ಬೆಂಗಳೂರು-ಮಂಡ್ಯದಲ್ಲಿ ಡಿಸೆಂಬರ್ 20 ರಿಂದ 22 ರವರೆಗೆ ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿಯವರು ಇಂದು ಅಧಿಕೃತವಾಗಿ ಆಹ್ವಾನಿಸಿದರು.
ಮಂಡ್ಯ ಕ್ಷೇತ್ರದ ಶಾಸಕ ರವಿಕುಮಾರ್ ಗಣಿಗ,ಶ್ರೀರಂಗಪಟ್ಟಣ ಶಾಸಕ ರಮೇಶ್ ಬಂಡಿಸಿದ್ದೇಗೌಡ,ವಿಧಾನಪರಿಷತ್ ಸದಸ್ಯ ಮಧು ಮಾದೇಗೌಡ,ಕನ್ನಡ ಸಾಹಿತ್ಯ ಷರಿಷತ್ ಅಧ್ಯಕ್ಷ ಮಹೇಶ್ ಜೋಶಿ,ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್ ಸೇರಿದಂತೆ ಇತರ ಗಣ್ಯರು ಹಾಜರಿದ್ದರು.
——–—ರವಿ ಬಿ.ಹೆಚ್