ್ಲಿಸುವಂತೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲ್ಲೂಕು ಅಧ್ಯಕ್ಷ ಅಗ್ರಹಾರಬಾಚಹಳ್ಳಿ ಎ.ಬಿ.ಕುಮಾರ್ ತಿಳಿಸಿದರು.
ಇಂದು ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಅಧಿಕಾರ ಸ್ವೀಕಾರ ಮಾಡಿ ಮಾತನಾಡಿದರು.
ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವನ್ನು ನೀಡಬಾರದು.ಸಂಪೂರ್ಣ ಉಚಿತವಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.ಹಣ ವಸೂಲಿ ಮಾಡಿದಲ್ಲಿ ಅಂತಹ ಗ್ರಾಮ ಒನ್ ಅಥವಾ ಕರ್ನಾಟಕ ಒನ್ ಸೇವಾ ಸಂಸ್ಥೆಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಇದೆ ಸಂದರ್ಭ ಎಚ್ಚರಿಕೆ ನೀಡಿದರು.
ನನ್ನನ್ನು ಈ ಸ್ಥಾನಕ್ಕೆ ನೇಮಕ ಮಾಡಲು ಕಾರಣೀಕರ್ತರುಗಳಾದ ಸಚಿವರಾದ ಎನ್.ಚಲುವರಾಯಸ್ವಾಮಿ, ಮಾಜಿ ಶಾಸಕರಾದ ಕೆ.ಬಿ.ಚಂದ್ರಶೇಖರ್, ಬಿ.ಪ್ರಕಾಶ್, ಟಿ.ಎ.ಪಿ.ಸಿ.ಎಂ.ಎಸ್ ಅಧ್ಯಕ್ಷ ದೇವರಾಜು, ವಿಜಯ್ ರಾಮೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಐಪನಹಳ್ಳಿ ನಾಗೇಂದ್ರಕುಮಾರ್, ವಿಶ್ವನಾಥ್, ಕೆ.ಪಿ.ಸಿ.ಸಿ ಸದಸ್ಯ ಕಿಕ್ಕೇರಿ ಸುರೇಶ್, ಎಂ.ಡಿ.ಕೃಷ್ಣಮೂರ್ತಿ ಹಾಗೂ ಎಲ್ಲಾ ಕಾಂಗ್ರೆಸ್ ಮುಖಂಡರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದರು.
ನನಗೆ ಕೊಟ್ಟಿರುವ ಜವಾಬ್ದಾರಿಯನ್ನು ಐದು ಗ್ಯಾರಂಟಿಗೆ ಸಂಬoಧಪಟ್ಟ ಇಲಾಖೆಗಳ ಅಧಿಕಾರಿಗಳ ಸಹಕಾರದಿಂದ ಹಾಗೂ ನನ್ನೊಂದಿಗೆ ಸಮಿತಿಯ ಸದಸ್ಯರಾಗಿ ನೇಮಕಗೊಂಡಿರುವ ಎಲ್ಲರ ಸಲಹೆ-ಸೂಚನೆಗಳೊಂದಿಗೆ ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ ಎಂದು ಎ.ಬಿ.ಕುಮಾರ್ ಭರವಸೆ ನೀಡಿದರು.
ನೂತನ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕಚೇರಿಯನ್ನು ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಉದ್ಘಾಟಿಸಿ ಮಾತನಾಡಿ,2023ರ ವಿಧಾನ ಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಮಾತು ನೀಡಿದ್ದೆವು.ಅದರಂತೆ ನುಡಿದಂತೆ ನಡೆಯುತ್ತಿದ್ದೇವೆ.
