ಕೆ.ಆರ್.ಪೇಟೆ-ಇದೆ ತಿಂಗಳ .30ರಂದು ಸೋಮವಾರ ಬೆಳಿಗ್ಗೆ 10 ಗಂಟೆಗೆ ಕೆ.ಆರ್.ಪೇಟೆ ತಾಲೂಕಿನ ಬೂಕನಕೆರೆ ಹೋಬಳಿಯ ಕಾಪನಹಳ್ಳಿ ಶ್ರದ್ಧಾ ಭಕ್ತಿ ಕೇಂದ್ರವಾಗಿರುವ ಗವಿಮಠದ ಶ್ರೀ ಸ್ವತಂತ್ರ ಸಿದ್ಧಲಿಂಗೇಶ್ವರ ದೇವಾಲಯದ ಆವರಣದಲ್ಲಿ ಪರಮಪೂಜ್ಯ ಲಿಂಗೈಕ್ಯ ಶ್ರೀ ಮ.ನಿ.ಪ್ರ.ಸ್ವ ಚಂದ್ರಶೇಖರ ಸ್ವಾಮೀಜಿ ರವರ 15ನೇ ವರ್ಷದ ಪುಣ್ಯಸ್ಮರಣೆ ಹಾಗೂ ಅಮಾವಾಸ್ಯೆ ವಿಶೇಷ ಪೂಜಾ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು ಮಠದ ಸದ್ಭಕ್ತರು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಕಾಪನಹಳ್ಳಿ ಗವಿಮಠದ ಪೀಠಾಧ್ಯಕ್ಷರಾದ ಶ್ರೀ ಸ್ವತಂತ್ರ ಚನ್ನವೀರಯ್ಯ ಸ್ವಾಮೀಜಿ ಮನವಿ ಮಾಡಿಕೊಂಡರು.
ಗವಿಮಠದ ಆವರಣದಲ್ಲಿ ಕಾರ್ಯಕ್ರಮದ ಕರಪತ್ರ ಬಿಡುಗಡೆಗೊಳಿಸಿ ಮಾತನಾಡಿದ ಅವರು,52 ವರ್ಷಗಳಿಂದ ಮಠದ ಏಳಿಗೆಗಾಗಿ ತನ್ನ ಸರ್ವಸ್ವವನ್ನೇ ತ್ಯಾಗ ಮಾಡಿ ಮಠದ ಸದೃಢತೆಗೆ ಶ್ರಮಿಸಿದ ಲಿಂಗೈಕ್ಯವಾಗಿರುವ ಶ್ರೀ.ಚಂದ್ರಶೇಖರ ಮಹಾ ಸ್ವಾಮೀಜಿಗಳ 15ನೇ ವರ್ಷದ ಪುಣ್ಯ ಸ್ಮರಣೆ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಲಿರುವ ಬೆಂಗಳೂರು ಕೆಂಗೇರಿ ಏಕದಳ ಬಿಲ್ವ ಬಂಡೆಮಠದ ಶ್ರೀ ಮ.ನಿ.ಪ್ರ.ಸ್ವ.ಶ್ರೀ ಸಚ್ಚಿದಾನಂದ ಮಹಾಸ್ವಾಮಿಜಿಗಳ ದಿವ್ಯ ಪಾದಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮ ನೆರವೇರಿಸಲಾಗುತ್ತದೆ. ಈ ಅರ್ಥಪೂರ್ಣ ಕಾರ್ಯಕ್ರಮಕ್ಕೆ ಮಠದ ಸದ್ಭಕ್ತರು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಸಂಪೂರ್ಣವಾಗಿ ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಜಿಲ್ಲಾ ಕಾರ್ಯದರ್ಶಿ ಕಟ್ಟಹಳ್ಳಿ ಗಂಗಾಧರ್, ಮಾಜಿ ಕಾರ್ಯದರ್ಶಿ ಎಸ್.ಮಹದೇಶ್,ಸೋಮನಾಥಪುರ ಗ್ರಾ.ಪಂ ಸದಸ್ಯ ಎಸ್.ಡಿ ರಾಜಣ್ಣ,ವಿಠಲಪುರ ಪಟೇಲ್ ಶಂಕರ್, ಕಟ್ಟಹಳ್ಳಿ ಪ್ರಕಾಶ್, ನಾಟನಹಳ್ಳಿ ಶ್ರೀಕಂಠೇಗೌಡ,ಮಹೇoದ್ರಗೌಡ, ಹೇಮಂತ್,ಕಾಪನಹಳ್ಳಿ ಅಮಾವಾಸೆಗೌಡ ,ಆರ್ ಟಿ ಓ ಮಲ್ಲಿಕಾರ್ಜುನ್ ಅಭಿಮಾನಿ ಬಳಗದ ಅಧ್ಯಕ್ಷ ಗಂಜೀಗೆರೆ ಮಹೇಶ್,ಶ್ರೀ ಧರ್ಮಸ್ಥಳ ಸಂಘದ ಮೇಲ್ವಿಚಾರಕಿ ಗುಣಶ್ರೀ,ಸೇವಾ ಪ್ರತಿನಿಧಿಗಳಾದ ಸುನಿತ, ಪೂರ್ಣಿಮಾ, ಶಶಿಕಲಾ, ನೇತ್ರಾವತಿ,ಅರ್ಚಕ ಹೇಮಂತ್ ಕುಮಾರ್ ಸೇರಿದಂತೆ ಉಪಸ್ಥಿತರಿದ್ದರು.
——–ಶ್ರೀನಿವಾಸ್ ಆರ್