ಹಾಸನ:-ಹೋರಾಟಗಾರ ಬಾಳ್ಳುಗೋಪಾಲ್‍ರವರಿಗೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸನ್ಮಾನಕ್ಕೆ ಆಹ್ವಾನ

ಹಾಸನ:ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡ ಪರ ಹೋರಾಟಗಾರ ಬಾಳ್ಳುಗೋಪಾಲ್ ಅವರನ್ನು ಸನ್ಮಾನಿಸಲು ಆಯ್ಕೆಮಾಡಲಾಗಿದೆ.

ಬಾಳ್ಳುಗೋಪಾಲ್ ಅವರು ಕಳೆದ ಮೂರು ದಶಕಗಳಿಂದಲೂ ಕನ್ನಡಪರ ಹೋರಾಟಗಳಲ್ಲಿ ಸಕ್ರಿಯರಾಗಿದ್ದಾರೆ. ಹಾಸನ ಜಿಲ್ಲಾ ಡಾ|| ರಾಜ್ ಕುಮಾರ್ ಅಭಿಮಾನಿಗಳ ಸಂಘದ ಗೌರವಾಧ್ಯಕ್ಷರಾಗಿ,ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿರುವ ಬಾಳ್ಳುಗೋಪಾಲ್ ಅವರಿಗೆ ಸಾಹಿತ್ಯ ಸಮ್ಮೇಳನದ ಕೊನೆಯ ದಿನ ಡಿ.22 ರಂದು ಮಧ್ಯಾಹ್ನ 2 ಗಂಟೆಗೆ ಸನ್ಮಾನಿಸಲು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಮಹೇಶ್ ಜೋಶಿ ಅವರು ಅಧಿಕೃತವಾಗಿ ಆಹ್ವಾನಿಸಿದ್ದಾರೆ.

Leave a Reply

Your email address will not be published. Required fields are marked *

× How can I help you?