ಬೆಳಗಾವಿ-ಬಿ.ಜೆ.ಪಿ ಎಂ.ಎಲ್.ಸಿ ಸಿ.ಟಿ ರವಿ ಬಂಧನ-ಖಾನಾಪುರ ಠಾಣೆಗೆ ಕರೆದೊಯ್ದ ಪೊಲೀಸರು

ಬೆಳಗಾವಿ-ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ವಿಧಾನ ಪರಿಷತ್ ನಲ್ಲಿ ಅಶ್ಲೀಲ ಪದ ಬಳಕೆ ಮಾಡಿದ ಆರೋಪದ ಮೇಲೆ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದ್ದು,ಬಂಧನ ಆಗಿದೆ.

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನೀಡಿದ್ದ ದೂರಿನ್ವಯ ಪ್ರಕರಣ ದಾಖಲಿಸಲಾಗಿದೆ.ಕೇಂದ್ರ ಗೃಹ ಸಚಿವ ಅಮಿತ್ ಶಾ, ಅಂಬೇಡ್ಕರ್ ಕುರಿತು ನೀಡಿದ್ದಾರೆ ಎನ್ನಲಾದ ಹೇಳಿಕೆ ಸಂಬಂಧ ವಿಧಾನ ಪರಿಷತ್ ನಲ್ಲಿ ಗುರುವಾರ ಬೆಳಗ್ಗೆ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಸಿ.ಟಿ.ರವಿ ಲಕ್ಷ್ಮೀ ಹೆಬ್ಬಾಳಕರ್ ಕುರಿತು ಅವಹೇಳನಕಾರಿ ಪದಬಳಸಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಪ್ರಕರಣದ ಸಂಬಂಧ ಕಾಂಗ್ರೆಸ್ ಮುಖಂಡರು ಈಗಾಗಲೇ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೂ ದೂರು ನೀಡಿದ್ದಾರೆ.ಸಿ.ಟಿ.ರವಿ ಅವರನ್ನು ಸದನದಿಂದ ಅಮಾನತುಗೊಳಿಸಬೇಕು.ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿರುವುದು ಕ್ರಿಮಿನಲ್ ಅಪರಾಧ ಮತ್ತು ಲೈಂಗಿಕ ದೌರ್ಜನ್ಯಕ್ಕೆ ಸಮನಾದುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

Leave a Reply

Your email address will not be published. Required fields are marked *

× How can I help you?