ಗೃಹಲಕ್ಷ್ಮಿ,ಶಕ್ತಿ ಯೋಜನೆ,ಜ್ಯೋತಿ ಭಾಗ್ಯ,ಅನ್ನ ಭಾಗ್ಯ ,ಯುವನಿಧಿ ಈ ಐದು ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿ ಸ್ಥಿತಿ ಬರುತ್ತದೆ ಎಂಬ ಭ್ರಮೆಯಲ್ಲಿದ್ದ ವಿರೋಧ ಪಕ್ಷಗಳಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ.ಸಿಎಂ.ಸಿದ್ದರಾಮಯ್ಯ, ಡಿ.ಸಿ.ಎಂ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಜನಪರ ಆಡಳಿತ ನಡೆಸುವ ಸರ್ಕಾರ ವಾಗಿದೆ.ಇಂತಹ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲ್ಲೂಕು ಅಧ್ಯಕ್ಷರನ್ನಾಗಿ ಸರಳ,ಸಜ್ಜನ,ಉತ್ತಮ ವ್ಯಕ್ತಿ ಅಗ್ರಹಾರಬಾಚಹಳ್ಳಿ ಎ.ಬಿ. ಕುಮಾರ್ ಅವರನ್ನು ಆಯ್ಕೆ ಮಾಡಿರುವುದು ಸಂತಸದ ಸಂಗತಿಯಾಗಿದೆ ಎಂದು ಅಭಿಪ್ರಾಯಪಟ್ಟರು.
ನೂತನ ಅಧ್ಯಕ್ಷ ಕುಮಾರ್ ಮತ್ತು ಸದಸ್ಯರನ್ನು ಅಭಿನಂದಿಸಿ ಮಾತನಾಡಿದ ಮಾಜಿ ಶಾಸಕರಾದ ಬಿ.ಪ್ರಕಾಶ್, ಗ್ಯಾರಂಟಿ ಯೋಜನೆಗಳಿಗೆ ವರ್ಷಕ್ಕೆ 60ಸಾವಿರ ಕೋಟಿ ರೂಪಾಯಿಗಳನ್ನು ವ್ಯಯ ಮಾಡಲಾಗುತ್ತಿದೆ. ಇದು ನೇರವಾಗಿ ತಾಯಂದಿರಿಗೆ, ನಿರುದ್ಯೋಗಿಗಳಿಗೆ, ಬಿ.ಪಿ.ಎಲ್ ಪಡಿತರ ಕಾರ್ಡ್ ದಾರರಿಗೆ ತಲುಪುತ್ತಿದೆ.ಇದರಿಂದ ಬಡಜನರ ಕೂಲಿ ಕಾರ್ಮಿಕರ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗಿದೆ. ಐದು ವರ್ಷಗಳ ಕಾಲ ಗ್ಯಾರಂಟಿ ಯೋಜನೆಗಳು ಎಲ್ಲಾ ಅರ್ಹ ಫಲಾನುಭವಿಗಳಿಗೆ ತಲುಪುವಂತೆ ನೋಡಿಕೊಳ್ಳಲು ಎ.ಬಿ.ಕುಮಾರ್ ನೇತೃತ್ವದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯನ್ನು ಸರ್ಕಾರವು ರಚನೆ ಮಾಡಿದೆ. ಸಮಿತಿಯ ಎಲ್ಲಾ ಪದಾಧಿಕಾರಿಗಳು ತಮ್ಮ ಜವಾಬ್ದಾರಿ ಅರಿತು ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.
ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾಗಿ ವಳಗೆರೆ ಮೆಣಸ ಕುಮಾರ್, ಚಟ್ಟೇನಹಳ್ಳಿ ಉದೇಶ್, ಸಿಂಗನಹಳ್ಳಿ ಗೋಪಾಲ್, ಬಂಡಿಹೊಳೆ ಯೋಗೇಶ್, ಗೋವಿಂದನಹಳ್ಳಿಕೊಪ್ಪಲು ಶ್ಯಾಮಣ್ಣ, ಬೂಕನಕೆರೆ ಬಿ.ಸಿ.ಮಾಧು, ದೊಡ್ಡತಾರಹಳ್ಳಿ ಸೋಮಶೇಖರ್, ಅಗ್ರಹಾರ ಕೆ.ಎಸ್.ಆರ್.ಟಿ.ಸಿ ಶಿವಣ್ಣ, ಗೊರವಿ ಕುಮಾರ್, ಟೌನ್ ಕನಕದಾಸನಗರ ಶಿವಮ್ಮ, ಸಿಂಧುಘಟ್ಟ ಅಫೀಜ್ ಉಲ್ಲಾ, ಬೊಮ್ಮೇನಹಳ್ಳಿ ಲತಾ, ಬೂಕನಕೆರೆ ರೂಪಾ, ಯಗಚಗುಪ್ಪೆ ಶಿವಲಿಂಗಪ್ಪ, ಹಾಗೂ ಸದಸ್ಯ ಕಾರ್ಯದರ್ಶಿಯಾಗಿ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಸುಷ್ಮಾ ಅವರು ಸಮಿತಿಯಲ್ಲಿ ಇದ್ದಾರೆ.
