ತುಮಕೂರು-ಮನುವಾದಿ ಮೇಲ್ಜಾತಿಗೆ ಸೇರಿದ ಅಮಿತ್ ಶಾ ಮಂತ್ರಿಯಾಗಿ ಮುಂದುವರಿಯಲು ಯಾವುದೇ ನೈತಿಕತೆ ಇಲ್ಲ-ಹನುಮಂತರಾಯಪ್ಪ

ತುಮಕೂರು-ಡಾ. ಬಿ.ಆರ್.ಅಂಬೇಡ್ಕರ್‌ರವರ ಬಗ್ಗೆ ಅವಹೇಳನಕಾರಿಯಾಗಿ ಭಾಷಣ ಮಾಡಿದ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ವಿರುದ್ಧ ಬಹುಜನ ಸಮಾಜವಾದಿ ಪಕ್ಷ (ಬಿ.ಎಸ್.ಪಿ) ವತಿಯಿಂದ ಇoದು ನಗರದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.

ಪ್ರತಿಭಟನೆಯನ್ನುದ್ದೇಶಿಸಿ ಪ್ರಧಾನ ಕಾರ್ಯದರ್ಶಿ ಹನುಮಂತರಾಯಪ್ಪ ಮಾತನಾಡಿ, ಸಂಸತ್ ಅಧಿವೇಶನದಲ್ಲಿ ಭಾರತ ಸಂವಿಧಾನಕ್ಕೆ 75ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ನಡೆದ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಹೆಸರನ್ನು ಪದೇ ಪದೇ ಉಚ್ಛರಿಸುವ ಬದಲು ದೇವರನ್ನು ಸ್ಮರಿಸಿದರೆ ಏಳೇಳು ಜನ್ಮಗಳ ಸ್ವರ್ಗ ದೊರೆಯುತ್ತಿತ್ತು ಎಂದು ಮಾತನಾಡಿದ್ದಾರೆ. ಇದು ಅಂಬೇಡ್ಕರ್ ಅವರನ್ನು ಅವಮಾನಿಸದಲ್ಲದೇ ಅಂಬೇಡ್ಕರ್‌ರವರ ಮೇಲೆ ನಾವಿಟ್ಟಿರುವ ನಂಬಿಕೆಗೆ ದ್ರೋಹ ಮಾಡಿದಂತೆ ಎಂದರು.

ಮುoದುವರೆದು ಮಾತನಾಡುತ್ತಾ ಪರಮಪೂಜ್ಯ ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಅವರು ರಚಿಸಿದ ಸಂವಿಧಾನದ ಮೇಲಿರುವ ಅಸಹನೆಯ ಪ್ರತೀಕವಾಗಿದೆ.ಸಾವಿರಾರು ವರ್ಷಗಳಿಂದ ಜಾತಿ ಆಧಾರದ ಮೇಲೆ ಈ ದೇಶದ ಬಹು ಸಂಖ್ಯಾತರಾದ ಎಸ್ಸಿ,ಎಸ್ಟಿ, ಒಬಿಸಿ, ಮತ್ತು ಧಾರ್ಮಿಕ ಅಲ್ಪಸಂಖ್ಯಾತರಿಗೆ ವಿದ್ಯೆ, ಆಸ್ತಿ, ಅಧಿಕಾರಗಳನ್ನು ನಿರಾಕರಿಸಿಕೊಂಡು ಬಂದ ಮನುವಾದಿ ಮೇಲ್ಜಾತಿಗೆ ಸೇರಿದ ಅಮಿತ್ ಶಾ ಸೇರಿದಂತೆ ಬಿಜೆಪಿ, ಆರ್.ಎಸ್.ಎಸ್. ನವರಿಗೆ ಸ್ವಾತಂತ್ರ್ಯ ಸಮಾನತೆಯ ಆಶಯಗಳನ್ನು ಎಂದೂ ಕೂಡ ಒಪ್ಪಿಕೊಳ್ಳಲು ಹಾಗೂ ಸಹಿಸಿಕೊಳ್ಳಲು ಇವರಿಗೆ ಆಗುವುದಿಲ್ಲ. ಆ ಕಾರಣಕ್ಕಾಗಿಯೇ ಅವಕಾಶ ಸಿಕ್ಕಿದಾಗಲೆಲ್ಲ ಬಾಬಾ ಸಾಹೇಬ್ ಅಂಬೇಡ್ಕರ್, ಸoವಿಧಾನ, ಮೀಸಲಾತಿಯನ್ನು ಅವಹೇಳನಕಾರಿಯಾಗಿ ಮಾತನಾಡುವುದನ್ನು ರೂಢಿಗತ ಮಾಡಿಕೊಂಡಿದ್ದಾರೆ.

ಇಂಥ ಮನುವಾದಿ ಮತ್ತು ಜಾತಿವಾದಿ ವ್ಯಕ್ತಿಗಳು ಸಂವಿಧಾನದ ಆಧಾರದ ಮೇಲೆ ರಚನೆಯಾಗಿರುವ ಸರ್ಕಾರದಲ್ಲಿ ಮಂತ್ರಿಯಾಗಿ ಮುಂದುವರಿಯಲು ಯಾವುದೇ ನೈತಿಕತೆ ಇಲ್ಲ.ಆದ್ದರಿಂದ ಬಾದಾ ಸಾಹೇಬ್ ಅಂಬೇಡ್ಕರ್ ಮತ್ತು ಸಂವಿಧಾನ ವಿರೋಧಿ ಮನಸ್ಥಿತಿ ಇರುವ ಕೇಂದ್ರ ಗೃಹ ಸಚಿವ ಅಮಿತ್ ಷಾರನ್ನು ತಕ್ಷಣ ವಜಾ ಗೊಳಿಸಬೇಕೆಂದು ಬಹುಜನ ಸಮಾಜ ಪಾರ್ಟಿ ತುಮಕೂರು ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿಗಳ ಮುಖೇನ ರಾಷ್ಟ್ರಪತಿಗಳಿಗೆ ಮನವಿಯನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ರುದ್ರಪ್ಪ ವಕೀಲರು, ಶಿವಕುಮಾರ್,ಸುಧಾಕರ್, ಗೋಪಾಲ್, ಹನುಮಂತರಾಯ, ಅಂಜನ್ ಮೂರ್ತಿ,
ಅಂಬಣ್ಣ ಕುಕನೂರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

× How can I help you?