ತುಮಕೂರು:ನಗರದ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಪಕ್ಷದ ಮುಖಂಡರು ಸೋಮವಾರ ಮಾಜಿ ಮುಖ್ಯಮಂತ್ರಿ,ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟು ಹಬ್ಬ ಆಚರಿಸಿ ಸಂಭ್ರಮಿಸಿದರು.
ಕೇoದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಸೋಮವಾರ 65ನೇ ವಸಂತಕ್ಕೆ ಕಾಲಿಟ್ಟರು.ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರುಗಳು ಪಕ್ಷದ ಕಚೇರಿಯಲ್ಲಿ ಬೃಹತ್ ಗಾತ್ರದ ಕೇಕ್ ಕತ್ತರಿಸಿ,ಸಿಹಿ ಹಂಚಿ ತಮ್ಮ ನಾಯಕನ ಜನ್ಮದಿನವನ್ನು ಸಡಗರದಿಂದ ಆಚರಿಸಿದರು.
ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಸಿ.ಆಂಜನಪ್ಪ, ಕಾರ್ಯಾಧ್ಯಕ್ಷ ಟಿ.ಆರ್.ನಾಗರಾಜು,ಸೇವಾದಳ ಘಟಕ ಅಧ್ಯಕ್ಷ ಕೆಂಪರಾಜು, ಮುಖಂಡರಾದ ಟಿ.ಎಲ್.ಕುoಭಯ್ಯ,ಗಣೇಶ್,ರೇಖಾರಾಜು ಮೊದಲಾದವರು ಭಾಗವಹಿಸಿದ್ದರು.
———-ಚಂದ್ರಚೂಡ ಕೆ.ಬಿ