ತುಮಕೂರು-ಮಾಜಿ ಶಾಸಕ ಆರ್.ನಾರಾಯಣ್ ನಿಧನ-ಗಣ್ಯರಿಂದ ಸಂತಾಪ

ತುಮಕೂರು-ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಶಾಸಕರಾದ ಆರ್.ನಾರಾಯಣ್ (82) ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿಂದು ಬೆಳಿಗ್ಗೆ ನಿಧನರಾದರು.

ಮಾಜಿ ಶಾಸಕ ನಾರಾಯಣ್ ಅವರು ವಯೋಸಹಜ ಕಾಯಿಲೆಗೆ ತುತ್ತಾಗಿ ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯು ಸಿರೆಳೆದಿದ್ದಾರೆ.

ತುಮಕೂರು ತಾಲ್ಲೂಕು ಬೆಳ್ಳಾವಿ ವಿಧಾನಸಭಾ ಕ್ಷೇತ್ರದಿಂದ ಸತತವಾಗಿ ಮೂರು ಬಾರಿ ಶಾಸಕರಾಗಿದ್ದ ಆರ್. ನಾರಾಯಣ್ ಅವರು ಯೂತ್ ಕಾಂಗ್ರೆಸ್ ಅಧ್ಯಕ್ಷ ಹುದ್ದೆ ಸೇರಿದಂತೆ ಕಾಂಗ್ರೆಸ್ ಪಕ್ಷದ ವಿವಿಧ ಘಟಕಗಳಲ್ಲಿ ಕಾರ್ಯನಿರ್ವಹಿಸಿದ್ದರು.

1986 ರಲ್ಲಿ ಬೆಳ್ಳಾವಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿ ಮೊದಲ ಬಾರಿ ವಿಧಾನಸಭೆ ಪ್ರವೇಶಿಸಿದ ಆರ್.ನಾರಾಯಣ್ ಅವರು ಸತತವಾಗಿ 1994ರ ಚುನಾವಣೆ ಹಾಗೂ 1999ರ ವಿಧಾನಸಭಾ ಚುನಾವಣೆಯಲ್ಲೂ ಜಯಗಳಿಸಿ ಶಾಸಕರಾಗಿದ್ದರು.

ಎಸ್.ಎಂ. ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ನಾಟಕ ಹೌಸಿಂಗ್ ಬೋರ್ಡ್ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.ಮಾಜಿ ಮುಖ್ಯಮಂತ್ರಿ ದೇವರಾಜ ಅರಸುರವರೊಂದಿಗೆ ಉತ್ತಮ ಒಡನಾಟ ಹೊಂದಿದ್ದರು.

ಮಾಜಿ ಶಾಸಕ ಆರ್.ನಾರಾಯಣ್‌ರವರ ನಿಧನಕ್ಕೆ ಕೇಂದ್ರ ರೈಲ್ವೇ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ವಿ.ಸೋಮಣ್ಣ,ಶಾಸಕರುಗಳಾದ ಎಸ್.ಆರ್.ಶ್ರೀನಿವಾಸ್, ಜಿ.ಬಿ.ಜ್ಯೋತಿ ಗಣೇಶ್,ಕೆಪಿಸಿಸಿ ಮುಖಂಡರಾದ ಇಕ್ಬಾಲ್ ಅಹಮದ್,ಮುರುಳೀಧರಹಾಲಪ್ಪ, ಮಾಜಿ ಶಾಸಕರುಗಳಾದ ಡಾ,ಎಸ್.ರಫೀಕ್ ಅಹಮದ್, ಮುಖಂಡರುಗಳಾದ ಟಿ.ಆರ್.ನಾಗರಾಜು,ತುಮಕೂರು ವೀರಶೈವ ಸಹಕಾರ ಬ್ಯಾಂಕ್ ಅಧ್ಯಕ್ಷರಾದ ಕೆ.ಜೆ.ರುದ್ರಪ್ಪ,ಉಪಾಧ್ಯಕ್ಷರಾದ ಹೆಬ್ಬಾಕಮಲ್ಲಿಕಾರ್ಜುನಯ್ಯ,ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಹೆಚ್.ಕೆಂಪರಾಜಯ್ಯ,ಪ್ರಧಾನ ಕಾರ್ಯದರ್ಶಿ ಆರ್.ತಿಪ್ಪೇಸ್ವಾಮಿ,ಅಹಿಂದ ಮುಖoಡ ಕೆಂಪರಾಜು,ಜಿಲ್ಲಾ ಜೆಡಿಎಸ್ ಅಧ್ಯಕ್ಷರಾದ ಆರ್.ಸಿ.ಆಂಜಿನಪ್ಪ,ಜಿಲ್ಲಾ ಕಾಂಗ್ರೆಸ್ ವಕ್ತಾರರಾದ ಕೆ.ಎಂ.ಸುಜಾತ,ಮಾಧ್ಯಮ ಸoಯೋಜಕರಾದ ತೋವಿನಕೆರೆಪುಟ್ಟರಾಜು, ಸೇರಿದಂತೆ ವಿವಿಧ ರಾಜಕೀಯ ಮುಖಂಡರುಗಳು ಅಂತಿಮ ದರ್ಶನ ಪಡೆದು,ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

—————–ಕೆ.ಬಿ ಚಂದ್ರಚೂಡ

Leave a Reply

Your email address will not be published. Required fields are marked *

× How can I help you?