ಮಂಡ್ಯ-ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ಗುರುವಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ನೀಡಿರುವ ಆಕ್ಷೇಪಾರ್ಹ ಹೇಳಿಕೆಯನ್ನು ಎಪಿಎಂಸಿ ಮಾಜಿ ಅಧ್ಯಕ್ಷೆ ಹಾಗೂ ಸಚಿವರ ಆಪ್ತೆಯಾದ ಪಲ್ಲವಿ ಖಂಡಿಸಿದ್ದಾರೆ.
ಈ ಸಂಬಂಧ ಪತ್ರಿಕಾ ಹೇಳಿಕೆಯೊಂದನ್ನು ಬಿಡುಗಡೆಗೊಳಿಸಿರುವ ಅವರು,ವಿಧಾನ ಪರಿಷತ್‌ನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ವಿವಾದಾತ್ಮಕ ಹೇಳಿಕೆ ಬಗ್ಗೆ ಸದನದಲ್ಲಿ ಹೋರಾಟ ನಡೆಸುತ್ತಿದ್ದ ವೇಳೆ ಲಕ್ಷ್ಮಿ ಅವರ ವಿರುದ್ಧ ಬಿಜೆಪಿ ಹಿರಿಯ ಮುಖಂಡರು ಎನಿಸಿರುವ ಸಿ.ಟಿ.ರವಿ ಕೊಟ್ಟಿರುವ ಲಘು ಹೇಳಿಕೆ ಮಹಿಳಾ ಕುಲಕ್ಕೆ ಅಪಮಾನ ಎಂದು ಟೀಕಿಸಿದ್ದಾರೆ.
ಬಿಜೆಪಿ ಅವರಿಗೆ ಈ ಹಿಂದಿನಿoದಲೂ ಮಹಿಳೆಯರ ಬಗ್ಗೆ ಗೌರವವಿಲ್ಲ. ಇದು ಹಲವು ಸಂದರ್ಭದಲ್ಲಿ ಸಾಬೀತಾಗಿದ್ದು, ಇದೀಗ ಮತ್ತೊಮ್ಮೆ ರುಜೂವಾತಾಗಿದೆ. ಸಭಾಪತಿಗಳು ಈ ಬಗ್ಗೆ ಪರಿಶೀಲನೆ ಸಹ ನಡೆಸಿದ್ದು, ಸಿ.ಟಿ.ರವಿ ಅವರ ವಿರುದ್ಧ ಸೂಕ್ತ ರೀತಿಯ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ತಾನೊಬ್ಬ ಮಹಾನ್ ಮೇಧಾವಿ, ವಾಗ್ಮಿ ಎನ್ನುವ ಸಿ.ಟಿ.ರವಿ, ಸಚಿವೆಯೂ ಆಗಿರುವ ಒಬ್ಬ ಮಹಿಳೆ ಬಗ್ಗೆ ಈ ರೀತಿ ಮಾತನಾಡುವುದು ಸರಿಯಲ್ಲ. ಈ ಬಗ್ಗೆ ಪಕ್ಷಾತೀತವಾಗಿ ಖಂಡನೆಯಾಗಬೇಕು ಎಂದು ಕಾoಗ್ರೆಸ್ ಮಹಿಳಾ ಮುಖಂಡೆ ಪಲ್ಲವಿ ಆಗ್ರಹಿಸಿದ್ದಾರೆ.