ಅಧಿಕಾರ ಸ್ವೀಕಾರ ಸಂದರ್ಭದಲ್ಲಿ ತಾಲ್ಲೂಕು ಕುವೆಂಪು ಟ್ರಸ್ಟ್ ಅಧ್ಯಕ್ಷ ಕೆಬಿಸಿ ಮಂಜು, ಅಗ್ರಹಾರಬಾಚಹಳ್ಳಿ ಗ್ರಾ.ಪಂ.ಅಧ್ಯಕ್ಷ ದಿವಿಕುಮಾರ್, ಉಪಾಧ್ಯಕ್ಷೆ ಸುನಿತಾ ದ್ಯಾವಯ್ಯ, ಸದಸ್ಯರಾದ ಆರ್.ಶ್ರೀನಿವಾಸ್, ಸಿ.ಆರ್.ಪಿ.ಕುಮಾರ್, ರೇವತಿ ಹರೀಶ್, ಎ.ಸಿ.ಮುರುಳಿ, ಗ್ರಾ.ಪಂ.ಮಾಜಿ ಅಧ್ಯಕ್ಷ ಮೆಣಸ ನಾಗೇಂದ್ರ, ಮಾಜಿ ಗ್ರಾ.ಪಂ.ಉಪಾಧ್ಯಕ್ಷ ಅರೆಬೊಪ್ಪನಹಳ್ಳಿ ನಿವೃತ್ತ ಬಿಇಓ ಎ.ಬಿ.ಪುಟ್ಟಸ್ವಾಮೀಗೌಡ, ನಿವೃತ್ತ ಪ್ರಾಂಶುಪಾಲ ಡಿ.ರಾಜೇಗೌಡ, ವಿ.ಎಸ್.ಎಸ್.ಎನ್.ನಿರ್ದೇಶಕ ಎ.ಬಿ.ಮಹೇಂದ್ರ, ನಿವೃತ್ತ ಮುಖ್ಯ ಶಿಕ್ಷಕ ಬಿ.ಹೆಚ್.ಮಂಜೇಗೌಡ, ಛೇರ್ಮನ್ ರಾಮಚಂದ್ರೇಗೌಡ, ನಾಗೇಗೌಡ, ಸೆಕ್ರೆಟರಿ ಪುಟ್ಟಸ್ವಾಮೀಗೌಡ, ಯಜಮಾನ್ ಬೋರೇಗೌಡ, ಮಹದೇವೇಗೌಡ, ಎ.ಕೆ.ಸುನಿಲ್, ಮಿಲ್ ಪುಟ್ಟೇಗೌಡ, ಡೈರಿ ಪುಟ್ಟೇಗೌಡ, ಎ.ಸಿ.ಅಭಿ, ರೂಪೇಶಾಚಾರ್, ವಾಟರ್ ಮ್ಯಾನ್ ಕುಮಾರ್, ಚಿಕ್ಕೋಸಹಳ್ಳಿ ಶ್ರೀನಿವಾಸ್, ಕಾಲೋನಿ ದೇವರಾಜು, ತಾಲ್ಲೂಕು ಜಯಕರ್ನಾಟಕ ಅಧ್ಯಕ್ಷ ಹೆಚ್.ಆರ್.ಸೋಮಶೇಖರ್, ಕಾರ್ಯಾಧ್ಯಕ್ಷ ಕೆರೆಕೋಡಿ ಆನಂದ್, ಕರವೇ ಕಸಬಾ ಹೋಬಳಿ ಘಟಕದ ಅಧ್ಯಕ್ಷ ಕೊಮ್ಮೇನಹಳ್ಳಿ ಅನಿಲ್‌ಗೌಡ, ಸುನಿಲ್‌ಗೌಡ ಸೇರಿದಂತೆ ನೂರಾರು ಮಂದಿ ಭಾಗವಹಿಸಿ ಅಭಿನಂದಿಸಿದರು.
———–ಶ್ರೀನಿವಾಸ್ ಕೆ.ಆರ್ ಪೇಟೆ