ತುಮಕೂರು:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಿಶ್ವಭಾರತಿ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ತುಮಕೂರು:ಗ್ರಾಮಾಂತರ ತಾಲೂಕಿನ ಬೆಳ್ಳಾವಿ ವಲಯದ ಮಲ್ಲಸಂದ್ರ ಗ್ರಾಮದ ಶ್ರೀ ವಿಶ್ವ ಭಾರತಿ ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಹಮ್ಮಿಕೊಳ್ಳಲಾ ಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಾವಿದ್ ಅಹಮದ್ ಮತ್ತು ಕಾಲೇಜಿನ ಪ್ರಾಂಶುಪಾಲರೂ ಹಾಗೂ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ಸತೀಶ್‌ರವರು ವಹಿಸಿದ್ದರು.

ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ಕೆ.ಬಿ.ಚಂದ್ರಚೂಡ ರವರು ಕಾರ್ಯಕ್ರಮವನ್ನು ಉದ್ಘಾಟನೆ ನೆರವೇರಿಸಿ ಮಾತನಾಡುತ್ತಾ, ಹರಿಹರಿಯದ ಯುವಜನತೆಯು ದುಶ್ಚಟ ದುರಭ್ಯಾಸಗಳಿಗೆ ಅತಿ ಹೆಚ್ಚು ಬಲಿಯಾಗುತ್ತಿದ್ದು ಸಮಾಜದಲ್ಲಿ ದುಷ್ಪರಿಣಾಮಗಳು ಉಂಟಾಗುತ್ತಿವೆ.ಇoತಹ ಸಮಸ್ಯೆಗಳನ್ನು ತಪ್ಪಿಸಲು ಯುವಜನತೆಗೆ ಅರಿವು ಮೂಡಿಸುವುದು ಅತ್ಯವಶ್ಯಕವಾಗಿದೆ ಈ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ರಾಜ್ಯಾದ್ಯಂತ ಶಾಲಾ- ಕಾಲೇಜುಗಳಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಎಲ್ಲ ಯುವಜನತೆಗೆ ಅರಿವು ಮೂಡಿಸುತ್ತಿದೆ. ವಿದ್ಯಾರ್ಥಿಗಳು ಗಾಂಜಾ,ಅಫೀಮು,ಮತ್ತು ಬರುವ ಇಂಜಕ್ಷನ್,ಬೀಡಿ,ಸಿಗರೇಟು,ಮಧ್ಯಪಾನದoತಹ ದುಶ್ಚಟಗಳಿಂದ ದೂರಿವಿದ್ದು ಉತ್ತಮ ವಿದ್ಯಾಭ್ಯಾಸವನ್ನು ಪಡೆದು ಜೀವನದಲ್ಲಿ ಸಾಧಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಪ್ರಾಸ್ತವಿಕವಾಗಿ ಮಾತನಾಡಿದ ವಲಯದ ಮೇಲ್ವಿಚಾರಕರ ಸುದರ್ಶನ್.ವೈ.ಎಂ ರವರು, ರಾಜ್ಯಾದ್ಯಂತ ಯುವ ಜನತೆಯಲ್ಲಿ ದುಶ್ಚಟ ದುರಭ್ಯಾಸಗಳ ಬಗ್ಗೆ ಅರಿವು ಮೂಡಿಸುತ್ತಾ,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಲವಾರು ಕಾರ್ಯಕ್ರಮಗಳು ಆಯೋಜನೆ ಮಾಡುತ್ತಾ ಬಂದಿದೆ. ಅದರಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಈಗಿನ ಯುವ ಪೀಳಿಗೆಗೆ ಅತ್ಯವಶ್ಯಕವಾಗಿ ಬೇಕಾಗಿರುತ್ತದೆ ಎಂದು ತಿಳಿಸಿದರು.

ಶಿಕ್ಷಕರಾದ ಕುಮಾರ್ ರವರು ಸ್ವಾಗತಿಸಿದರು,ಹೇಮಲತಾರವರು ವಂದಿಸಿದರು.ಕಾರ್ಯಕ್ರಮದಲ್ಲಿ ಪ್ರೌಢಶಾಲೆ ಮತ್ತು ಕಾಲೇಜಿನ ಸಿಬ್ಬಂದಿ ವರ್ಗದವರು,ಕಾರ್ಯಕ್ಷೇತ್ರದ ಸೇವಾಪ್ರತಿನಿಧಿಯಾಗಿರುವ ಶ್ರೀಮತಿ ಪುಷ್ಪಲತಾ
ಮತ್ತು ಶಾಲಾ ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

——————ಚಂದ್ರಚೂಡ ಕೆ.ಬಿ

Leave a Reply

Your email address will not be published. Required fields are marked *

× How can I help you?